Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಪೇಪರ್ ಲೀಕ್ ಸಾಕು, ಇನ್ನು ಸಹಿಸಲು ಸಾಧ್ಯವಿಲ್ಲ’: ದೇಶಾದ್ಯಂತ ಶಾಂತಿಯುತ ಪ್ರತಿಭಟನೆಗೆ Gen-Z ಯುವಕರಿಗೆ ಕೇಜ್ರಿವಾಲ್ ಕರೆ!

ಎಐಎಡಿಎಂಕೆ ಶಾಸಕರಿಗೆ ಬಿಗ್ ಶಾಕ್: TVK ಪರ ಮತ ಹಾಕಿದ 25 ಶಾಸಕರು ಪಕ್ಷದ ಹುದ್ದೆಗಳಿಂದ ವಜಾ!

ಅದಾನಿ ಗ್ರೂಪ್ ಜೊತೆ ಕೈಜೋಡಿಸಿದ ಉಬರ್: ಭಾರತದಲ್ಲಿ ತಲೆಯೆತ್ತಲಿದೆ ಮೊದಲ ಬೃಹತ್ ಡೇಟಾ ಸೆಂಟರ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: 2026-27ನೇ ಸಾಲಿನ ಶೈಕ್ಷಣಿಕ ಕ್ಯಾಲೆಂಡರ್ ಪ್ರಕಟ: ಹೀಗಿದೆ ರಾಜ್ಯದಲ್ಲಿ ಶಾಲೆ ಆರಂಭ ಮತ್ತು ರಜೆಗಳ ಸಂಪೂರ್ಣ ಪಟ್ಟಿ
KARNATAKA

BREAKING: 2026-27ನೇ ಸಾಲಿನ ಶೈಕ್ಷಣಿಕ ಕ್ಯಾಲೆಂಡರ್ ಪ್ರಕಟ: ಹೀಗಿದೆ ರಾಜ್ಯದಲ್ಲಿ ಶಾಲೆ ಆರಂಭ ಮತ್ತು ರಜೆಗಳ ಸಂಪೂರ್ಣ ಪಟ್ಟಿ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026-27ನೇ ಶೈಕ್ಷಣಿಕ ಸಾಲಿನ ವಾರ್ಷಿಕ ಕ್ರಿಯಾಯೋಜನೆಯನ್ನು ಬಿಡುಗಡೆ ಮಾಡಿದೆ. ರಾಜ್ಯದಾದ್ಯಂತ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಅನ್ವಯವಾಗುವಂತೆ ಏಕರೂಪದ ಶೈಕ್ಷಣಿಕ ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ.

ಪ್ರಮುಖ ದಿನಾಂಕಗಳು:

  • ಶಾಲೆಗಳ ಪುನರಾರಂಭ: ಮೇ 29, 2026 ರಿಂದ ಶಿಕ್ಷಕರು ಹಾಜರಾಗಬೇಕು. ಮೇ 30ರಿಂದ ದಾಖಲಾತಿ ಅಂದೋಲನ ಹಾಗೂ ಜೂನ್ 1ರಿಂದ ಪೂರ್ಣ ಪ್ರಮಾಣದ ತರಗತಿಗಳು ಆರಂಭವಾಗಲಿವೆ.

  • ದಸರಾ ರಜೆ: ಅಕ್ಟೋಬರ್ 03, 2026 ರಿಂದ ಅಕ್ಟೋಬರ್ 21, 2026 ರವರೆಗೆ.

  • ಬೇಸಿಗೆ ರಜೆ (2027): ಏಪ್ರಿಲ್ 11, 2027 ರಿಂದ ಮೇ 28, 2027 ರವರೆಗೆ.

ಶೈಕ್ಷಣಿಕ ಅವಧಿಗಳ ವಿವರ:

  • ಮೊದಲನೇ ಅವಧಿ: 29-05-2026 ರಿಂದ 02-10-2026 ರವರೆಗೆ.

  • ಎರಡನೇ ಅವಧಿ: 22-10-2026 ರಿಂದ 10-04-2027 ರವರೆಗೆ.

ಕೆಲಸದ ದಿನಗಳ ಲೆಕ್ಕಾಚಾರ:

ಈ ಶೈಕ್ಷಣಿಕ ವರ್ಷದಲ್ಲಿ ಒಟ್ಟು 245 ಶಾಲಾ ಕೆಲಸದ ದಿನಗಳು ಲಭ್ಯವಿವೆ. ಇವುಗಳಲ್ಲಿ:

  • ಬೋಧನಾ-ಕಲಿಕಾ ಪ್ರಕ್ರಿಯೆಗೆ: 181 ದಿನಗಳು.

  • ಪರೀಕ್ಷೆ ಮತ್ತು ಮೌಲ್ಯಾಂಕನಕ್ಕಾಗಿ: 26 ದಿನಗಳು.

  • ಪಠ್ಯೇತರ ಚಟುವಟಿಕೆಗಳು ಹಾಗೂ ಸ್ಪರ್ಧೆಗಳಿಗಾಗಿ: 24 ದಿನಗಳು.

  • ಫಲಿತಾಂಶ ವಿಶ್ಲೇಷಣೆಗಾಗಿ: 10 ದಿನಗಳು.

  • ಶಾಲಾ ಸ್ಥಳೀಯ ರಜೆಗಳು: 04 ದಿನಗಳು.

ಇಲಾಖೆಯ ಪ್ರಮುಖ ಸೂಚನೆಗಳು:

  1. ದಾಖಲಾತಿ ಅಂದೋಲನ: 6 ರಿಂದ 18 ವರ್ಷದೊಳಗಿನ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ತರಲು ನವೆಂಬರ್ 2025 ರಿಂದ ಜೂನ್ 2026 ರವರೆಗೆ “ದಾಖಲಾತಿ ಜಾಗೃತಿ ಅಭಿಯಾನ” ನಡೆಸಲು ಸೂಚಿಸಲಾಗಿದೆ.

  2. ಸಮವಸ್ತ್ರ ಮತ್ತು ಪಠ್ಯಪುಸ್ತಕ: ಜೂನ್ ಮೊದಲ ವಾರದಲ್ಲೇ 1 ರಿಂದ 10ನೇ ತರಗತಿಯ ಮಕ್ಕಳಿಗೆ ಎರಡು ಜೊತೆ ಉಚಿತ ಸಮವಸ್ತ್ರ ಮತ್ತು ಪಠ್ಯಪುಸ್ತಕಗಳ ವಿತರಣೆಯನ್ನು ಪೂರ್ಣಗೊಳಿಸಲು ಇಲಾಖೆ ಆದೇಶಿಸಿದೆ.

  3. ರಜೆ ಸರಿದೂಗಿಸುವಿಕೆ: ಅನಿರೀಕ್ಷಿತ ಕಾರಣಗಳಿಂದಾಗಿ ಶಾಲೆಗೆ ರಜೆ ಘೋಷಿಸಿದರೆ, ಆ ಅವಧಿಯನ್ನು ಮುಂದಿನ ರಜೆ ದಿನಗಳಲ್ಲಿ ಪೂರ್ಣ ದಿನದ ಶಾಲೆಗಳನ್ನು ನಡೆಸುವ ಮೂಲಕ ಸರಿದೂಗಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

  4. ಕ್ರಿಸ್‌ಮಸ್ ರಜೆ: ಜಿಲ್ಲಾ ಉಪನಿರ್ದೇಶಕರು ಅಕ್ಟೋಬರ್ ಮಧ್ಯಂತರ ರಜೆಯನ್ನು ಕಡಿತಗೊಳಿಸಿ ಡಿಸೆಂಬರ್‌ನಲ್ಲಿ ಕ್ರಿಸ್‌ಮಸ್ ರಜೆ ನೀಡಲು ನಿರ್ಧರಿಸುವ ಅಧಿಕಾರ ಹೊಂದಿದ್ದಾರೆ.

ಈ ಶೈಕ್ಷಣಿಕ ವೇಳಾಪಟ್ಟಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆಯುಕ್ತರು ರಾಜ್ಯದ ಎಲ್ಲಾ ಉಪನಿರ್ದೇಶಕರು (ಆಡಳಿತ) ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

Share. Facebook Twitter LinkedIn WhatsApp Email

Related Posts

ಸುಶಿಕ್ಷಿತ ಯುವಶಕ್ತಿಯಿಂದ ಮಾತ್ರ ದೇಶದ ಪ್ರಗತಿ ಸಾಧ್ಯ: ಸಚಿವ ಕೆ.ಜೆ.ಜಾರ್ಜ್

2 Mins Read

BREAKING: ಬೆಂಗಳೂರಿನಲ್ಲಿ ಬೃಹತ್ GST ವಂಚನೆ ಜಾಲ ಪತ್ತೆ: ₹410 ಕೋಟಿ ಐಟಿಸಿ ಹಗರಣದ ಕಿಂಗ್‌ಪಿನ್ ಬಂಧನ

2 Mins Read

ಬೆಂಗಳೂರಲ್ಲಿ 23 ಲಕ್ಷಕ್ಕೂ ಹೆಚ್ಚು ಖಾತಾ ಬಿಡುಗಡೆ ದೇಶದಲ್ಲೇ ದಾಖಲೆ: ಡಿಸಿಎಂ ಡಿ ಕೆ ಶಿವಕುಮಾರ್

6 Mins Read
Recent News

‘ಪೇಪರ್ ಲೀಕ್ ಸಾಕು, ಇನ್ನು ಸಹಿಸಲು ಸಾಧ್ಯವಿಲ್ಲ’: ದೇಶಾದ್ಯಂತ ಶಾಂತಿಯುತ ಪ್ರತಿಭಟನೆಗೆ Gen-Z ಯುವಕರಿಗೆ ಕೇಜ್ರಿವಾಲ್ ಕರೆ!

ಎಐಎಡಿಎಂಕೆ ಶಾಸಕರಿಗೆ ಬಿಗ್ ಶಾಕ್: TVK ಪರ ಮತ ಹಾಕಿದ 25 ಶಾಸಕರು ಪಕ್ಷದ ಹುದ್ದೆಗಳಿಂದ ವಜಾ!

ಅದಾನಿ ಗ್ರೂಪ್ ಜೊತೆ ಕೈಜೋಡಿಸಿದ ಉಬರ್: ಭಾರತದಲ್ಲಿ ತಲೆಯೆತ್ತಲಿದೆ ಮೊದಲ ಬೃಹತ್ ಡೇಟಾ ಸೆಂಟರ್!

‘ಇರಾನ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ಸಾಧಿಸಿದೆ’: ಹಾರ್ಮುಜ್ ಜಲಸಂಧಿ ಬಿಕ್ಕಟ್ಟಿನ ನಡುವೆ ಟ್ರಂಪ್ ಮತ್ತು ರಕ್ಷಣಾ ಕಾರ್ಯದರ್ಶಿ ಅಧಿಕೃತ ಘೋಷಣೆ!

State News
KARNATAKA

ಸುಶಿಕ್ಷಿತ ಯುವಶಕ್ತಿಯಿಂದ ಮಾತ್ರ ದೇಶದ ಪ್ರಗತಿ ಸಾಧ್ಯ: ಸಚಿವ ಕೆ.ಜೆ.ಜಾರ್ಜ್

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ…

BREAKING: ಬೆಂಗಳೂರಿನಲ್ಲಿ ಬೃಹತ್ GST ವಂಚನೆ ಜಾಲ ಪತ್ತೆ: ₹410 ಕೋಟಿ ಐಟಿಸಿ ಹಗರಣದ ಕಿಂಗ್‌ಪಿನ್ ಬಂಧನ

ಬೆಂಗಳೂರಲ್ಲಿ 23 ಲಕ್ಷಕ್ಕೂ ಹೆಚ್ಚು ಖಾತಾ ಬಿಡುಗಡೆ ದೇಶದಲ್ಲೇ ದಾಖಲೆ: ಡಿಸಿಎಂ ಡಿ ಕೆ ಶಿವಕುಮಾರ್

BIG BREAKING: ರಾಜ್ಯ ಸರ್ಕಾರದಿಂದ ‘ಶಾಲಾ-ಕಾಲೇಜು’ಗಳಲ್ಲಿ ‘ಹಿಜಾಬ್ ನಿಷೇಧ’ ಆದೇಶ ವಾಪಾಸ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.