ಚಿಕ್ಕಮಗಳೂರು: ಜಿಲ್ಲೆಯ ಚಾರ್ಮಾಡಿ ಘಾಟ್ ನಲ್ಲಿ ( Charmadi Ghats ) ಸಾರಿಗೆ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ಧರಿಂದಾಗಿ, ರಸ್ತೆಯಲ್ಲಿ ಮತ್ತೊಂದು ವಾಹನ ಸಂಚರಿಸೋದಕ್ಕೆ ಅವಕಾಶ ಇಲ್ಲದಂತೆ ಆಗಿ, ಕಿಲೋಮೀಟರ್ ದೂರದವರೆಗೆ ಇಂದು ಟ್ರಾಫಿಕ್ ಜಾಮ್ ಉಂಟಾಗಿದೆ ಎಂದು ತಿಳಿದು ಬಂದಿದೆ.
BIG ALEART: ಸಿಲಿಂಡರ್ ಡೆಲಿವರಿ ಶುಲ್ಕ ನೀಡುವಂತಿಲ್ಲ, ಹೆಚ್ಚಿನ ಹಣ ಕೇಳಿದ್ರೆ ಇಲ್ಲಿ ದೂರು ಸಲ್ಲಿಸಿ
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ಇಂದು ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿದೆ. ಇದರಿಂದಾಗಿ ಚಾರ್ಮಾಡಿ ಘಾಟ್ ನಲ್ಲಿ ರಸ್ತೆ ಸಂಚಾರದಲ್ಲಿ ಅವ್ಯವಸ್ಥೆ ಉಂಟಾಗಿದೆ.
ವಾರ್ಷಿಕ ಫ್ಲೂ ಲಸಿಕೆಯು ಪಾರ್ಶ್ವವಾಯುವಿನ ಅಪಾಯವನ್ನು ಕಡಿಮೆ ಮಾಡುತ್ತದೆ – ಅಧ್ಯಯನ | risk of stroke
ಅಪಘಾತದಿಂದಾಗಿ ರಸ್ತೆ ಸಂಚಾರ ಬಂದ್ ಆದ ಕಾರಣ, ಚಾರ್ಮಾಡಿ ಘಾಟ್ ನಲ್ಲಿ ಕಿಲೋಮೀಟರ್ ಗಟ್ಟಲೇ ವಾಹನಗಳು ಟ್ರಾಫಿಕ್ ಜಾಮ್ ನಲ್ಲಿ ಸಿಲುಕುವಂತೆ ಆಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಸಂಚಾರ ಸರಿ ಪಡಿಸೋ ಕಾರ್ಯದಲ್ಲಿ ತೊಡಗಿದ್ದಾರೆ.