ಬೆಳಗಾವಿ : ಬೈಕ್ ವೊಂದು ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಪರಿಣಾಮ ನಾಲ್ವರೂ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ -4 ರಲ್ಲಿ ನಡೆದಿದೆ.
ತಡರಾತ್ರಿ ಒಂದೇ ಬೈಕ್ ನಲ್ಲಿ ನಾಲ್ವರು ಮನೆಗೆ ಹೋಗುತ್ತಿದ್ದ ವೇಳೆ ಆಯತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದರು. ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪ್ರವೀಣ ಸಣದಿ (29), ಬಸವರಾಜ್ ಮಾಳಿ(26), ಮಹಿಬೂಬ್ ಶೇಗಡಿ (21) ಮೃತ ವ್ಯಕ್ತಿಗಳು ಎಂದು ಗುರುತಿಸಲಾಗಿದೆ.