ಬೆಂಗಳೂರು : ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪಕ್ಕೆ ಸಚಿವರ ಗೈರು ಹಾಜರಾದ ಹಿನ್ನಲೆ, ಸದಸ್ಯರ ಗೈರು ಹಾಜರಿಗೆ ಸದನದಲ್ಲಿ ಸ್ವೀಕರ್ ಕಾಗೇರಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಅನಾರೋಗ್ಯ ಕಾರಣದಿಂದಾಗಿ ಆರೋಗ್ಯ ಸಚಿವ ಸುಧಾಕರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸುಧಾಕರ್ ಅನುಪಸ್ಥಿತಿಯಲ್ಲಿ ಬೇರೆ ಸಚಿವರಿಂದ ಮಾಹಿತಿ ನೀಡಿದ್ದರು . ಬೇರೆ ಸಚಿವರಿಂದ ಕಾಟಚಾರಕ್ಕೆ ಉತ್ತರ ಬೇಡವೆಂದು ಸದನದಲ್ಲಿ ಗದ್ದಲ ಸೃಷ್ಟಿಸಿದ್ದಾರೆ. ಬಳಿಕ ವಿರೋಧ ಪಕ್ಷದ ಸದಸ್ಯರಿಂದ ಆಕ್ಷೇಪ ವ್ಯಕ್ತಪಡಿಸಲಾಗಿದೆ ಎಂಬ ಮಾಹಿತಿ ತಿಳಿದಿದೆ