ರಾಮನಗರ: ಅನಧಿಕೃತವಾಗಿ ಚರ್ಚ್ ನಿರ್ಮಾಣ ಮಾಡಿ ಸಾಮೂಹಿಕ ಪ್ರಾರ್ಥನೆ ಹೆಸರಲ್ಲಿ ಮತಾಂತರ ಮಾಡಲಾಗುತ್ತಿದೆ ಎಂದು ಆರೋಪಿಸಿ ಚನ್ನಪಟ್ಟಣ ತಾಲೂಕಿನ ಕನ್ನಮಂಗಲ ಗ್ರಾಮಸ್ಥರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
BIGG NEWS: ರಾಜ್ಯದಲ್ಲಿ ಯಾರೇ ಮುಖ್ಯಮಂತ್ರಿ ಆಗಬೇಕೆಂದ್ರು ಪಂಚಮಸಾಲಿ ಆಶೀರ್ವಾದ ಬೇಕು: ಯತ್ನಾಳ್
ಗ್ರಾಮದ ಸೇರಿದ ಸರ್ವೇ ನಂ. 253ರಲ್ಲಿ ಅಕ್ರಮವಾಗಿ ಪ್ರಾರ್ಥನಾ ಮಂದಿರ ನಿರ್ಮಿಸಿ, ಬೇರೆ ಬೇರೆ ಜಿಲ್ಲೆಗಳಿಂದ ವಾರಪೂರ್ತಿ ಜನರನ್ನು ಕರೆತಂದು ಅವರನ್ನು ಮತಾಂತರಗೊಳ್ಳಲು ಮನಃಪರಿವರ್ತನೆ ಮಾಡಲಾಗುತ್ತಿದೆ. ಪ್ರತಿದಿನ 200ಕ್ಕೂ ಹೆಚ್ಚು ಸಂಖ್ಯೆಯಲ್ಲಿ ಜನ ಸೇರಿಸಿ ಡಿಜೆ ಮಾದರಿಯ ಧ್ವನಿವರ್ಧಕಗಳನ್ನು ಉಪಯೋಗಿಸಿಕೊಂಡು ಮತಾಂತರ ನಡೆಸುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ