ಬೆಳಗಾವಿ : ಬೆಳಗಾವಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಗೆ ಸರ್ಕಾರಿ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆ ರಾಯಭಾಗದಲ್ಲಿ ನಡೆದಿದೆ.
ಮೃತರನ್ನು ಹಾಳಸಿರಬೂರ ಗ್ರಾಮದ ನಿವಾಸಿ ಭಗವಂತ ಕಾಂಬಳೆ (45) ವಿಶ್ವನಾಥ್ ಕಾಂಬಳೆ (24) ಕುಮಾರ್ ಕಾಂಬಳೆ (35) ಎಂದು ಗುರುತಿಸಲಾಗಿದೆ. ವೇಗವಾಗಿ ಬಂದ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಬೈಕ್ ನಲ್ಲಿ ಮೂವರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶಿವಮೊಗ್ಗ-ಯಶವಂತಪುರ ರೈಲಿನ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ: ಹಲವರಿಗೆ ಗಾಯ
ತುಮಕೂರು: ಜಿಲ್ಲೆಯ ಕ್ಯಾತ್ಸಂದ್ರ ಬಳಿಯಲ್ಲಿ ಶಿವಮೊಗ್ಗ-ಯಶವಂತಪುರ ರೈಲಿನ ( Shivamogga – Yashwanthpur Train ) ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಕಿಡಿಗೇಡಿಗಳಿಂದ ಕಲ್ಲು ತೂರಾಟ ನಡೆಸಿದ್ದರಿಂದಾಗಿ ಹಲವು ಪ್ರಯಾಣಿಕರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ.
ತುಮಕೂರಿನ ಕ್ಯಾತ್ಸಂದ್ರ ರೈಲ್ವೆ ನಿಲ್ದಾಣದ ( Railway Station ) ಬಳಿಯಲ್ಲಿ ಚಲಿಸುತ್ತಿದ್ದಂತ ಶಿವಮೊಗ್ಗ-ಯಶವಂತಪುರ ರೈಲಿನ ಜನರಲ್ ಬೋಗಿಯ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟವನ್ನು ಇಂದು ನಡೆಸಿರೋದಾಗಿ ತಿಳಿದು ಬಂದಿದೆ.ಚಲಿಸುತ್ತಿದ್ದಂತ ರೈಲಿನ ಮೇಲೆ ಕಿಡಿಗೇಡಿಗಳು ಏಕಾಏಕಿ ಕಲ್ಲು ತೂರಾಟ ನಡೆಸಿದ್ದರಿಂದಾಗಿ ರೈಲಿನಲ್ಲಿದ್ದಂತ ಗುರುಮೂರ್ತಿ ಎಂಬುವರು ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿರೋದಾಗಿ ಹೇಳಲಾಗುತ್ತಿದೆ.ಇವರಷ್ಟೇ ಅಲ್ಲದೇ ಇನ್ನೂ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿರೋದಾಗಿ ಹೇಳಲಾಗುತ್ತಿದೆ. ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತನಿಖೆಯ ಮೂಲಕ ಕಿಡಿಗೇಡಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
BREAKING NEWS: ಶಿವಮೊಗ್ಗ-ಯಶವಂತಪುರ ರೈಲಿನ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ: ಹಲವರಿಗೆ ಗಾಯ