ಬಳ್ಳಾರಿ : ಬಳ್ಳಾರಿಯಲ್ಲಿ ಚಲಿಸುತ್ತಿದ್ದ ಲಾರಿಗೆ ಆಕಸ್ಮಿಕವಾಗಿ ಏಕಾಏಕಿ ಬೆಂಕಿ ತಗುಲಿದೆ. ಈ ವೇಳೆ ಲಾರಿಯಲ್ಲಿ ಇದ್ದಂತಹ ಸುಮಾರು 45 ಲಕ್ಷಕ್ಕೂ ಹೆಚ್ಚು ಮೌಲ್ಯದ 40 ಬೈಕುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಬಳ್ಳಾರಿ ನಗರದ ಅನಂತಪುರ ರಸ್ತೆಯ ಆಟೋನಗರದಲ್ಲಿ ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ ಸಿಕ್ಕು ಲಾರಿಯಲ್ಲಿದ್ದ 45 ಲಕ್ಷ ರೂ. ಮೌಲ್ಯದ 40 ಬೈಕ್‌ಗಳು ಸುಟ್ಟು ಕರಕಲಾಗಿವೆ.
ರಸ್ತೆ ಬದಿ ನಿಂತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡು ದಟ್ಟ ಹೊಗೆ ಕಾಣಿಸಿಕೊಂಡಿದೆ. ಲಾರಿಯಲ್ಲೇ ಕುಳಿತಿದ್ದ ಚಾಲಕ ಕೂಡಲೇ ಎಚ್ಚೆತ್ತುಕೊಂಡು ಲಾರಿಯಿಂದ ಕೆಳಗೆ ಇಳಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಅಗ್ನಿಶಾಮಕ ಸಿಬ್ಬಂದಿ ಬಂದು ಬೆಂಕಿ ನಂದಿಸುವಷ್ಟರಲ್ಲಿ ಲಾರಿಯಲ್ಲಿದ್ದ ಬೈಕ್‌ಗಳು ಸುಟ್ಟು ಕರಕಲಾಗಿದ್ದವು. ಘಟನೆ ಸಂಬಂಧ ಬಳ್ಳಾರಿಯ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








