ಬೆಂಗಳೂರು : ಬೆಂಗಳೂರಿನ ಏರ್ ಪೋರ್ಟ್ ಫ್ಲೈ ಓವರ್ ನಲ್ಲಿ ಭೀಕರ ಬೈಕ್ ಅಪಘಾತ ಸಂಭವಿಸಿದ್ದು, ಫ್ಲೈ ಓವರ್ ನಿಂದ ಕೆಳಗೆ ಬಿದ್ದು ಇಬ್ಬರು ಸವಾರರು ಮೃತಪಟ್ಟಿದ್ದಾರೆ.
ಫ್ಲೈಓವರ್ ತಡೆಗೋಡೆಗೆ ಬೈಕ್ ಸವಾರರು ಡಿಕ್ಕಿ ಹೊಡೆದು ಇಬ್ಬರು ಬೈಕ್ ಪ್ಲೈ ಓವರ್ನಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಮೃತಪಟ್ಟಿರುವ ಇಬ್ಬರನ್ನು ಉತ್ತರ ಭಾರತ ಮೂಲದ ವಿಕ್ರಮ್(28), ಅಮಿತ್ ಸಿಂಗ್(27) ಎಂದು ಗುರುತಿಸಲಾಗಿದೆ.
ಜೊತೆಗೆ ಇನ್ನೊಬ್ಬ ಬೈಕ್ ಸವಾರ ಸೌರಭ್ (27) ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇವರು ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ನಲ್ಲಿ ನೆಲೆಸಿದ್ದರು ಎಂದು ಹೇಳಲಾಗಿದೆ. ಈ ಸಂಬಂಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಕನ್ನಡ ಪಠ್ಯ ಪುಸ್ತಕದಲ್ಲಿ ಅಪ್ಪು ಪಾಠ ಸೇರ್ಪಡೆʼ : ಸಚಿವ ಆರ್. ಅಶೋಕ್ ಹೇಳಿದ್ದೇನು..?