ಮೈಸೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣಗೆ ಹೆಚ್‍ಡಿ ದೇವೇಗೌಡರು ನನ್ನ ತಾಳ್ಮೆ ಪರೀಕ್ಷಿಸಬೇಡ ಎಲ್ಲೇ ಇದ್ದರೂ ಬಂದು ಪೊಲೀಸ್ರಿಗೆ ಶರಣಾಗು ಎಂದು ಪತ್ರ ಬರೆದಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ಪ್ರಕಾರ ಅವರೇ ಪ್ರಜ್ವಲ್ ರೇವಣ್ಣರನ್ನು ವಿದೇಶಕ್ಕೆ ಕಳುಹಿಸಿದ್ದಾರೆ ಈಗ ಪತ್ರ ಬರೆದು ಏನೂ ಮಾಡುತ್ತಾರೆ ಎಂದು ಪ್ರಶ್ನಿಸಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದೆ ಅವರು. ಈಗ ಪತ್ರ ಬರೆದು ಏನು ಮಾಡುತ್ತಾರೆ. ನನ್ನ ಪ್ರಕಾರ ಪ್ರಜ್ವಲ ರೇವಣ್ಣರನ್ನ ವಿದೇಶಕ್ಕೆ ಕಳುಹಿಸಿದ್ದು ಅವರೇ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣಗೆ ಎಚ್ ಡಿ ಕುಮಾರಸ್ವಾಮಿ ಅವರು ಟ್ವೀಟ್ ಮೂಲಕ ಎಚ್ಚರಿಕೆ ನೀಡಿದ್ದಾರೆ. ನನ್ನ ತಾಳ್ಮೆ ಪರೀಕ್ಷಿಸಬೇಡ ಎಲ್ಲೇ ಇದ್ದರೂ ಬಂದು ಪೊಲೀಸರಿಗೆ ಶರಣಾಗು ಎಂದು ತಿಳಿಸಿದ್ದಾರೆ.

ಇದು ಅವನಿಗೆ ಕೊಡುತ್ತಿರುವ ಎಚ್ಚರಿಕೆ ಎಂದು ತಿಳಿಯಬೇಕು ಇಲ್ಲದಿದ್ದಲ್ಲಿ ಕುಟುಂಬದವರ ಕೋಪವನ್ನು ಎದುರಿಸಬೇಕಾಗುತ್ತದೆ. ಮನೆಯವರ ಕಣ್ಣಲ್ಲಿ ಏಕಾಂಗಿಯಾಗುವುದರಲ್ಲಿ ಸಂದೇಹವೇ ಇಲ್ಲ. ನನ್ನ ಬಗ್ಗೆ ಗೌರವವಿದ್ದಲ್ಲಿ ಅವನು ಕೂಡಲೇ ವಿದೇಶದಿಂದ ಹಿಂದು ರೋಗ ಬೇಕು ಅನ್ಯಾಯಕ್ಕ ಒಳಗಾಗಿರುವವರಿಗೆ ನ್ಯಾಯ ಸಿಗುವುದು ಅಷ್ಟೇ ಮುಖ್ಯ ಜನರ ವಿಶ್ವಾಸವನ್ನು ಮರಳಿ ಪಡೆಯುವುದು ಅಷ್ಟೇ ನನ್ನ ಗುರಿ ಎಂದು ಟ್ವೀಟ್ ನಲ್ಲಿ ಪತ್ರದ ಮೂಲಕ ಪ್ರಜ್ವಲ್ಗೆ ದೇವೇಗೌಡರು ಎಚ್ಚರಿಕೆ ನೀಡಿದ್ದಾರೆ.

Share.
Exit mobile version