ಹುಬ್ಬಳ್ಳಿ: ನಗರದಲ್ಲಿ ನಡೆದಂತ ಕಾರ್ಪೊರೇಟರ್ ಪುತ್ರಿ ನೇಹಾ ಹೀರೆಮಠ ಕೊಲೆ ಖಂಡಿಸಿ ನಾಳೆ ರಾಜ್ಯಾಧ್ಯಂತ ಎಬಿವಿಪಿಯಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ.
ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡಂತ ಕರ್ನಾಟಕ ಉತ್ತರ ಪ್ರಾಂತ್ಯದ ರಾಜ್ಯ ಕಾರ್ಯದರ್ಶಿ ಸಚಿನ ಕುಳಗೇರಿ ಅವರು, ನಾಳೆ ಬೆಳಿಗ್ಗೆ 10 ಗಂಟೆಗೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರದ ಎದುರು ವಿದ್ಯಾರ್ಥಿಗಳ ಜೊತೆಗೆ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದರು.
ರಾಜ್ಯದಲ್ಲಿ ಈ ರೀತಿಯ ಹತ್ಯೆಗಳು ನಡೆಯಬಾರದು. ಮತ್ತೆ ಮರುಕಳಿಸದಂತೆ ಸರ್ಕಾರ ಎಚ್ಚರಿಕೆ ವಹಿಸಬೇಕು. ಹೀಗೆ ಮಾಡಿದವರನ್ನು ಎನ್ ಕೌಂಟರ್ ಮಾಡುವಂತ ಕಾನೂನು ಜಾರಿಗೊಳ್ಳಬೇಕು. ನೇಹಾ ಕೊಲೆ ಮಾಡಿದಂತ ಆರೋಪಿಗಳನ್ನು ಗಲ್ಲು ಶಿಕ್ಷೆಗೆ ಒಳಪಡಿಸಬೇಕು ಎಂಬುದಾಗಿ ಸರ್ಕಾರಕ್ಕೆ ಆಗ್ರಹಿಸಲಾಗುತ್ತದೆ ಎಂದರು.
ಕಾಲೇಜಿನಲ್ಲೇ ನಡೆದಂತ ಈ ಘಟನೆಯಿಂದ ರಾಜ್ಯದ ವಿದ್ಯಾರ್ಥಿನಿಯರು ಬೆಚ್ಚಿಬಿದ್ದಿದ್ದಾರೆ. ಇದು ಲವ್ ಜಿಹಾದ್ ಎನ್ನುವುದು ಸ್ಪಷ್ಟವಾಗಿದೆ. ಫಯಾಜ್ ಪ್ರೀತಿಯನ್ನು ನೇಹಾ ನಿರಾಕರಿಸಿದ್ದಕ್ಕೆ ಕೊಲೆ ನಡೆದಿದೆ ಎಂಬುದಾಗಿ ಆರೋಪಿಸಿದರು.
ದೇಶ ಭಕ್ತಿಯನ್ನು ಬಿಜೆಪಿಯವರು ಗುತ್ತಿಗೆ ಪಡೆದಂತೆ ಆಡುತ್ತಿದ್ದಾರೆ: ಶಾಸಕ ಲಕ್ಷ್ಮಣ್ ಸವದಿ ಕಿಡಿ
‘ಭಯೋತ್ಪಾದಕ’ ರಫ್ತುದಾರ ಈಗ ‘ಹಿಟ್ಟಿ’ಗಾಗಿ ಹೆಣಗಾಡುತ್ತಿದ್ದಾನೆ : ಪಾಕ್ ವಿರುದ್ಧ ‘ಪ್ರಧಾನಿ ಮೋದಿ’ ವಾಗ್ದಾಳಿ