ಚಾಮರಾಜನಗರ : ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯೊಬ್ಬ ಪೊಲೀಸ್ ಜೀಪ್ನಿಂದ ಬಿದ್ದು ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆ ಮಾಂಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತನನ್ನು ಕುಂತೂರು ಮೋಳೆ ಗ್ರಾಮದ ನಿಂಗರಾಜು (24) ಎಂದು ಗುರುತಿಸಲಾಗಿದೆ. . ಅಪ್ರಾಪ್ತೆಯ ಕಿಡ್ನ್ಯಾಪ್ ಪ್ರಕರಣದ ಆರೋಪಿಯಾಗಿದ್ದ ನಿಂಗರಾಜನನ್ನು . ವಿಚಾರಣೆಗೆಂದು ಪೊಲೀಸ್ ಠಾಣೆಗೆ ಕರೆತರುತ್ತಿದ್ದ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಚಲಿಸುತ್ತಿದ್ದ ಜೀಪ್ನಿಂದ ನೆಗೆದಿದ್ದನು.
ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡಿದ್ದ ಈತನನ್ನು ಯಳಂದೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಈತ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
BREAKING NEWS : ಮುರುಘಾ ಶ್ರೀ ವಿರುದ್ಧ ಪಿತೂರಿ ಕೇಸ್ : ಬಸವರಾಜನ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ