ಮಂಡ್ಯ : ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಶೇರ್ ಮಾಡಿದ ಆರೋಪದಲ್ಲಿ ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಗ್ರಾಮದ ಜಾವೀದ್ ಎಂಬ ವ್ಯಕ್ತಿಯನ್ನು ಪೋಲೀಸರು ಬಂಧಿಸಿದ್ದಾರೆ.
ಆರೋಪಿ ಜಾವೀದ್ ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್ ಗೆ ಮೋದಿ ಶೂ ಧರಿಸುವಂತೆ ಎಡಿಟ್ ಮಾಡಿದ ಪೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುವ ಮೂಲಕ ಆರೋಪಿ ವಿಕೃತಿ ಮೆರೆದಿದ್ದ ಎನ್ನಲಾಗಿದೆ.
ಹೀಗಾಗಿ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಈ ಕುರಿತು ಅಧಿಕೃತ ಮಾಹಿತಿ ನೀಡಿದ್ದು, ಬಿಜೆಪಿ ಕಾರ್ಯಕರ್ತರ ದೂರಿನ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ನಾಗರಿಕ ಸಂಹಿತೆ (ಬಿಎನ್‌ಎಸ್) ಕಲಂ 152, 192, ಮತ್ತು 340 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ವರದಿ : ಗಿರೀಶ್ ರಾಜ್, ಮಂಡ್ಯ
ಮಂಡ್ಯದಲ್ಲಿ ಕಲುಷಿತ ಆಹಾರ ಪ್ರಕರಣ: ಗೋಕುಲ ವಿದ್ಯಾಸಂಸ್ಥೆಯ ಮಾನ್ಯತೆ ರದ್ದು
BREAKING: ಭಾರತ-ಪಾಕ್ ಉದ್ವಿಗ್ನತೆ: ಮೇ.10ರವರೆಗೆ ಹಲವು ನಗರಗಳಿಗೆ ವಿಮಾನ ಹಾರಾಟ ರದ್ದುಗೊಳಿಸಿದ ಇಂಡಿಗೋ