ಬೆಂಗಳೂರು: “ದೇಶದ್ರೋಹ ಕೆಲಸದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಪೊಲೀಸರ ತನಿಖೆಯಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಉತ್ತರಿಸಿದಂತ ಅವರು, “ಪಾಕ್ ಪರ ಘೋಷಣೆ ಪ್ರಕರಣದಲ್ಲಿ ಪೊಲೀಸರಿಗೆ ತನಿಖೆ ನಡೆಸಲು ಸ್ವಾತಂತ್ರ್ಯ ನೀಡಿದ್ದೇವೆ. ಈ ಬಗ್ಗೆ ಗೃಹಸಚಿವರು ಹೇಳಿಕೆ ನೀಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಿ ಎಂದು ನಮ್ಮ ರಾಜ್ಯಸಭಾ ಸದಸ್ಯರು ಕೂಡ ಅವತ್ತೇ ಹೇಳಿಕೆ ನೀಡಿದ್ದಾರೆ ಎಂದರು.
ಬಿಜೆಪಿಯವರು ತಮಗೆ ಬೇಕಾದವರ ಕೈಯಿಂದ ಏನೇ ವರದಿ ತರಿಸಿಕೊಳ್ಳಬಹುದು ಅದು ಅಧಿಕೃತವಲ್ಲ. ಪೊಲೀಸ್ ಅಧಿಕಾರಿಗಳು ಸಮಗ್ರ ತನಿಖೆ ಮಾಡಲಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಬಿಜೆಪಿ ಕಾರ್ಯಕರ್ತರ ಪ್ರಕರಣವೂ ತನಿಖೆ
ಕೆಲ ಸಚಿವರು ಪಾಕ್ ಪರ ಘೋಷಣೆ ಕೂಗಿಲ್ಲ ಎಂದು ಹೇಳಿದ್ದರ ಬಗ್ಗೆ ಕೇಳಿದಾಗ, “ಅವರ ಅಭಿಪ್ರಾಯ ಅವರು ಹೇಳಿದ್ದಾರೆ. ಇಲ್ಲಿ ವಿಡಿಯೋ ತಿರುಚಿರಬಹುದು. ಇಲ್ಲಿ ನಮ್ಮ ಅಭಿಪ್ರಾಯಕ್ಕಿಂತ ಪೊಲೀಸರ ತನಿಖೆಯ ವರದಿ ಮುಖ್ಯ. ಈ ಪ್ರಕರಣದ ತನಿಖೆಗಾಗಿ ಧ್ವನಿ ಮಾದರಿ ನೀಡಬೇಕು. ನಿನ್ನೆಯೇ ಪೊಲೀಸರು ಕೆಲವರನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಮಂಡ್ಯದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದ ಪ್ರಕರಣವನ್ನು ತನಿಖೆ ಮಾಡುತ್ತೇವೆ. ಬಿಜೆಪಿ ಸ್ನೇಹಿತರು ಅದಕ್ಕೂ ಉತ್ತರ ನೀಡಬೇಕು”ಎಂದು ತಿಳಿಸಿದರು.
ಇದರಿಂದ ಪಕ್ಷಕ್ಕೆ ಮುಜುಗರ ಆಗುವುದಿಲ್ಲವೇ ಎಂದು ಕೇಳಿದಾಗ, “ನನ್ನ ಪ್ರಕಾರ ಇಲ್ಲಿ ಯಾರೂ ತಪ್ಪು ಮಾಡಿಲ್ಲ. ಆದರೆ ತನಿಖೆ ಪ್ರಕ್ರಿಯೆಯಲ್ಲಿದೆ” ಎಂದು ತಿಳಿಸಿದರು.
ನನಗೆ ದೇಶವೇ ಮೊದಲು, ಅವರಿಗೆ ಕುಟುಂಬವೇ ಮೊದಲು: ವಿಪಕ್ಷಳಿಗೆ ತಿವಿದ ಪ್ರಧಾನಿ ನರೇಂದ್ರ ಮೋದಿ
ಮಾರ್ಚ್14 ಅಥವಾ 15 ರಂದು ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆ, 7 ಹಂತಗಳಲ್ಲಿ ಮತದಾನ: ವರದಿ