Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಂದಿನಿ ಉತ್ಪನ್ನ ಪ್ರಿಯರಿಗೆ ಸಂತಸದ ಸುದ್ದಿ: 18 ವಿವಿಧ ನಂದಿನಿ ಕೇಕ್, ಮಫಿನ್ ಮಾರುಕಟ್ಟೆಗೆ ಬಿಡುಗಡೆ | Nandini Products

01/06/2025 3:08 PM

SHOCKING : ಶಿವಮೊಗ್ಗದಲ್ಲಿ ಘೋರ ದುರಂತ : ರಸ್ತೆಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ನವವಿವಾಹಿತ ಸಾವು!

01/06/2025 3:06 PM

BREAKING : ಹಟ್ಟಿ ಚಿನ್ನದ ಗಣಿಯಲ್ಲಿ ಗಣಿಗಾರಿಕೆ ವೇಳೆ ಮಣ್ಣು ಕುಸಿತ : ಓರ್ವ ಕಾರ್ಮಿಕ ಸಾವು, ಮತ್ತೊರ್ವನ ಕಾಲು ಕಟ್!

01/06/2025 2:50 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG BREAKING: ಸಿಎಂ ಸಿದ್ಧರಾಮಯ್ಯ ಪತ್ನಿ ಪಾರ್ವತಿ ವಾಪಾಸ್ ನೀಡಿದ್ದ 14 ಮುಡಾ ನಿವೇಶನಗಳ ಖಾತೆ ರದ್ದು
KARNATAKA

BIG BREAKING: ಸಿಎಂ ಸಿದ್ಧರಾಮಯ್ಯ ಪತ್ನಿ ಪಾರ್ವತಿ ವಾಪಾಸ್ ನೀಡಿದ್ದ 14 ಮುಡಾ ನಿವೇಶನಗಳ ಖಾತೆ ರದ್ದು

By kannadanewsnow0901/10/2024 5:30 PM

ಬೆಂಗಳೂರು; ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿ ಅವರು ತಮಗೆ ನೀಡಿದ್ದಂತ 14 ಮುಡಾ ಸೈಟ್ ಹಿಂದಿರುಗಿಸಿದ್ದರು. ಇಂತಹ ಸೈಟುಗಳ ಖಾತೆಯನ್ನು ಮುಡಾ ರದ್ದುಗೊಳಿಸಿ ಆದೇಶಿಸಿದೆ.

ನಿನ್ನೆ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಯವರು ನನ್ನ ಪತಿಯಾಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 40 ವರ್ಷದ ಸುದೀರ್ಘ ರಾಜಕಾರಣದಲ್ಲಿ ಯಾವುದೇ ಸಣ್ಣ ಕಳಂಕವೂ ಅಂಟಿಕೊಳ್ಳದಂತಹ ನೈತಿಕತೆಯನ್ನು ವ್ರತದಂತೆ ಪಾಲಿಸಿಕೊಂಡು ಬಂದವರು. ರಾಜಕೀಯವೂ ಸೇರಿದಂತೆ ಸಾರ್ವಜನಿಕ ಜೀವನದಲ್ಲಿ ಕಾಣಿಸಿಕೊಂಡು ಅವರಿಗೆ ಮುಜುಗರ ಉಂಟು ಮಾಡಬಾರದು ಎಂಬ ನಿರ್ಧಾರಕ್ಕೆ ಬದ್ಧಳಾಗಿ ಬದುಕಿದವಳು ಎಂದಿದ್ದರು.

ನಾನೆಂದೂ ಮನೆ, ಆಸ್ತಿ, ಚಿನ್ನ, ಸಂಪತ್ತನ್ನು ಬಯಸಿದವಳಲ್ಲ. ಯಾವುದೇ ಕಾರಣಕ್ಕೂ ನನ್ನಿಂದ ಅವರ ರಾಜಕೀಯ ಜೀವನಕ್ಕೆ ಒಂದು ಸಣ್ಣ ಹನಿಯಷ್ಟೂ ಕಳಂಕ ತಟ್ಟಬಾರದೆಂದು ಎಚ್ಚರಿಕೆಯಿಂದ ನಡೆದುಕೊಂಡವಳು ಎಂದು ತಿಳಿಸಿದ್ದರು.

ನನ್ನ ಪತಿಗೆ ರಾಜ್ಯದ ಜನತೆ ಹರಿಸುತ್ತಾ ಬಂದ ಪ್ರೀತಿ ಅಭಿಮಾನಗಳನ್ನು ದೂರದಿಂದಲೇ ಕಂಡು ಸಂತೋಷ ಮತ್ತು ಹೆಮ್ಮೆ ಪಟ್ಟವಳು. ಹೀಗಿದ್ದರೂ ಮೈಸೂರಿನ ಮುಡಾ ನಿವೇಶನಕ್ಕೆ ಸಂಬಂಧಿಸಿದಂತೆ ಕೇಳಿಬಂದ ಆರೋಪಗಳಿಂದ ನಾನು ಘಾಸಿಗೊಂಡಿದ್ದೇನೆ. ನನ್ನ ಸ್ವಂತ ಸೋದರ ಅರಿಶಿನ – ಕುಂಕುಮದ ಭಾಗವಾಗಿ ಕೊಟ್ಟ ಜಮೀನಿನ ಬಾಬು ಪಡೆದ ನಿವೇಶನಗಳು ಇಷ್ಟೊಂದು ರಾದ್ಧಾಂತವಾಗುತ್ತದೆ. ಇದರಿಂದ ನನ್ನ ಪತಿಯವರು ಅನ್ಯಾಯವಾಗಿ ಆರೋಪಗಳನ್ನು ಎದುರಿಸುವಂತಾಗಬಹುದು ಎನ್ನುವುದನ್ನು ನಾನು ಊಹಿಸಿದವಳೂ ಅಲ್ಲ ಎಂದು ಹೇಳಿದ್ದರು.

ನನಗೆ ಈ ನಿವೇಶನ, ಮನೆ, ಆಸ್ತಿ, ಸಂಪತ್ತು ಯಾವುದೂ ಕೂಡ ನನ್ನ ಪತಿಯ ಗೌರವ, ಘನತೆ, ಮರ್ಯಾದೆ ಮತ್ತು ಅವರ ನೆಮ್ಮದಿಗಿಂತ ದೊಡ್ಡದಲ್ಲ. ಇಷ್ಟು ವರ್ಷಗಳ ಕಾಲ ಅಧಿಕಾರದಲ್ಲಿದ್ದ ಅವರಿಂದ ಏನನ್ನೂ ನನಗಾಗಲೀ, ನನ್ನ ಕುಟುಂಬಕ್ಕಾಗಲೀ ಬಯಸದೇ ಇದ್ದ ನನಗೆ ಈ ನಿವೇಶನಗಳು ತೃಣಕ್ಕೆ ಸಮ. ಈ ಹಿನ್ನೆಲೆಯಲ್ಲಿ ವಿವಾದಕ್ಕೆ ಕಾರಣವಾಗಿರುವ ಮುಡಾದ 14 ನಿವೇಶನಗಳನ್ನು ವಾಪಸ್ ಮಾಡಲು ನಿರ್ಧರಿಸಿದ್ದೇನೆ ಎಂಬುದಾಗಿ ಘೋಷಿಸಿದ್ದರು.

ಈ ಬಗ್ಗೆ ನನ್ನ ಪತಿಯವರ ಅಭಿಪ್ರಾಯ ಏನಿದೆ ಎನ್ನುವುದು ನನಗೆ ತಿಳಿದಿಲ್ಲ. ನನ್ನ ಮಗನ ಬಳಿಯಾಗಲಿ, ನನ್ನ ಕುಟುಂಬದ ಇತರ ಸದಸ್ಯರ ಬಳಿಯಾಗಲಿ. ಇದರ ಬಗ್ಗೆ ನಾನು ಚರ್ಚಿಸಿಲ್ಲ. ಇದು ನಾನು ನನ್ನ ಆತ್ಮ ಸಾಕ್ಷಿಯ ಕರೆಗೆ ಓಗೊಟ್ಟು ಪ್ರಜ್ಞಾಪೂರ್ವಕವಾಗಿ ಕೈಗೊಂಡಿರುವ ತೀರ್ಮಾನ ಎಂದು ಹೇಳಿದ್ದರು.

ಈ ಹಂತದಲ್ಲಿ ಇಂತಹ ನಿರ್ಧಾರಕ್ಕೆ ಏಕೆ ಬಂದಿರಿ? ಎಂದು ಯಾರಾದರೂ ಕೇಳಬಹುದು. ಆರೋಪ ಕೇಳಿ ಬಂದ ದಿನವೇ ನಾನು ಈ ನಿರ್ಧಾರ ಮಾಡಿದ್ದೆ. ಆದರೆ, ಈ ಮುಡಾ ನಿವೇಶನ ಹಂಚಿಕೆಯ ಆರೋಪವನ್ನು ರಾಜಕೀಯ ದುರುದ್ದೇಶದಿಂದ ಮಾಡಲಾಗಿದ್ದು, ಈ ಅನ್ಯಾಯದ ವಿರುದ್ಧ ಹೋರಾಡಬೇಕು. ಅವರ ಸಂಚಿಗೆ ನಾವು ಬಲಿಯಾಗಬಾರದು ಎಂದು ಕೆಲವು ಹಿತೈಷಿಗಳು ಹೇಳಿದ ಕಾರಣಕ್ಕೆ ನಿವೇಶನ ವಾಪಸು ಮಾಡಬೇಕೆಂಬ ನಿರ್ಧಾರವನ್ನು ಕೈ ಬಿಟ್ಟಿದ್ದೆ ಎಂದು ತಿಳಿಸಿದ್ದರು.

ನನ್ನ ಈ ನಿರ್ಧಾರ ಅಚಲವಾಗಿದ್ದು, ಈ ನಿವೇಶನಗಳನ್ನು ವಾಪಸು ನೀಡುವುದರ ಜೊತೆಗೆ ಮುಡಾಕ್ಕೆ ಸಂಬಂಧಿಸಿದ ಎಲ್ಲಾ ಆರೋಪಗಳ ಬಗ್ಗೆ ಸಮಗ್ರ ತನಿಖೆ ಮಾಡಬೇಕೆಂದು ಆಗ್ರಹಿಸುತ್ತೇನೆ. ಕೊನೆಯದಾಗಿ, ಎಲ್ಲಾ ರಾಜಕೀಯ ಪಕ್ಷದ ನಾಯಕರು ಮತ್ತು ಮಾಧ್ಯಮ ಕ್ಷೇತ್ರದ ಬಂಧುಗಳಲ್ಲಿ ನನ್ನ ವಿನಮ್ರ ವಿನಂತಿ ಮಾಡಿದ್ದರು.

ದಯವಿಟ್ಟು ರಾಜಕೀಯ ಕ್ಷೇತ್ರದಿಂದ ದೂರವಿದ್ದು, ತಮ್ಮ ಪಾಡಿಗೆ ತಾವಿರುವ ರಾಜಕೀಯ ಕುಟುಂಬದ ಹೆಣ್ಣು ಮಕ್ಕಳನ್ನು ರಾಜಕೀಯ ದ್ವೇಷ ಸಾಧನೆಗಾಗಿ ವಿವಾದದ ಕಣಕ್ಕೆ ಎಳೆದು ತಂದು ಅವರ ಘನತೆ, ಗೌರವಗಳಿಗೆ ಹಾನಿ ಮಾಡಬೇಡಿ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿ ಮನವಿ ಮಾಡಿದ್ದರು.

ಈ ಬೆನ್ನಲ್ಲೇ ಅವರು ಹಿಂದಿರುಗಿಸಿದಂತ ಮುಡಾ 14 ಸೈಟ್ ಗಳ ಖಾತೆಯನ್ನು ರದ್ದುಗೊಳಿಸಿ ಮುಡಾ ಆದೇಶಿಸಿದೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

Share. Facebook Twitter LinkedIn WhatsApp Email

Related Posts

ನಂದಿನಿ ಉತ್ಪನ್ನ ಪ್ರಿಯರಿಗೆ ಸಂತಸದ ಸುದ್ದಿ: 18 ವಿವಿಧ ನಂದಿನಿ ಕೇಕ್, ಮಫಿನ್ ಮಾರುಕಟ್ಟೆಗೆ ಬಿಡುಗಡೆ | Nandini Products

01/06/2025 3:08 PM2 Mins Read

SHOCKING : ಶಿವಮೊಗ್ಗದಲ್ಲಿ ಘೋರ ದುರಂತ : ರಸ್ತೆಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ನವವಿವಾಹಿತ ಸಾವು!

01/06/2025 3:06 PM1 Min Read

BREAKING : ಹಟ್ಟಿ ಚಿನ್ನದ ಗಣಿಯಲ್ಲಿ ಗಣಿಗಾರಿಕೆ ವೇಳೆ ಮಣ್ಣು ಕುಸಿತ : ಓರ್ವ ಕಾರ್ಮಿಕ ಸಾವು, ಮತ್ತೊರ್ವನ ಕಾಲು ಕಟ್!

01/06/2025 2:50 PM1 Min Read
Recent News

ನಂದಿನಿ ಉತ್ಪನ್ನ ಪ್ರಿಯರಿಗೆ ಸಂತಸದ ಸುದ್ದಿ: 18 ವಿವಿಧ ನಂದಿನಿ ಕೇಕ್, ಮಫಿನ್ ಮಾರುಕಟ್ಟೆಗೆ ಬಿಡುಗಡೆ | Nandini Products

01/06/2025 3:08 PM

SHOCKING : ಶಿವಮೊಗ್ಗದಲ್ಲಿ ಘೋರ ದುರಂತ : ರಸ್ತೆಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ನವವಿವಾಹಿತ ಸಾವು!

01/06/2025 3:06 PM

BREAKING : ಹಟ್ಟಿ ಚಿನ್ನದ ಗಣಿಯಲ್ಲಿ ಗಣಿಗಾರಿಕೆ ವೇಳೆ ಮಣ್ಣು ಕುಸಿತ : ಓರ್ವ ಕಾರ್ಮಿಕ ಸಾವು, ಮತ್ತೊರ್ವನ ಕಾಲು ಕಟ್!

01/06/2025 2:50 PM

UGCET-2025ರ ಪರೀಕ್ಷೆಯ Rank ಪ್ರಕಟಣೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

01/06/2025 2:46 PM
State News
KARNATAKA

ನಂದಿನಿ ಉತ್ಪನ್ನ ಪ್ರಿಯರಿಗೆ ಸಂತಸದ ಸುದ್ದಿ: 18 ವಿವಿಧ ನಂದಿನಿ ಕೇಕ್, ಮಫಿನ್ ಮಾರುಕಟ್ಟೆಗೆ ಬಿಡುಗಡೆ | Nandini Products

By kannadanewsnow0901/06/2025 3:08 PM KARNATAKA 2 Mins Read

ಬೆಂಗಳೂರು: ಜೂನ್.1ರ ಇಂದು ವಿಶ್ವ ಹಾಲು ದಿನಾಚರಣೆ ( World Milk Day ). ಈ ಪ್ರಯುಕ್ತ ಕರ್ನಾಟಕ ಸಹಕಾರ…

SHOCKING : ಶಿವಮೊಗ್ಗದಲ್ಲಿ ಘೋರ ದುರಂತ : ರಸ್ತೆಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ನವವಿವಾಹಿತ ಸಾವು!

01/06/2025 3:06 PM

BREAKING : ಹಟ್ಟಿ ಚಿನ್ನದ ಗಣಿಯಲ್ಲಿ ಗಣಿಗಾರಿಕೆ ವೇಳೆ ಮಣ್ಣು ಕುಸಿತ : ಓರ್ವ ಕಾರ್ಮಿಕ ಸಾವು, ಮತ್ತೊರ್ವನ ಕಾಲು ಕಟ್!

01/06/2025 2:50 PM

UGCET-2025ರ ಪರೀಕ್ಷೆಯ Rank ಪ್ರಕಟಣೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

01/06/2025 2:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.