ಬೆಂಗಳೂರು: ರಾಜ್ಯದಲ್ಲಿ ದೇವದಾಸಿ ಪದ್ಧತಿ ನಿಷೇಧಿಸಲಾಗಿದೆ. ಈ ಪದ್ದತಿ ಎಲ್ಲಿಯಾದರೂ ನಡೆದದ್ದು ಗಮನಕ್ಕೆ ಬಂದ್ರೆ ಆ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾಧಿಕಾರಿಗಳ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳುವುದಾಗಿ ಸಿಎಂ ಸಿದ್ಧರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಈ ಎಚ್ವರಿಕೆ ನೀಡಿದರು.
ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಬೇಲ್ ಸಿಕ್ಕರೆ ಅದು ನಿಮ್ಮ ದೌರ್ಬಲ್ಯ. ಹೀಗಾದರೆ ಜಾತಿ ದೌರ್ಜನ್ಯ ತಡೆಗಟ್ಟುವುದು ಸಾಧ್ಯವಿಲ್ಲ. ಗಂಭೀರ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಜಾಮೀನು ಸಿಕ್ಕರೆ, ಮೇಲ್ಮನವಿ ಹೋಗಿ ಜಾಮೀನು ರದ್ದುಪಡಿಸಿ ಆರೋಪಿಗೆ ಶಿಕ್ಷೆ ಕೊಡಿಸಿದ ಪ್ರಕರಣಗಳು ಎಷ್ಟಿವೆ ? ಈ ಬಗ್ಗೆ ವಿವರ ಕೊಡಿ ಎಂದು ಗರಂ ಆಗಿ ಅಧಿಕಾರಿಗಳಿಗೆ ಪ್ರಶ್ನಿಸಿದರು.
ಇಲಾಖಾವಾರು ಮುಂಬಡ್ತಿಯಲ್ಲಿ ಆಗಿರುವ ಅನ್ಯಾಯಗಳ ಬಗ್ಗೆ ಪರಿಶೀಲಿಸಲು ಪ್ರತ್ಯೇಕ Review ಮೀಟಿಂಗ್ ಕರೆಯುವಂತೆ ಮುಖ್ಯಮಂತ್ರಿಗಳು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚಿಸಿದರು.
ಪ್ರತೀ ಆರು ತಿಂಗಳಿಗೊಮ್ಮೆ ಉಸ್ತುವಾರಿ ಸಮಿತಿ ಸಭೆಯನ್ನು ಕಡ್ಡಾಯವಾಗಿ ಕರೆಯುತ್ತೇವೆ. ಈ ಸಭೆಗಳಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಕಂಡು ಬಂದರೆ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದು ಸಿಎಂ ಎಚ್ಚರಿಸಿದರು.
BREAKING: ISRO ‘100ನೇ ಮಿಷನ್’ ನಭೋಮಂಡಲಕ್ಕೆ ಹಾರಲು ಕೌಂಟ್ ಡೌನ್ ಆರಂಭ | ISRO 100th mission