Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನೀವು ಪ್ರತಿದಿನ ನೆನೆಸಿದ ಒಣದ್ರಾಕ್ಷಿಯನ್ನು ಸೇವಿಸಿದರೆ ಏನಾಗುತ್ತದೆ ಗೊತ್ತೇ?

04/02/2026 6:29 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : `BPL’ ಕಾರ್ಡ್ ಇದ್ರೆ ಉಚಿತವಾಗಿ ಸಿಗಲಿದೆ `ದಂತ ಪಂಕ್ತಿ’ಗಳ ಸೌಲಭ್ಯ.!

04/02/2026 6:24 AM

Good News ; ಕೇಂದ್ರದಿಂದ ‘ತೂಕ ಆಧಾರಿತ ಆಭರಣ’ ನಿಯಮ ಜಾರಿ, ವಿದೇಶದಿಂದ ಒಬ್ಬರು 6 ಲಕ್ಷ ರೂ.ವರೆಗೆ ಸುಂಕ ರಹಿತ ‘ಚಿನ್ನ’ ತರಬಹುದು!

04/02/2026 6:23 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮತಗಳ್ಳತನ ಆರೋಪ: ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿಲ್ಲವೇಕೆ?- ಸಿ.ಟಿ ರವಿ ಪ್ರಶ್ನೆ
KARNATAKA

ಮತಗಳ್ಳತನ ಆರೋಪ: ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿಲ್ಲವೇಕೆ?- ಸಿ.ಟಿ ರವಿ ಪ್ರಶ್ನೆ

By kannadanewsnow0918/09/2025 4:31 PM

ಬೆಂಗಳೂರು: ತಮ್ಮ ಮತಗಳ್ಳತನ ಆರೋಪದ ಕುರಿತು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಚುನಾವಣಾ ಆಯೋಗಕ್ಕೆ ಪ್ರಮಾಣಪತ್ರದ ಮೂಲಕ ದೂರು ಕೊಡುತ್ತಿಲ್ಲವೇಕೆ? ಹಿಟ್ ಆಂಡ್ ರನ್ ಮಾಡುವುದೇ ಇವರ ಉದ್ದೇಶವೇ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಪ್ರಶ್ನಿಸಿದ್ದಾರೆ.

ಯಲಹಂಕದ ಸಿಂಗನಾಯಕನಹಳ್ಳಿಯ ರಮಡ ರೆಸಾರ್ಟ್ ನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು ಆಳಂದದಲ್ಲಿ ಮತದಾರರ ಪಟ್ಟಿಯಿಂದ ಹೆಸರು ತೆಗೆದ ಆರೋಪ ಕುರಿತ ಪ್ರಶ್ನೆಗೆ ಉತ್ತರಿಸಿದರು. ಚುನಾವಣಾ ಆಯೋಗ ಒಂದು ಸಾಂವಿಧಾನಿಕ ಸಂಸ್ಥೆ. ಯಾವುದಾದರೂ ದೂರಿದ್ದರೆ ಅಫಿಡವಿಟ್ ಮೂಲಕ ಸಲ್ಲಿಸಲು ತಿಳಿಸಿದ್ದರು ಎಂದು ಗಮನ ಸೆಳೆದರು. ರಾಹುಲ್ ಗಾಂಧಿ ಅವರು 100ಕ್ಕೂ ಹೆಚ್ಚು ಚುನಾವಣೆಯ ನೇತೃತ್ವ ವಹಿಸಿ 8-9 ಕಡೆ ಯಶಸ್ಸು ಕಂಡಿದ್ದಾರೆ. ಸುಮಾರು ಶೇ 92ರಷ್ಟು ವೈಫಲ್ಯ ಅವರದು. ತಮ್ಮ ಚುನಾವಣಾ ವೈಫಲ್ಯವನ್ನು ಅವರು ಚುನಾವಣಾ ಆಯೋಗದ ಹೆಗಲಿಗೆ ಕಟ್ಟಲು ಹೊರಟಿದ್ದಾರಾ ಎಂದು ಪ್ರಶ್ನೆ ಹಾಕಿದರು.

ಅವರದು ಆಧಾರಸಹಿತ ಆರೋಪವಾಗಿದ್ದರೆ ಆಧಾರದ ಜೊತೆ ಪ್ರಮಾಣಪತ್ರದೊಂದಿಗೆ ದೂರು ಸಲ್ಲಿಸಲಿ ಎಂದು ಆಗ್ರಹಿಸಿದರು. ಸಂವಿಧಾನ ಮತ್ತು ಸಾಂವಿಧಾನಿಕ ಸಂಸ್ಥೆ ಮೇಲೆ ನಂಬಿಕೆ ಇದ್ದರೆ, ಕಾನೂನುಬದ್ಧವಾಗಿ ದೂರು ಕೊಡಬೇಕು ಎಂದು ಒತ್ತಾಯಿಸಿದರು. ಅವರಿಗೆ ತಮ್ಮ ವೈಫಲ್ಯವನ್ನು ಬೇರೆಯವರ ತಲೆಗೆ ಕಟ್ಟುವ ದುರುದ್ದೇಶ ಇದ್ದಂತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಚುನಾವಣಾ ಆಯೋಗವು ದೆಹಲಿ, ಬೆಂಗಳೂರು ಕಚೇರಿ ಹೊಂದಿದ್ದು, ರಾಜ್ಯಮಟ್ಟದ ಆಡಳಿತದ ಮೇಲೆ ಅವಲಂಬಿತವಾಗಿದೆ. ಜಿಲ್ಲಾಧಿಕಾರಿ, ತಹಸೀಲ್ದಾರ್ ನೇತೃತ್ವ, ಕಂದಾಯ ಇನ್‍ಸ್ಪೆಕ್ಟರ್ ನೇತೃತ್ವ, ಬೂತ್ ಮಟ್ಟದ ಅಧಿಕಾರಿಯಾಗಿ ಬಹುತೇಕ ಶಾಲಾ ಶಿಕ್ಷಕರು, ಕಂದಾಯ ಇಲಾಖೆ, ಬಿಬಿಎಂಪಿ ನೌಕರರ ಮೇಲೆ ಅವಲಂಬಿತವಾಗಿದೆ. ಇವರ ಆರೋಪ ಯಾರ ಮೇಲೆ? ಅವರ ಮೇಲೆ ಆರೋಪವಾದರೆ, ಇವರಿಗೆ ಯಾರ ಮೇಲೂ ನಂಬಿಕೆ ಇಲ್ಲ ಎಂಬುದನ್ನು ಅದು ತೋರಿಸುತ್ತದೆ ಎಂದು ಟೀಕಿಸಿದರು.

ಇವರು ಆಸ್ತಿಕರೋ ನಾಸ್ತಿಕರೋ ಗೊತ್ತಿಲ್ಲ; ಆದರೆ, ಸಾವಿರ ಬಾರಿ ಸುಳ್ಳು ಹೇಳಿದರೆ, ಆ ಸುಳ್ಳೇ ಸತ್ಯವಾಗಿ ನಿರೂಪಿತ ಆಗುತ್ತದೆ ಎಂಬ ಮಾತನ್ನು ಗೊಬೆಲ್ ಹೇಳಿದ್ದ. ಬಹುಶಃ ಇವರು ಎಲ್ಲ ದೇವರನ್ನು ಹೊರಹಾಕಿ ಗೊಬೆಲನ್ನು ದೇವರಾಗಿ ಆರಾಧಿಸುವ ಸಾಧ್ಯತೆ ಇದೆ ಎಂದು ವ್ಯಂಗ್ಯವಾಡಿದರು.

ರಾಜ್ಯದಲ್ಲಿ ದೌರ್ಜನ್ಯಕ್ಕೆ ಒಳಗಾದ SC/ST ವ್ಯಕ್ತಿಯ ಅವಲಂಬಿತರಿಗೆ ಗುಡ್ ನ್ಯೂಸ್: ಸರ್ಕಾರಿ ನೌಕರಿ

ಮತಗಳ್ಳತನ ತೀರ್ಪಿನ ಬಳಿಕವೇ ತುರ್ತು ಪರಿಸ್ಥಿತಿ ಹೇರಿದ್ದ ಇಂದಿರಾ ಗಾಂಧಿ- ಛಲವಾದಿ ನಾರಾಯಣಸ್ವಾಮಿ

Share. Facebook Twitter LinkedIn WhatsApp Email

Related Posts

ರಾಜ್ಯದ ಜನತೆಗೆ ಗುಡ್ ನ್ಯೂಸ್ : `BPL’ ಕಾರ್ಡ್ ಇದ್ರೆ ಉಚಿತವಾಗಿ ಸಿಗಲಿದೆ `ದಂತ ಪಂಕ್ತಿ’ಗಳ ಸೌಲಭ್ಯ.!

04/02/2026 6:24 AM1 Min Read

ಸರ್ಕಾರಿ ಶಾಲೆಗೆ 1 ಎಕರೆ ಜಮೀನು ನೀಡಿ ಶಿಕ್ಷಣ ಪ್ರೇಮ ಮೆರೆದ ಸಚಿವ ಶಿವರಾಜ್ ತಂಗಡಗಿ ತಾಯಿ.!

04/02/2026 6:11 AM1 Min Read

BREAKING : ತಂಬಾಕು ಮೇಲಿನ ಶೇ.18ರಷ್ಟು ಅಬಕಾರಿ ಸುಂಕ ಹಿಂದಕ್ಕೆ : ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪ್ರಯತ್ನದ ಫಲ

04/02/2026 6:03 AM2 Mins Read
Recent News

ನೀವು ಪ್ರತಿದಿನ ನೆನೆಸಿದ ಒಣದ್ರಾಕ್ಷಿಯನ್ನು ಸೇವಿಸಿದರೆ ಏನಾಗುತ್ತದೆ ಗೊತ್ತೇ?

04/02/2026 6:29 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : `BPL’ ಕಾರ್ಡ್ ಇದ್ರೆ ಉಚಿತವಾಗಿ ಸಿಗಲಿದೆ `ದಂತ ಪಂಕ್ತಿ’ಗಳ ಸೌಲಭ್ಯ.!

04/02/2026 6:24 AM

Good News ; ಕೇಂದ್ರದಿಂದ ‘ತೂಕ ಆಧಾರಿತ ಆಭರಣ’ ನಿಯಮ ಜಾರಿ, ವಿದೇಶದಿಂದ ಒಬ್ಬರು 6 ಲಕ್ಷ ರೂ.ವರೆಗೆ ಸುಂಕ ರಹಿತ ‘ಚಿನ್ನ’ ತರಬಹುದು!

04/02/2026 6:23 AM

BREAKING: ಮುಂಬೈ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ &ಇಂಡಿಗೋ ವಿಮಾನಗಳ ನಡುವೆ ಡಿಕ್ಕಿ: ಅದೃಷ್ಟವಶಾತ್ ತಪ್ಪಿದ ಭಾರೀ ದುರಂತ

04/02/2026 6:16 AM
State News
KARNATAKA

ರಾಜ್ಯದ ಜನತೆಗೆ ಗುಡ್ ನ್ಯೂಸ್ : `BPL’ ಕಾರ್ಡ್ ಇದ್ರೆ ಉಚಿತವಾಗಿ ಸಿಗಲಿದೆ `ದಂತ ಪಂಕ್ತಿ’ಗಳ ಸೌಲಭ್ಯ.!

By kannadanewsnow5704/02/2026 6:24 AM KARNATAKA 1 Min Read

ಬೆಂಗಳೂರು : ರಾಜ್ಯದ ಜನತೆಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಬಿಪಿಎಲ್ ರೇಷನ್ ಕಾರ್ಡ್ ಇದ್ರೆ ದಂತ ಭಾಗ್ಯ ಯೋಜನೆಯಡಿ ಉಚಿತವಾಗಿ…

ಸರ್ಕಾರಿ ಶಾಲೆಗೆ 1 ಎಕರೆ ಜಮೀನು ನೀಡಿ ಶಿಕ್ಷಣ ಪ್ರೇಮ ಮೆರೆದ ಸಚಿವ ಶಿವರಾಜ್ ತಂಗಡಗಿ ತಾಯಿ.!

04/02/2026 6:11 AM

BREAKING : ತಂಬಾಕು ಮೇಲಿನ ಶೇ.18ರಷ್ಟು ಅಬಕಾರಿ ಸುಂಕ ಹಿಂದಕ್ಕೆ : ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪ್ರಯತ್ನದ ಫಲ

04/02/2026 6:03 AM

ಜಿ ರಾಮ್ ಜಿ ರದ್ದು ಮಾಡಿ, ಮನರೇಗಾ ಮರುಸ್ಥಾಪಿಸಿ : ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ನಿರ್ಣಯ ಮಂಡನೆ.!

04/02/2026 6:00 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.