ಬೆಂಗಳೂರು : ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಮತ್ತೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಪಕ್ಕದ ರಸ್ತೆಗೆ ಕಾರು ಪಲ್ಟಿಯಾಗಿ ಬಿದ್ದಿದೆ. ಚನ್ನಪಟ್ಟಣ ತಾಲೂಕಿನ ಕೋಲೂರು ಗ್ರಾಮದ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ.
ಬೆಂಗಳೂರು ದಕ್ಷಿಣ ಜಿಲ್ಲೆಯ ಚೆನ್ನಪಟ್ಟಣ ತಾಲೂಕಿನ ಕೋಲುರು ಗ್ರಾಮದಲ್ಲಿ ಮೈಸೂರು ನಿಂದ ಎರಡು ಕಾರುಗಳು ಬೆಂಗಳೂರು ಕಡೆಗೆ ಹೋಗುತ್ತಿದ್ದವು. ಮುಂದೆ ಹೋಗುತ್ತಿದ್ದ ಟಾಟಾ ಇಂಡಿಕಾಗೆ ಹಿಂಬದಿಯಿಂದ ಪೋಲೋ ಕಾರು ಡಿಕ್ಕಿ ಹೊಡೆದಿದೆ. ಎರಡು ಕಾರುಗಳಲ್ಲಿ ಇದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣ ಅವರನ್ನು ಚನ್ನಪಟ್ಟಣ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








