ಚಿಕ್ಕಬಳ್ಳಾಪುರ : ಕ್ಯಾಂಟರ್ ಹಾಗೂ ಆಟೋ ಡಿಕ್ಕಿಯಾಗಿ ಇಬ್ಬರು ಮಹಿಳೆಯರು ಸೇರಿ ಮೂವರು ಮೃತಪಟ್ಟ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಗಡಿ ಭಾಗವಾದ ರಂಗನಹಳ್ಳಿ ಗೇಟ್ ಬಳಿ ನಡೆದಿದೆ.
ಭೀಕರ ಅಪಘಾತದಲ್ಲಿ ಆಟೋ ಚಾಲಕ ಸೇರಿ ಮೂವರು ಮೃತಪಟ್ಟಿದ್ದು, ಮೃತರನ್ನು ಮೀಲಾನಿ (25)ವೃದ್ದೆ ಜೈರಬಿ (70) ಆಟೋ ಚಾಲಕ ಕಲಂದರ್ ಎಂದು ಗುರುತಿಸಲಾಗಿದೆ. . ಗಾಯಾಳುಗಳಿಗೆ ಗೌರಿಬಿದನೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವೇಗವಾದಿ ಬಂದ ಕ್ಯಾಂಟರ್ ಹಾಗೂ ಆಟೋ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ.
ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ : ಮುಸ್ಲಿಂ ಯುವಕರ ಮೇಲೆ ಹಲ್ಲೆಗೆ ಯತ್ನ