Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಾ.18ರಿಂದ SSLC ಪರೀಕ್ಷೆ-1 ಆರಂಭ: ಬೆಂಗಳೂರಿನ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ

13/03/2026 9:08 PM

BREAKING : ವಿಮಾನ ಪ್ರಯಾಣ ಈಗ ಮತ್ತಷ್ಟು ದುಬಾರಿ ; 425 ರಿಂದ 2,300 ರೂ.ಗೆ ‘ಇಂಧನ ಶುಲ್ಕ’ ವಿಧಿಸಿದ ‘ಇಂಡಿಗೋ’

13/03/2026 9:02 PM

ಕೇಂದ್ರದಿಂದ ಹೊಸ ‘ವಿಕಸಿತ ಭಾರತ – ಜಿ ರಾಮ್ ಜಿ’ ಕಾಯ್ದೆ ಜಾರಿ: ಗ್ರಾಮೀಣ ಜನತೆಗೆ 125 ದಿನಗಳ ಉದ್ಯೋಗ ಖಾತರಿ

13/03/2026 8:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » AC ರೂಂ, ಸೋಮಾರಿತನ ಬಿಟ್ಟು ನೆರೆ ಸಂತ್ರಸ್ತರ ನೆರವಿಗೆ ಧಾವಿಸಿ: HDK ಆಗ್ರಹ
KARNATAKA

AC ರೂಂ, ಸೋಮಾರಿತನ ಬಿಟ್ಟು ನೆರೆ ಸಂತ್ರಸ್ತರ ನೆರವಿಗೆ ಧಾವಿಸಿ: HDK ಆಗ್ರಹ

By kannadanewsnow0930/09/2025 4:44 PM

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮೊದಲು ಪರಿಹಾರ ಘೋಷಣೆ ಮಾಡಿ ನಂತರ ವೈಮಾನಿಕ ಸಮೀಕ್ಷೆ ಮಾಡಬೇಕಿತ್ತು. ಪರಿಹಾರವನ್ನೇ ತಿಳಿಸದೆ ಕೇವಲ ಸಮೀಕ್ಷೆ ಮಾಡಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ದೂರಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಆಗಿರುವ ಪ್ರವಾಹದ ಸ್ಥಿತಿ ವೀಕ್ಷಿಸಲು ಸಿಎಂ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ ಮಾಡುತ್ತಿದ್ದಾರೆ. ಎಲ್ಲ ರಸ್ತೆಗಳಲ್ಲಿ ಗುಂಡಿ ಇರುವುದರಿಂದ ಹಾಗೂ ರಸ್ತೆ ತಡೆದು ಜನರು ಪ್ರತಿಭಟಿಸುವುದರಿಂದ ಭಯಗೊಂಡ ಮುಖ್ಯಮಂತ್ರಿ ಹೆಲಿಕಾಪ್ಟರ್‌ನಲ್ಲಿ ವೀಕ್ಷಣೆ ಮಾಡುತ್ತಿದ್ದಾರೆ. ಜೋಳ ತೊಗರಿ ಸೇರಿದಂತೆ ಪ್ರತಿ ಬೆಳೆಗಳ ಹಾನಿ, ಮನೆ ಹಾನಿ, ಶಾಲೆ ಹಾನಿಗೆ ಎಷ್ಟು ಪರಿಹಾರ ನೀಡಲಾಗುತ್ತದೆ ಎಂದು ಸರ್ಕಾರ ಘೋಷಣೆ ಮಾಡಬೇಕಿತ್ತು. ಆದರೆ ಈವರೆಗೆ ಸರ್ಕಾರ ಆದೇಶ ಮಾಡಿಲ್ಲ. ಒಂದು ಕಡೆ ಖಜಾನೆ ಖಾಲಿಯಾಗಿದೆ. ಮತ್ತೊಂದು ಕಡೆ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಲು ಸಿದ್ಧತೆ ನಡೆದಿದೆ ಎಂದು ದೂರಿದರು.

ಮುಖ್ಯಮಂತ್ರಿಗಳು ಸಚಿವರ ತಂಡ ರಚಿಸಬೇಕಿತ್ತು. ಅಧಿಕಾರಿಗಳ ಸಭೆ ಕರೆದು ನೋಡಲ್‌ ಅಧಿಕಾರಿಗಳನ್ನು ನಿಯೋಜಿಸಬೇಕಿತ್ತು. ಪುನರ್ವಸತಿ ಕೇಂದ್ರಗಳಲ್ಲಿ ಸರಿಯಾಗಿ ಆಹಾರ ನೀಡಲಾಗುತ್ತಿದೆಯೇ ಎಂದು ಪರಿಶೀಲಿಸಬೇಕಿತ್ತು. ಏನೂ ಮಾಡದೆಯೇ ಹೆಲಿಕಾಪ್ಟರ್‌ನಲ್ಲಿ ಸಮೀಕ್ಷೆ ಮಾಡಲಾಗುತ್ತಿದೆ. ಈ ಸರ್ಕಾರ ಸಂತ್ರಸ್ತರಿಗೆ ಸರಿಯಾಗಿ ಸ್ಪಂದಿಸಿಲ್ಲ ಎಂದರು.

ಅಕ್ಟೋಬರ್‌ ಕ್ರಾಂತಿ

ಕಾಂಗ್ರೆಸ್‌ನಲ್ಲಿ ಅಕ್ಟೋಬರ್‌ ಕ್ರಾಂತಿಯಾಗುವ ಲಕ್ಷಣಗಳು ಕಂಡುಬಂದಿವೆ. ಕ್ರಾಂತಿಯ ನಂತರ ಸಿಎಂ ಬದಲಾವಣೆಯಾಗುವ ಲಕ್ಷಣವಿದೆ. ಸರ್ಕಾರ ಅಸ್ಥಿರಗೊಂಡು ಬಿದ್ದುಹೋದರೆ ಚುನಾವಣೆ ಮಾಡುವುದು ಸೂಕ್ತ. ನಾವು ಕಾಂಗ್ರೆಸ್‌ನಂತೆ ಸರ್ಕಾರ ಬೀಳಿಸಲು ಹೋಗಲ್ಲ. ಎರಡೂವರೆ ವರ್ಷಗಳಲ್ಲಿ ಸರ್ಕಾರ ಟೇಕಾಫ್‌ ಆಗಿಲ್ಲ. ಕಾಂಗ್ರೆಸ್‌ ಶಾಸಕರು ಹಾಗೂ ಸಚಿವರು ಅಭಿವೃದ್ಧಿ ಆಗಿಲ್ಲ ಎನ್ನುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಚುನಾವಣೆ ನಡೆಯುವುದು ಸೂಕ್ತ ಎಂದರು.

ಜಾತಿ ಸಮೀಕ್ಷೆಯಲ್ಲಿ ಸರ್ಕಾರ ಅನಗತ್ಯವಾದ ಮಾಹಿತಿಗಳನ್ನು ಸಂಗ್ರಹಿಸುತ್ತಿದೆ. ಜಾತಿ ಸಮೀಕ್ಷೆಯಲ್ಲಿ ತೀರಾ ವೈಯಕ್ತಿಕ ವಿಷಯ ಕೇಳಿದರೆ ಜನರು ಮಾಹಿತಿ ನೀಡದೇ ಇರಬಹುದು. ಇದು ಜನರಿಗೆ ಬಿಟ್ಟ ವಿಚಾರ ಎಂದು ಕೋರ್ಟ್‌ ಕೂಡ ಹೇಳಿದೆ. ಕೇಂದ್ರ ಸರ್ಕಾರ ಸಂವಿಧಾನದ ಪ್ರಕಾರ ತನ್ನ ಅಧಿಕಾರ ಚಲಾಯಿಸಿ ಜಾತಿ ಗಣತಿ, ಜನ ಗಣತಿ ಮಾಡುತ್ತಿದೆ. ರಾಜ್ಯ ಸರ್ಕಾರಕ್ಕೆ ಸಮೀಕ್ಷೆಯ ಅಧಿಕಾರವೇ ಇಲ್ಲ ಎಂದರು.

ಸಮೀಕ್ಷೆ ಮಾಡುವವರಿಗೆ ತರಬೇತಿ ನೀಡಿಲ್ಲ. ಸಮೀಕ್ಷೆ ಮಾಡದ ಸಿಬ್ಬಂದಿಯನ್ನು ಅಮಾನತು ಮಾಡುತ್ತೇವೆ ಎಂದು ಬೆದರಿಕೆ ಒಡ್ಡಲಾಗಿದೆ. ರಾಜ್ಯ ಸರ್ಕಾರದಿಂದ ಸಮೀಕ್ಷೆ ಅಗತ್ಯವೇ ಇರಲಿಲ್ಲ. ಎರಡು ಕೋಟಿ ಮನೆಗಳ ಹಣೆಬರಹವನ್ನು ಎರಡೇ ದಿನಗಳಲ್ಲಿ ಬರೆಯಲು ಮುಂದಾಗಿದ್ದಾರೆ. ಜಾತಿ ಸಮೀಕ್ಷೆಯ ಕಾಲಂಗಳಲ್ಲಿ ಕೇವಲ ಜಾತಿ/ಧರ್ಮಕ್ಕೆ ಆದ್ಯತೆ ನೀಡಲಾಗಿದೆ. ಇದರಲ್ಲಿ ಸಾಮಾಜಿಕ-ಶೈಕ್ಷಣಿಕದ ಅಂಶಗಳಿಲ್ಲ. ಸಮೀಕ್ಷೆ ಮುಗಿದ ನಂತರ ವರದಿಯನ್ನು ಕಸದ ಬುಟ್ಟಿಗೆ ಹಾಕುತ್ತಾರೆ. ಜಾತಿ ಸಮೀಕ್ಷೆಗೆ ನಮ್ಮ ವಿರೋಧವಿಲ್ಲ, ಆದರೆ ಜಾತಿ/ಧರ್ಮ ಒಡೆಯುವ ಅಜೆಂಡಾಗೆ ನಮ್ಮ ವಿರೋಧವಿದೆ. ಸಿಎಂ ಸಿದ್ದರಾಮಯ್ಯ ಹಿಂದೂ ವಿರೋಧಿಯಾಗಿದ್ದು, ಆ ನಡೆಯನ್ನೇ ಇಲ್ಲಿ ತೋರಿದ್ದಾರೆ. ಸಂವಿಧಾನದ ಅಡಿಯಲ್ಲಿ ಯಾವುದೇ ಜಾತಿಗೆ ಪರಿಶಿಷ್ಟ ಪಂಗಡದ ಸ್ಥಾನ ನೀಡಲು ನಮ್ಮ ಅಭ್ಯಂತರವಿಲ್ಲ ಎಂದರು.

ಬೆಂಗಳೂರಿನ ರಸ್ತೆ ಗುಂಡಿಗಳು ಸಾವಿನ ಗುಂಡಿಗಳಾಗಿವೆ. ಬೆಂಗಳೂರಿನಲ್ಲಿ ಒಬ್ಬ ಯುವತಿ ರಸ್ತೆ ಗುಂಡಿಯಿಂದಾಗಿ ಜೀವ ಕಳೆದುಕೊಂಡಿದ್ದಾಳೆ. ಈ ಸಾವಿಗೆ ಕಾರಣ ಯಾರು ಎಂದು ಜನರು ಪ್ರಶ್ನಿಸುತ್ತಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಬೈಕ್‌ನಲ್ಲಿ ಓಡಾಡಿದರೂ, ಸಿಎಂ ನಗರ ಪ್ರದಕ್ಷಿಣೆ ಮಾಡಿದರೂ ಪ್ರಯೋಜನವಾಗಿಲ್ಲ. ಬಿಜೆಪಿ ಅವಧಿಯಲ್ಲಿ ರಸ್ತೆ ಡಾಂಬರೀಕರಣ ಮಾಡಲಾಗಿತ್ತು. ಅದಾದ ನಂತರ ಗುಂಡಿಗಳು ಉಂಟಾಗಿವೆ. ಆದರೂ ಈ ಸರ್ಕಾರ ದುರಸ್ತಿ ಮಾಡಿಲ್ಲ ಎಂದರು.

ಮಂಡ್ಯ ಜಿಲ್ಲೆಯಾಧ್ಯಂತ ದೀಪಾವಳಿಯಂದು ‘ಹಸಿರು ಪಟಾಕಿ’ ಮಾತ್ರ ಮಾರಾಟಕ್ಕೆ ಅವಕಾಶ: ಡಿಸಿ ಡಾ.ಕುಮಾರ

BREAKING: ರಾಜ್ಯ ಸರ್ಕಾರದಿಂದ ‘ಅತಿಥಿ ಉಪನ್ಯಾಸಕ’ರನ್ನು ತಾತ್ಕಾಲಿಕವಾಗಿ ಆಯ್ಕೆಗೆ ಗ್ರೀನ್ ಸಿಗ್ನಲ್: ಈ ಕಂಡೀಷನ್ ಅಪ್ಲೈ

Share. Facebook Twitter LinkedIn WhatsApp Email

Related Posts

ಮಾ.18ರಿಂದ SSLC ಪರೀಕ್ಷೆ-1 ಆರಂಭ: ಬೆಂಗಳೂರಿನ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ

13/03/2026 9:08 PM2 Mins Read

ಪತ್ರಕರ್ತರ ಜೊತೆ ವಿಧಾನಸೌಧ ಗಾರ್ಡನ್ ನಲ್ಲಿ ಊಟ ಸವಿದ ಸಚಿವ ಸಂತೋಷ್ ಲಾಡ್!

13/03/2026 7:45 PM1 Min Read

ಮಕ್ಕಳ ಅಪರಾಧಗಳ ಬಗ್ಗೆ ಅರಿವು ಮೂಡಿಸಿ-ಶಿಕ್ಷಣ ನೀಡುವುದು ನಮ್ಮ ಕರ್ತವ್ಯ: ಶಿವಮೊಗ್ಗ ಡಿಸಿ ಪ್ರಭುಲಿಂಗ ಕವಳಿಕಟ್ಟಿ

13/03/2026 7:41 PM3 Mins Read
Recent News

ಮಾ.18ರಿಂದ SSLC ಪರೀಕ್ಷೆ-1 ಆರಂಭ: ಬೆಂಗಳೂರಿನ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ

13/03/2026 9:08 PM

BREAKING : ವಿಮಾನ ಪ್ರಯಾಣ ಈಗ ಮತ್ತಷ್ಟು ದುಬಾರಿ ; 425 ರಿಂದ 2,300 ರೂ.ಗೆ ‘ಇಂಧನ ಶುಲ್ಕ’ ವಿಧಿಸಿದ ‘ಇಂಡಿಗೋ’

13/03/2026 9:02 PM

ಕೇಂದ್ರದಿಂದ ಹೊಸ ‘ವಿಕಸಿತ ಭಾರತ – ಜಿ ರಾಮ್ ಜಿ’ ಕಾಯ್ದೆ ಜಾರಿ: ಗ್ರಾಮೀಣ ಜನತೆಗೆ 125 ದಿನಗಳ ಉದ್ಯೋಗ ಖಾತರಿ

13/03/2026 8:46 PM

LPG Cylinder Booking : ಈ ಅಪ್ಲಿಕೇಶನ್’ಗಳು ನಿಮ್ಮ ಗ್ಯಾಸ್ ಸಿಲಿಂಡರ್ ತ್ವರಿತವಾಗಿ ಬುಕ್ ಮಾಡಲು ಸಹಾಯ ಮಾಡುತ್ವೆ! ಹೇಗೆ ಗೊತ್ತಾ?

13/03/2026 8:40 PM
State News
KARNATAKA

ಮಾ.18ರಿಂದ SSLC ಪರೀಕ್ಷೆ-1 ಆರಂಭ: ಬೆಂಗಳೂರಿನ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ

By kannadanewsnow0913/03/2026 9:08 PM KARNATAKA 2 Mins Read

ಬೆಂಗಳೂರು: 2025-26ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ-1 ಮಾರ್ಚ್.18ರಿಂದ ಆರಂಭಗೊಳ್ಳಲಿದೆ. ಈ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಮುತ್ತ…

ಪತ್ರಕರ್ತರ ಜೊತೆ ವಿಧಾನಸೌಧ ಗಾರ್ಡನ್ ನಲ್ಲಿ ಊಟ ಸವಿದ ಸಚಿವ ಸಂತೋಷ್ ಲಾಡ್!

13/03/2026 7:45 PM

ಮಕ್ಕಳ ಅಪರಾಧಗಳ ಬಗ್ಗೆ ಅರಿವು ಮೂಡಿಸಿ-ಶಿಕ್ಷಣ ನೀಡುವುದು ನಮ್ಮ ಕರ್ತವ್ಯ: ಶಿವಮೊಗ್ಗ ಡಿಸಿ ಪ್ರಭುಲಿಂಗ ಕವಳಿಕಟ್ಟಿ

13/03/2026 7:41 PM

ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ: ಸಿಎಂ ಸಿದ್ದರಾಮಯ್ಯ

13/03/2026 6:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.