ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ ಶೇ. 100 % ರಷ್ಟು ಪಲ್ಸ್ ಪೋಲಿಯೋ ಗುರಿ ಸಾಧಿಸಲು ಅಗತ್ಯ ಕ್ರಮವಹಿಸುವಂತೆ ಮುಖ್ಯ ಆಯಯುಕ್ತರಾದ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದಲ್ಲಿ ಪಲ್ಸ್ ಪೋಲಿಯೋ ಲಸಿಕೆ ನೀಡುವ ಕುರಿತು ವರ್ಚುವಲ್ ಮೂಲಕ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಡಿಸೆಂಬರ್ 21 ರಿಂದ 24 ರವರೆಗೆ 4 ದಿನಗಳ ಕಾಲ “ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರ” ಮದ ಭಾಗವಾಗಿ ಎಲ್ಲಾ 5 ನಗರ ಪಾಲಿಕೆಗಳಲ್ಲಿ ಅಗತ್ಯ ಕ್ರಮವಹಿಸಿ ಶೇ. 100 % ಗುರಿ ಸಾಧಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದಾದ್ಯಂತ ಪಲ್ಸ್ ಫೋಲಿಯೋ ಕುರಿತು ನಾಗರಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ನರ್ಸಿಂಗ್ ಕಾಲೇಜುಗಳು, ವೈದ್ಯಕೀಯ ಕಾಲೇಜುಗಳು, ಪ್ಯಾರಾ ಮೆಡಿಕಲ್ ಕಾಲೇಜುಗಳ ವಿದ್ಯಾರ್ಥಿಗಳನ್ನು ಸ್ವಯಂಸೇವಕರನ್ನಾಗಿ ಬಳಸಿಕೊಂಡು ಎಲ್ಲರಿಗೂ ಪೊಲೀಯೋ ಹನಿ ಹಾಕುವ ಕಾರ್ಯವಾಗಬೇಕೆಂದು ಸೂಚನೆ ನೀಡಿದರು.
ನಗರದ ಬಸ್ ನಿಲ್ದಾಣ, ಮಾರುಕಟ್ಟೆ, ರೈಲ್ವೇ ಮತ್ತು ಮೆಟ್ರೊ ನಿಲ್ದಾಣ, ಮಾಲ್ ಗಳು, ಪ್ರಮುಖ ಉದ್ಯಾನವನಗಳು, ಪ್ರವಾಸಿ ತಾಣಗಳು, ಕೇಕ್ ಪ್ರದರ್ಶನ, ಕೊಳಗೇರಿ ಪ್ರದೇಶಗಳು ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ಹೆಚ್ಚು ಸಂಚಾರಿ ಲಸಿಕಾ ತಂಡಗಳನ್ನು ನಿಯೋಜಿಸಿಕೊಂಡು ಪೋಲಿಯೊ ಹನಿ ಹಾಕುವ ಕೆಲಸ ಮಾಡಬೇಕೆಂದು ಸೂಚಿಸಿದರು.
ನಗರದಲ್ಲಿ 2,700 ಕ್ಕೂ ಹೆಚ್ಚು ಅಪಾರ್ಟ್ ಮೆಂಟ್ ಗಳು ಬರಲಿದ್ದು, ಅಪಾರ್ಟ್ ಮೆಂಟ್ ಅಸೋಸಿಯೇಷನ್ಸ್ ಗಳ ಜೊತೆ ಮಾತನಾಡಿ, ಪಲ್ಸ್ ಪೋಲಿಯೋ ಲಸಿಕೆ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಅರಿವು ಮೂಡಿಸಬೇಕು. ಜೊತೆಗೆ ಐದೂ ನಗರ ಪಾಲಿಕೆಗಳಲ್ಲಿ ಎಲ್ಲೆಲ್ಲಿ ಬೂತ್ ಗಳ ವ್ಯವಸ್ಥೆ ಮಾಡಲಾಗಿದೆ ಆ ಮಾಹಿತಿ ಸುಲಭವಾಗಿ ಲಭ್ಯವಾಗುವಂತೆ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮುಖ್ಯ ಆರೋಗ್ಯಾಧಿಕಾರಿಯಾದ ಡಾ: ಎಸ್.ಎಸ್ ಮದನಿ ರವರು ಮಾತನಾಡಿ, ನಗರದಲ್ಲಿ 2025 ರ ಡಿಸೆಂಬರ್ 21 ರಂದು ಬೆಳಗ್ಗೆ 8 ರಿಂದ ಸಂಜೆ 5 ರವರೆಗೆ ಬೂತ್ ಗಳಲ್ಲಿ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗುವುದು. ಡಿಸೇಂಬರ್ 22 ರಿಂದ 24 ರವರೆಗೆ ಮನೆ-ಮನೆ ಭೇಟಿ ನೀಡಿ ಲಸಿಕೆ ಹಾಕಲಾಗುವುದು. ಅದಲ್ಲದೆ 21 ರಿಂದ 24 ರವರೆಗೆ 4 ದಿನಗಳ ಕಾಲ ಹೆಚ್ಚು ಜನದಟ್ಟಣೆ ಹೊಂದಿರುವ ಪ್ರದೇಶ, ಕೋಳಗೇರಿ ಪ್ರದೇಶಗಳು, ವಲಸಿಗರ ಪ್ರದೇಶ ಸೇರಿದಂತೆ ಇನ್ನಿತರ ಕಡೆ ಸಂಚಾರಿ ಲಸಿಕಾ ತಂಡಗಳ ಮೂಲಕ ಲಸಿಕೆ ಹಾಕಲು ಯೋಜನೆ ರೂಪಿಸಲಾಗಿದೆ ಎಂದು ಮಾಹಿತಿ ನೀಡಿದರು.
ನವಜಾತ ಶಿಶುವಿನಿಂದ 5 ವರ್ಷದೊಳಗಿನ ಎಲ್ಲಾ ಮಕ್ಕಳೂ 2 ಹನಿಗಳ ಪಾಲಿಯೋ ಲಸಿಕೆ ಕಡ್ಡಾಯವಾಗಿ ಪಡೆಯಬೇಕು. ಈ ಹನಿಗಳನ್ನು ನಮ್ಮ ಕ್ಲಿನಿಕ್‌ಗಳಲ್ಲಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ, ಹೆರಿಗೆ ಆಸ್ಪತ್ರೆಗಳಲ್ಲಿ, ರೆಫರಲ್ ಆಸ್ಪತ್ರೆಗಳಲ್ಲಿ, ಖಾಸಗಿ ಆಸ್ಪತ್ರೆಗಳಲ್ಲಿ, ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಾಗುತ್ತದೆ ಎಂದು ಹೇಳಿದರು.
ನಗರದಲ್ಲಿ ಈಗಾಗಲೇ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಪೈಕಿ ಆಟೋ ಟಿಪ್ಪರ್ ಗಳ ಮೂಲಕ ಧ್ವನಿ ವರ್ಧಕಗಳಲ್ಲಿ ಅರಿವು ಮೂಡಿಸಲಾಗುತ್ತಿದೆ. ಅದರ ಜೊತೆಗೆ ಮೆಟ್ರೋ, ಮಾಲ್ ಗಳು, ಚಿತ್ರಮಂದಿರಗಳಲ್ಲಿಯೂ ಕೂಡಾ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.
11.34 ಲಕ್ಷ ಮಕ್ಕಳಿಕೆ ಪೋಲಿಯೋ ಹನಿ ಹಾಕುವ ಗುರಿ:
ಜಿಬಿಎ ವ್ಯಾಪ್ತಿಯಲ್ಲಿ 5 ನಗರ ಪಾಲಿಕೆಗಳಲ್ಲಿ 11,34,988 ಐದು ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೊಲೀಯೋ ಹನಿ ಹಾಕುವ ಗುರಿಯಿದೆ. ಈ ಪೈಕಿ ನಗರದಾದ್ಯಂತ 3,391 ಬೂತ್ಸ್, 601 ಸಂಚಾರಿ ತಂಡ, 460 ಮೊಬೈಲ್ ತಂಡ ಸೇರಿದಂತೆ ಒಟ್ಟು 4,452 ಬೂತ್ಸ್ ಗಳ ಮೂಲಕ ಲಸಿಕೆ ಹಾಕಲು ಯೋಜನೆ ರೂಪಿಸಲಾಗಿದೆ. ನಗರದಲ್ಲಿ 17,808 ಸ್ವಯಂಸೇವಕರನ್ನು ಲಸಿಕೆ ಹಾಕಲು ನಿಯೋಜಿಸಿಕೊಳ್ಳಲಾಗುತ್ತಿದೆ. ಅದನ್ನು ಮೇಲ್ವಿಚಾರಣೆ ಮಾಡಲು 881 ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ.
ಇತರೆ ಪ್ರಮುಖ ಅಂಶಗಳು:
* ರಾಜ್ಯ ಸರ್ಕಾರದ ಆರೋಗ್ಯ ವಿಭಾಗದಿಂದ ಆಟೋಗಳನ್ನು ನಿಯೋಜಿಸಿ ಧ್ವನಿವರ್ಧಕಗಳ ಮೂಲಕ ಅರಿವು ಮೂಡಿಸುವುದು
* ಜನನಿಬಿಡ ಸ್ಥಳಗಳಲ್ಲಿ ಪ್ರಚಾರಕ್ಕಾಗಿ ಪೋಸ್ಟರ್, ಬ್ಯಾನರ್ ಗಳನ್ನು ಅಂಟಿಸಲು ಕ್ರಮವಹಿಸಿ
* ಆಯಾ ನಗರ ಪಾಲಿಕೆಗಳಲ್ಲಿ ಪಲ್ಸ್ ಪೋಲಿಯೋ ಲಸಿಕೆ ಕುರಿತು ಶಾಲಾ ಮಕ್ಕಳೊಂದಿಗೆ ಜಾಥಾ ಕಾರ್ಯಕ್ರಮಗಳನ್ನು ನಡೆಸುವುದು
ಈ ಸಭೆಯಲ್ಲಿ ನಗರ ಪಾಲಿಕೆಗಳ ಅಪರ ಆಯುಕ್ತರುಗಳಾದ ಲೋಖಂಡೆ ಸ್ನೇಹಲ್ ಸುಧಾಕರ್, ನವೀನ್ ಕುಮಾರ್ ರಾಜು, ದಲ್ಜಿತ್ ಕುಮಾರ್, ಆರೋಗ್ಯಾಧಿಕಾರಿಗಳು, ಉಪ ಆರೋಗ್ಯಾಧಿಕಾರಿಗಳು, ಆರೋಗ್ಯ ವೈದ್ಯಾಧಿಕಾರಿಗಳು ಸೇರಿದಂತೆ ಮತ್ತಿತರ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
BREAKING: ಸಕಲ ಸರ್ಕಾರಿ ಗೌರವಗಳೊಂದಿಗೆ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ: ಇನ್ನೂ ಕೊಡುಗೈ ದಾನಿ ನೆನಪು ಮಾತ್ರ








