ಬೆಂಗಳೂರು: ಸೆಪ್ಟೆಂಬರ್.22ರಿಂದ ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭಗೊಳ್ಳಲಿದೆ. ತಂತ್ರಜ್ಞಾನ ಬಳಕೆ ಮೂಲಕ ನಿಖರ ಮಾಹಿತಿಯನ್ನು ಸಂಗ್ರಹ ಮಾಡಲಾಗುತ್ತದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಇಂದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025ರ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಆಯೋಗ ವೈಜ್ಞಾನಿಕವಾಗಿ, ಯಾವುದೇ ಲೋಪವಾಗದಂತೆ ಸಮೀಕ್ಷೆ ಕಾರ್ಯ ನಡೆಸಬೇಕು. ನಿಗದಿತ ಅವಧಿಯ ಒಳಗಾಗಿ ಸಮೀಕ್ಷೆ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸಬೇಕು ಎಂದರು.
ನಾಗಮೋಹನ ದಾಸ್ ಅವರು ಒಳಮೀಸಲಾತಿ ಸಮೀಕ್ಷೆಗೆ ವಿಶೇಷ ತಂತ್ರಜ್ಞಾನ ಬಳಸಿಕೊಂಡ ರೀತಿಯಲ್ಲಿ ಈ ಸಮೀಕ್ಷೆಯನ್ನು ಸಹ ಕೈಗೊಳ್ಳಲಾಗುವುದು. ಪ್ರತಿಯೊಂದು ಮನೆಯ ವಿದ್ಯುತ್ ಮೀಟರ್ ಆಧಾರದಲ್ಲಿ ಮನೆಯ ಜಿಯೋ ಟ್ಯಾಗ್ ಮಾಡಿ UHID ವಿಶೇಷ ಸಂಖ್ಯೆಯನ್ನು ನಮೂದಿಸಲಾಗುವುದು. ಈಗಾಗಲೇ 1.55 ಲಕ್ಷ ಮನೆಗಳಿಗೆ ಸಂಖ್ಯೆಯನ್ನು ಅಳವಡಿಸಲಾಗಿದೆ. ವಿದ್ಯುತ್ ಸಂಪರ್ಕ ಇಲ್ಲದ ಮನೆಗಳ ಸಮೀಕ್ಷೆಯನ್ನು ಸಹ ಮಾಡಲಾಗುವುದು ಎಂದರು.
ಸಮೀಕ್ಷೆ ಸಂದರ್ಭದಲ್ಲಿ ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಅನ್ನು ಮೊಬೈಲ್ ಸಂಖ್ಯೆಗೆ ಲಿಂಕ್ ಮಾಡುವ ಕಾರ್ಯವನ್ನು ಮಾಡಲಾಗುವುದು ಎಂದು ತಿಳಿಸಿದರು.
ನಾನು ಮುಸ್ಲೀಂ ಆಗಿರೋದರಿಂದಲೇ ವಿದೇಶದಿಂದ ಹಣದ ಆರೋಪ: ಯೂಟ್ಯೂಬರ್ ಸಮೀರ್ ಎಂ.ಡಿ
ಕೋಲಾರದಲ್ಲಿ ಶಾಲೆಗೆ ಬಾರದ ವಿದ್ಯಾರ್ಥಿಯನ್ನ ಪ್ರಶ್ನಿಸಿದ ಶಿಕ್ಷಕಿಯ ಮೇಲೆ ತಂದೆಯಿಂದ ಹಲ್ಲೆ