ಬೆಂಗಳೂರು: ಈಗಾಗಲೇ ಬಿಡಿಎ ಕಚೇರಿಯ ಮೇಲೆ ದಾಳಿ ನಡೆಸಿ, ಈ ಸಂಬಂಧ ಹಲವು ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಂತ ಎಸಿಬಿ ಅಧಿಕಾರಿಗಳು, ಈಗ ತಮ್ಮ ದಾಳಿಯನ್ನು ಮುಂದುವರೆಸಿದ್ದಾರೆ. ಇಂದು ಬಿಬಿಎಂಪಿ ಕಚೇರಿಗಳ ಮೇಲೆ ದಾಳಿ ನಡೆಸಿದ್ದು, ಭ್ರಷ್ಟ ಅಧಿಕಾರಿಗಳ ಭೇಟೆಯನ್ನು ಮುಂದುವರೆಸಿದ್ದಾರೆ.
ಬೆಂಗಳೂರಿನ ಬಿಬಿಎಂಪಿ ಕಚೇರಿ, ವಲಯ ಕಚೇರಿಗಳು ಸೇರಿದಂತೆ 27 ಬಿಬಿಎಂಪಿ ಕಚೇರಿಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಿಬಿಎಂಪಿ ಕಚೇರಿಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿವೆ ಎನ್ನುವಂತ ಸಾರ್ವಜನಿಕರ ದೂರಿನ ಹಿನ್ನಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗುತ್ತಿದೆ.
BIGG BREAKING NEWS: ‘ಉಕ್ರೇನ್’ನಲ್ಲಿ ಇಂಟರ್ನೆಟ್ ಸ್ಥಗಿತ | Russia-Ukraine Crisis
200ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳಿಂದ ಈ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಬಿಬಿಎಂಪಿಯ ಟಿಡಿಆರ್, ಟೌನ್ ಪ್ಲಾನಿಂಗ್ ಕಚೇರಿ, ಖಾತಾ ನೀಡುವ ಕಚೇರಿಗಳಲ್ಲಿ ಕಡತಗಳ ಪರಿಶೀಲನೆಯನ್ನು ಎಸಿಬಿ ಅಧಿಕಾರಿಗಳು ನಡೆಸುತ್ತಿದ್ದಾರೆ. ಈ ಸಂಬಂಧ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.