ಬೆಂಗಳೂರು: ಏರ್ ಇಂಡಿಯಾ ವಿಮಾನದಲ್ಲಿ ಸಹಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪ ಹೊತ್ತಿರುವ ಶಂಕರ್ ಮಿಶ್ರಾ ಅವರನ್ನು ಬೆಂಗಳೂರಿನಲ್ಲಿ ಬಂಧಿಸಿ ದೆಹಲಿಗೆ ಕರೆತರಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಮಿಶ್ರಾ ಅವರನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಅಂಥ ಇದೇ ವೇಳೇ ತಿಳಿದು ಬಂದಿದೆ.
ಪೈಲಟ್ ಮತ್ತು ಸಹ-ಪೈಲಟ್ ಸೇರಿದಂತೆ ಏರ್ ಇಂಡಿಯಾ ಸಿಬ್ಬಂದಿಗೆ ಶುಕ್ರವಾರ ಸಮನ್ಸ್ ಜಾರಿ ಮಾಡಲಾಯಿತು.