Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೈಲಿನಲ್ಲಿ ಖಾಲಿ ಸೀಟು ಹುಡುಕಲು ಟಿಟಿಇ ಬೆನ್ನ ಹಿಂದೆ ಅಲೆಯುವ ಅಗತ್ಯವಿಲ್ಲ! ಐಆರ್‌ಸಿಟಿಯ ಈ ಫೀಚರ್ ಮೂಲಕ ನೀವೇ ಪತ್ತೆಹಚ್ಚಿ!

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

​ಬೇಸಿಗೆಯ ಬಿಸಿಲು ನಿಮ್ಮನ್ನು ಹೆಚ್ಚು ಕೋಪಿಷ್ಠರನ್ನಾಗಿಸುತ್ತಿದೆಯೇ? ತಾಪಮಾನ ಏರಿಕೆ ಮತ್ತು ಮಾನಸಿಕ ಒತ್ತಡದ ನಡುವಿನ ಸಂಬಂಧ ಇಲ್ಲಿದೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್
KARNATAKA

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಪವರ್‌ ಕಂಪನಿ ಆಫ್‌ ಕರ್ನಾಟಕ ಲಿಮಿಟೆಡ್ ಮೂಲಕ ರಾಜ್ಯವು ಕಳೆದ ಎರಡೂವರೆ ತಿಂಗಳಲ್ಲಿ ಪ್ರತಿ ಯೂನಿಟ್‌ಗೆ 9.08 ರೂಪಾಯಿಯಂತೆ ಬರೋಬ್ಬರಿ 423 ಕೋಟಿ ರೂಪಾಯಿ ಮೌಲ್ಯದ ವಿದ್ಯುತ್ತನ್ನು ರಾಷ್ಟ್ರೀಯ ಗ್ರಿಡ್‌ಗೆ ಮಾರಾಟ ಮಾಡಿದೆ ಎಂದು ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಬುಧವಾರ ತಿಳಿಸಿದರು.

ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ನೇತೃತ್ವದ ನೂತನ ಸರ್ಕಾರದಲ್ಲಿ ಇಂಧನ ಸಚಿವರಾಗಿ ಮತ್ತೆ ಅಧಿಕಾರ ವಹಿಸಿಕೊಂಡು ನಂತರ ಬೆಸ್ಕಾಂ ಕಾರ್ಪೋರೆಟ್‌ ಕಚೇರಿಯಲ್ಲಿ ಬುಧವಾರ ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದ ಸಚಿವ ಜಾರ್ಜ್‌ ಅವರು ಮಾನ್ಸೂನ್ ಸಿದ್ಧತೆ, ಕುಸುಮ್‌ ಯೋಜನೆ, ಮುಖ್ಯಮಂತ್ರಿ ಸೌರ ಕೃಷಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲಿಸಿ ಮಾತನಾಡಿದರು.

“2026ರ ಏಪ್ರಿಲ್ – ಜೂನ್ (8ರವರೆಗೆ) ಅವಧಿಯಲ್ಲಿ 423 ಕೋಟಿ ರೂಪಾಯಿ ಮೌಲ್ಯದ ವಿದ್ಯುತನ್ನು ರಾಷ್ಟ್ರೀಯ ಗ್ರಿಡ್‌ಗೆ ಮಾರಾಟ ಮಾಡಿದ್ದೇವೆ. ಹಗಲಿನ ವೇಳೆ ಕಡಿಮೆ ದರಕ್ಕೆ ವಿದ್ಯುತ್‌ ಖರೀದಿಸಿ, ರಾತ್ರಿ ವೇಳೆ ಜಲ ಮತ್ತು ಉಷ್ಣ ವಿದ್ಯುತ್‌ ಸ್ಥಾವರಗಳಲ್ಲಿ ವಿದ್ಯುತ್‌ ಉತ್ಪಾದಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗಿದೆ. ಈ ಬೇಸಿಗೆಯಲ್ಲಿ ವಿದ್ಯುತ್‌ ಬೇಡಿಕೆಯನ್ನು ಸಮರ್ಥವಾಗಿ ಪೂರೈಸುವ ಜತೆಗೆ ಈ ಸಾಧನೆ ಮಾಡಿದ್ದೇವೆ. ವಿದ್ಯುತ್ ಉತ್ಪಾದನೆ, ಗ್ರಿಡ್ ನಿರ್ವಹಣೆ ಮತ್ತು ಇಂಧನ ಮಾರುಕಟ್ಟೆಯಲ್ಲಿ ವ್ಯಾವಹಾರಿಕ ಜಾಣ್ಮೆಯ ಫಲ ಇದು” ಎಂದು ಇಂಧನ ಸಚಿವರು ಹೇಳಿದರು.

ಕಳೆದ ಮೂರು ಹಣಕಾಸು ವರ್ಷಗಳಲ್ಲಿ ಇಂಧನ ಬೇಡಿಕೆ ಮತ್ತು ಬಳಕೆಯ ಕುರಿತು ಪ್ರಮುಖ ಅಂಕಿ-ಅಂಶಗಳನ್ನು ನೀಡಿದ ಸಚಿವ ಕೆ.ಜೆ. ಜಾರ್ಜ್, “2023-24ನೇ ಸಾಲಿನಲ್ಲಿ ಗರಿಷ್ಠ ಬೇಡಿಕೆ 17,220 ಮೆಗಾವ್ಯಾಟ್ ಇದ್ದು, 94,982 ದಶಲಕ್ಷ ಯೂನಿಟ್ ಬಳಕೆಯಾಗಿತ್ತು. ಆ ವರ್ಷ ಬರಗಾಲ ಇದ್ದುದರಿಂದ ಬಳಕೆ ಪ್ರಮಾಣ ಶೇ. 24ರಷ್ಟು ಹೆಚ್ಚಾಗಿತ್ತು. 2024-25ನೇ ಸಾಲಿನಲ್ಲಿ 18,395 ಮೆಗಾವ್ಯಾಟ್ ಗರಿಷ್ಠ ಬೇಡಿಕೆಯೊಂದಿಗೆ 92,699 ಮಿಲಿಯನ್ ಯೂನಿಟ್ ಬಳಕೆಯಾಗಿ ಶೇ. -2ರಷ್ಟು ಹೆಚ್ಚಳವಾಗಿತ್ತು. 2025-26ರಲ್ಲಿ 18,655 ಮೆಗಾವ್ಯಾಟ್ ನಷ್ಟು ಗರಿಷ್ಠ ಬೇಡಿಕೆಯೊಂದಿಗೆ 96,383 ದಶಲಕ್ಷ ಯೂನಿಟ್ ಬಳಕೆಯಾಗಿ ಶೇ. 4ರಷ್ಟು ಹೆಚ್ಚಳ ಕಂಡುಬಂದಿತ್ತು. 2026-27ನೇ ಸಾಲಿನಲ್ಲಿ ಏಪ್ರಿಲ್ 1ರಿಂದ ಜೂನ್ 8ರವರೆಗೆ 21,789 ಮಿಲಿಯನ್ ಯೂನಿಟ್ ಬಳಕೆಯಾಗಿದೆ. ಇದು ಶೇ. 22.39ರಷ್ಟು ಏರಿಕೆಯಾಗಿದ್ದು, ಹಿಂಗಾರು ವೈಫಲ್ಯದಿಂದ ಬಳಕೆ ಹೆಚ್ಚಾಗಿದೆ,”ಎಂದರು.

ವಿದ್ಯುತ್ ಉತ್ಪಾದನೆ

“ವಿದ್ಯುತ್ ಉತ್ಪಾದನೆಯಲ್ಲಿ ಸದೃಢ ಹೆಜ್ಜೆಗಳನ್ನಿಡುತ್ತಿರುವ ರಾಜ್ಯವು 2025–26ರಲ್ಲಿ ಉಷ್ಣ, ಜಲ, ಅನಿಲ, ಸೌರ, ಪವನ ಮತ್ತು ತ್ಯಾಜ್ಯದಿಂದ ಇಂಧನ ಮೂಲಗಳಿಂದ ಒಟ್ಟು ವಿದ್ಯುತ್ 38,041 ಮಿಲಿಯನ್‌ ಯೂನಿಟ್‌ ಉತ್ಪಾದಿಸಿದೆ. 2026–27ರ ಅಂದಾಜಿಸಲಾಗಿರುವ ವಿದ್ಯುತ್‌ ಉತ್ಪಾದನೆಯ ಪ್ರಮಾಣ 38,205 ಮಿಲಿಯನ್‌ ಯೂನಿಟ್‌ ಆಗದೆ. ಗುಣಮಟ್ಟದ ವಿದ್ಯುತ್ ಪೂರೈಕೆ ಮತ್ತು ಸಾಮರ್ಥ್ಯ ವೃದ್ಧಿ ಜತೆಗೆ ವಿದ್ಯುತ್‌ ಮೂಲಸೌಕರ್ಯ ಸುಧಾರಣೆ ಮೂಲಕ ಇಂಧನ ಇಲಾಖೆಯು ಸುಸ್ಥಿರ ಪ್ರಗತಿ ಸಾಧಿಸುತ್ತಿದೆ,”ಎಂದು ಜಾರ್ಜ್‌ ಹೇಳಿದರು.

ಮಾನ್ಸೂನ್ ಸಿದ್ಧತೆ

ಮಳೆ ಮತ್ತು ಗಾಳಿಯಿಂದಾಗುವ ಹಾನಿ ನಂತರ ವಿದ್ಯುತ್ ಅನ್ನು ತ್ವರಿತವಾಗಿ ಪುನಃಸ್ಥಾಪಿಸಿ ಜನರಿಗೆ ಯಾವುದೇ ರೀತಿ ಸಮಸ್ಯೆ ಆಗದಂತೆ ಎಚ್ಚರವಹಿಸಿ ಎಂದು ಸಚಿವರ ಜಾರ್ಜ್‌ ಅಧಿಕಾರಿಗಳಿಗೆ ಸೂಚಿಸಿದರು.

ಸಚಿವರಿಗೆ ಈ ಕುರಿತು ಮಾಹಿತಿ ನೀಡಿದ ಅಧಿಕಾರಿಗಳು, “ಈವರೆಗೆ ಎಲ್ಲಾ ಎಸ್ಕಾಂಗಳ ವ್ಯಾಪ್ತಿಯಲ್ಲಿ ಹಾನಿಗೊಳಗಾದ 33,400 ಕಂಬಗಳು, 1,441 ಟ್ರಾನ್ಸ್‌ಫಾರ್ಮರ್‌ಗಳು ಮತ್ತು 343.56 ಕಿ.ಮೀ. ವಿದ್ಯುತ್ ಮಾರ್ಗಗಳನ್ನು ಬದಲಾಯಿಸಲಾಗಿದೆ. ಸದ್ಯ 20,012 ಲೈನ್‌ಮೆನ್‌ಗಳು ಕಾರ್ಯ ನಿರ್ವಹಿಸುತ್ತಿದ್ದು, ಮಳೆಗಾಲದ ಕಾರ್ಯಾಚರಣೆಗಾಗಿ ಹೆಚ್ಚುವರಿಯಾಗಿ 4,883 ಲೈನ್‌ಮೆನ್‌ಗಳನ್ನು ವಿಶೇಷವಾಗಿ ನೇಮಿಸಿದೆ. ಅಲ್ಲದೇ, 99,530 ಕಂಬಗಳು ಮತ್ತು 12,733 ಟ್ರಾನ್ಸ್‌ಫಾರ್ಮರ್‌ಗಳು ಸೇರಿದಂತೆ ಅಗತ್ಯ ಸಾಮಗ್ರಿಗಳ ದಾಸ್ತಾನಿದೆ,” ಎಂದರು.

ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ರಾಮ್ ಪ್ರಸಾತ್ ಮನೋಹರ್, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್. ಶಿವಶಂಕರ, ಪಿಸಿಕೆಎಲ್ ವ್ಯವಸ್ಥಾಪಕ ನಿರ್ದೇಶಕ ಕೋದಂಡಪಾಣಿ, ಕ್ರೆಡಲ್‌ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪ್ಪಯ್ಯ ಹಾಗೂ ಇತರ ಎಸ್ಕಾಂಗಳ ವ್ಯವಸ್ಥಾಪಕ ನಿರ್ದೇಶಕರು ಮತ್ತು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Share. Facebook Twitter LinkedIn WhatsApp Email

Related Posts

ಜನರ ಪ್ರೀತಿ, ವಿಶ್ವಾಸಕ್ಕೆ ಎಂದಿಗೂ ಚಿರಋಣಿ: ಮದ್ದೂರು ಶಾಸಕ ಕೆ.ಎಂ.ಉದಯ್

2 Mins Read

BIG NEWS: ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದ ಖಜಾನೆಗೆ ಕನ್ನ: ಅರ್ಚಕರು, ಸಿಬ್ಬಂದಿ ವಿರುದ್ಧ ದೂರು!

2 Mins Read

ಮಕ್ಕಳ ಪೋಷಕರ ಗಮನಕ್ಕೆ: ಜೂನ್.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ, ತಪ್ಪದೇ ಹಾಕಿಸಿ

1 Min Read
Recent News

ರೈಲಿನಲ್ಲಿ ಖಾಲಿ ಸೀಟು ಹುಡುಕಲು ಟಿಟಿಇ ಬೆನ್ನ ಹಿಂದೆ ಅಲೆಯುವ ಅಗತ್ಯವಿಲ್ಲ! ಐಆರ್‌ಸಿಟಿಯ ಈ ಫೀಚರ್ ಮೂಲಕ ನೀವೇ ಪತ್ತೆಹಚ್ಚಿ!

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

​ಬೇಸಿಗೆಯ ಬಿಸಿಲು ನಿಮ್ಮನ್ನು ಹೆಚ್ಚು ಕೋಪಿಷ್ಠರನ್ನಾಗಿಸುತ್ತಿದೆಯೇ? ತಾಪಮಾನ ಏರಿಕೆ ಮತ್ತು ಮಾನಸಿಕ ಒತ್ತಡದ ನಡುವಿನ ಸಂಬಂಧ ಇಲ್ಲಿದೆ!

​ಏರ್ ಇಂಡಿಯಾ ವಿಮಾನ ದುರಂತ: ಸಂತ್ರಸ್ತ ಕುಟುಂಬಗಳ ಮೇಲೆ ಅಂತಿಮ ಪರಿಹಾರಕ್ಕಾಗಿ ಯಾವುದೇ ಒತ್ತಡವಿಲ್ಲ; ಏರ್ ಇಂಡಿಯಾ ಸ್ಪಷ್ಟನೆ

State News
KARNATAKA

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಪವರ್‌ ಕಂಪನಿ ಆಫ್‌ ಕರ್ನಾಟಕ ಲಿಮಿಟೆಡ್ ಮೂಲಕ ರಾಜ್ಯವು ಕಳೆದ ಎರಡೂವರೆ ತಿಂಗಳಲ್ಲಿ ಪ್ರತಿ ಯೂನಿಟ್‌ಗೆ 9.08 ರೂಪಾಯಿಯಂತೆ…

ಜನರ ಪ್ರೀತಿ, ವಿಶ್ವಾಸಕ್ಕೆ ಎಂದಿಗೂ ಚಿರಋಣಿ: ಮದ್ದೂರು ಶಾಸಕ ಕೆ.ಎಂ.ಉದಯ್

BIG NEWS: ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದ ಖಜಾನೆಗೆ ಕನ್ನ: ಅರ್ಚಕರು, ಸಿಬ್ಬಂದಿ ವಿರುದ್ಧ ದೂರು!

ಮಕ್ಕಳ ಪೋಷಕರ ಗಮನಕ್ಕೆ: ಜೂನ್.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ, ತಪ್ಪದೇ ಹಾಕಿಸಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.