Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉದ್ಯೋಗವಾರ್ತೆ :`ಭಾರತೀಯ ರೈಲ್ವೆ ಇಲಾಖೆ’ಯಲ್ಲಿ 30,307 ಹುದ್ದೆಗಳಿಗೆ ಅರ್ಜಿ ಆಹ್ವಾನ |RRB recruitment 2025

20/09/2025 9:40 AM

ಆಪರೇಷನ್ ಸಿಂಧೂರ್‌ಗೆ ನಡುಗಿದ ಉಗ್ರಗಾಮಿ ಸಂಘಟನೆಗಳು: ಪಿಒಕೆಯಿಂದ ಖೈಬರ್ ಪಖ್ತುಂಖ್ವಾಗೆ ಜೆಇಎಂ, ಹಿಜ್ಬುಲ್ ಮುಜಾಹಿದ್ದೀನ್ ಸ್ಥಳಾಂತರ

20/09/2025 9:28 AM

ನವರಾತ್ರಿ ಯಾವಾಗ ಪ್ರಾರಂಭವಾಗುತ್ತದೆ? 9 ದಿನಗಳಲ್ಲಿ ಯಾವ-ಯಾವ ದೇವತೆಗಳನ್ನು ಪೂಜಿಸಲಾಗುತ್ತದೆ ತಿಳಿಯಿರಿ | Navratri

20/09/2025 9:26 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸರ್ಕಾರ ಆರ್ಥಿಕ ಸೌಲಭ್ಯಗಳನ್ನು ಸಾಲದ ಖಾತೆಗೆ ಹೊಂದಾಣಿಕೆ ಮಾಡಿದರೆ ಬ್ಯಾಂಕ್ ಮೇಲೆ ಕ್ರಮ : ಸಚಿವ ಸಂತೋಷ ಲಾಡ್
KARNATAKA

ಸರ್ಕಾರ ಆರ್ಥಿಕ ಸೌಲಭ್ಯಗಳನ್ನು ಸಾಲದ ಖಾತೆಗೆ ಹೊಂದಾಣಿಕೆ ಮಾಡಿದರೆ ಬ್ಯಾಂಕ್ ಮೇಲೆ ಕ್ರಮ : ಸಚಿವ ಸಂತೋಷ ಲಾಡ್

By kannadanewsnow5715/07/2025 6:37 AM

ಧಾರವಾಡ : ರೈತರು ಸೇರಿದಂತೆ ಅನೇಕ ಕುಶಲಕರ್ಮಿಗಳು, ಉದ್ಯೋಗಿಗಳು ಬ್ಯಾಂಕ್ಗಳಿಂದ ಸಾಲ ಸೌಲಭ್ಯ ಪಡೆಯುತ್ತಾರೆ. ಕೇಲವು ಸಂದರ್ಭಗಳಲ್ಲಿ ಅನಿವಾರ್ಯ ಕಾರಣಗಳಿಂದ ನಿಗದಿತ ಅವಧಿಯಲ್ಲಿ ಸಾಲ ಮರುಪಾವತಿ ಸಾಧ್ಯವಾಗದೆ ಸುಸ್ಥಿದಾರ ಆಗುತ್ತಾರೆ. ಬ್ಯಾಂಕ್ಗಳು ರೈತರಿಂದ ಅಥವಾ ಸುಸ್ಥಿದಾರರಿಂದ ಸಾಲ ವಸೂಲಾತಿಯಲ್ಲಿ ನೈಜ ಕಾರಣ ಪರಿಗಣಿಸಿ, ಮಾನವೀಯತೆ ತೊರಬೇಕು. ಮರುಪಾವತಿಗೆ ಕಾಲಾವಕಾಶ ನೀಡಬೇಕು. ಸಾಲ ವಸೂಲಿಗಿಂತ ಜನರ ಜೀವ ಮುಖ್ಯವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು.

ಅವರು ಸೋಮವಾರ ಸಂಜೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕೃಷಿ ಇಲಾಖೆ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲೆಯ ಬ್ಯಾಂಕರ್ಸ್ಗಳೊಂದಿಗೆ ರೈತ ಆತ್ಮಹತ್ಯೆ ಪ್ರಕರಣಗಳು ಮತ್ತು ಕೃಷಿ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಸಭೆ ಜರುಗಿಸಿ, ಮಾತನಾಡಿದರು.

ಸಾಲ ವಸೂಲಾತಿಯಲ್ಲಿ ಮಾನವೀಯತೆ ಮೀರಿ ಯಾರೂ ವರ್ತಿಸಬಾರದು. ಜನರ ಜೀವ ಮುಖ್ಯ. ರೈತ ಆತ್ಮಹತ್ಯೆಗಳು ಯಾವ ಕಾರಣಕ್ಕಾಗಿ ಮತ್ತು ಯಾವ ಸಂದರ್ಭಗಳಿಂದ ಘಟಿಸುತ್ತಿವೆ ಎಂಬುವುದರ ಕುರಿತು ಅಧ್ಯಯನ ಮಾಡಲು ಕೃಷಿ ವಿಶ್ವವಿದ್ಯಾಲಯ, ಕಂದಾಯ, ಕೃಷಿ ಇಲಾಖೆ, ಬ್ಯಾಂಕ್ ಅಧಿಕಾರಿ ಹಾಗೂ ಸಾಮಾಜಿಕ ತಜ್ಞರ ಒಳಗೊಂಡ ಸಮಿತಿಯನ್ನು ರಚಿಸಲು ಕ್ರಮವಹಿಸಲಾಗುತ್ತದೆ. ಕೃಷಿ ತಜ್ಞರನ್ನು ಸಹ ಭಾಗಿ ಮಾಡಿಕೊಂಡು ವೈಜ್ಞಾನಿಕವಾಗಿ ಅಧ್ಯಯನವನ್ನು ಮಾಡಲಾಗುತ್ತದೆ. ಬ್ಯಾಂಕ್ ಅಧಿಕಾರಿಗಳು ರೈತರ ಮನೆಗಳಿಗೆ ಹೋಗಿ ಸಾಲ ಮರುಪಾವತಿಗಾಗಿ ತಿಳಿವಳಿಕೆ ನೀಡಬೇಕು. ಅವರ ಆರ್ಥಿಕ ಸ್ಥಿತಿ, ಉದ್ಯೋಗ ಬಗ್ಗೆ ತಿಳಿದು ಕಾಲಾವಕಾಶ ನೀಡಬೇಕೆಂದು ಅವರು ಹೇಳಿದರು.

ಕುಂದಗೋಳ ತಾಲೂಕಿನ ಭರದ್ವಾಡ ಗ್ರಾಮದಲ್ಲಿ ಆತ್ಮಹತ್ಯೆಗೆ ಶರಣಾದ ರೈತ ಕುಟುಂಬಗಳ ಮನೆಗಳಿಗೆ ಇಂದು ಭೇಟಿ ನೀಡಿದ್ದೇವೆ. ರೈತರ ಆತ್ಮಹತ್ಯೆಯ ಬಗ್ಗೆ ಮುಂಜಾಗ್ರತಾ ಕ್ರಮ ವಹಿಸಬೇಕು. ಧಾರವಾಡ ಜಿಲ್ಲೆಯಲ್ಲಿ ಸುಮಾರು ಐವತ್ತು ಸಾವಿರ ಅಕೌಂಟ್ಗಳು ಎನ್ಪಿ (ಕಾರ್ಯನಿರ್ವಹಿಸದ ಖಾತೆ) ಆಗಿವೆ. ಈ ಎಲ್ಲ ಎನ್.ಪಿ ಬ್ಯಾಂಕ್ ಖಾತೆಗಳನ್ನು ಎ, ಬಿ, ಸಿ ವರ್ಗ ಮಾಡಿಕೊಂಡು ಅತಿಯಾಗಿ ಯಾರು ತೊಂದರೆಯಲ್ಲಿ ಇದ್ದಾರೆ, ಅವರನ್ನು ಪತ್ತೆ ಹಚ್ಚಬೇಕು. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದಿಂದ ಅವರಿಗೆ ಯೋಜನೆಗಳ ಸೌಲಭ್ಯಗಳು ಸಿಗುತ್ತಿವೆಯೋ, ಇಲ್ಲವೋ, ಎಂದು ತಿಳಿದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಅವರು ಹೇಳಿದರು.

ರೈತರ ಏಳಿಗೆಯೇ ನಮ್ಮ ಸರ್ಕಾರದ ಗುರಿ ಆಗಿದೆ. ರೈತರಿಗೆ ಸಕಾಲದಲ್ಲಿ ಬೀಜ, ಗೊಬ್ಬರ ಮತ್ತು ಕೃಷಿ ಉಪಕರಣಗಳು ಲಭ್ಯವಾಗುತ್ತಿರುವ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿ ಕೃಷಿ ಇಲಾಖೆ ಖಾತ್ರಿಪಡಿಸಬೇಕು. ಬೆಳೆ ವಿಮೆ ಯೋಜನೆಯ ಲಾಭ ಪ್ರತಿಯೊಬ್ಬ ಅರ್ಹ ರೈತನಿಗೂ ತಲುಪಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು.

ಅಧಿಕಾರಿಗಳೊಂದಿಗೆ ಮಾತನಾಡಿ, ರೈತರ ಆತ್ಮಹತ್ಯೆ ಪ್ರಕರಣಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಬೇಕು ಎಂದು ಸೂಚಿಸಿದ್ದರು. ಯಾವುದೇ ಕುಟುಂಬಕ್ಕೆ ಅನ್ಯಾಯವಾಗದಂತೆ ನೋಡಿಕೊಳ್ಳಿ, ಆತ್ಮಹತ್ಯೆಗೆ ನಿಖರವಾದ ಕಾರಣವನ್ನು ಪತ್ತೆಹಚ್ಚಿ, ನಿಯಮಾನುಸಾರ ಸರ್ಕಾರದಿಂದ ಬರುವ ಪರಿಹಾರ ವಿತರಿಸಲು ಕ್ರಮ ಕೈಗೊಳ್ಳುವಂತೆ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸರ್ಕಾರದಿಂದ ಸಿಗುವ ಪಿಂಚಣಿ, ಪರಿಹಾರ, ಸಹಾಯಧನ ಮುಟ್ಟುವಂತಿಲ್ಲ: ರಾಷ್ಟ್ರೀಕೃತ ಬ್ಯಾಂಕ್, ಯಾವುದೇ ಬ್ಯಾಂಕ್ ಇದ್ದರೂ ಸಹ ಎನ್.ಪಿ ಆಗಿರುವ ಅಕೌಂಟ್ಗಳಿಗೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರದಿಂದ ಸಹಾಯಧನ, ಪಿಂಚಣಿ, ಬೆಳೆ ಪರಿಹಾರ, ವಿಮೆ ಪರಿಹಾರ, ಇತರ ಸಾಲ ಸೌಲಭ್ಯಗಳಿಂದ ಯಾವುದೇ ರೀತಿ ಹಣ ಅವರ ಉಳಿತಾಯ ಖಾತೆಗೆ ಬಂದರೂ ಯಾವುದೇ ಕಾರಣಕ್ಕೂ ಬ್ಯಾಂಕ್ದವರು ಅದನ್ನು ಸಾಲಕ್ಕೆ ಮರು ಹೊಂದಾಣಿಕೆ ಅಥವಾ ಸಾಲದ ಖಾತೆಗೆ ಜಮೆ ಪಡೆಯುವ ಅವಕಾಶವಿಲ್ಲ. ಮತ್ತು ಈ ರೀತಿ ಕ್ರಮ ವಹಿಸಲು ಬ್ಯಾಂಕ್ನವರಿಗೆ ಯಾವುದೇ ರೀತಿ ಕಾನೂನಿನಲ್ಲಿ ಅವಕಾಶವಿಲ್ಲ. ಇದರ ಬಗ್ಗೆ ಮಾನ್ಯ ಮುಖ್ಯಮಂತ್ರಿ ಅವರ ಜೊತೆ ಚರ್ಚೆಯನ್ನು ಸಹ ಮಾಡುತ್ತೇನೆ. ಕ್ರಾಪ್ ಲೋನ್ ಆಗಿರಲಿ, ಬೇರೆ ಯಾವುದೇ ರೀತಿಯ ಲೋನ್ ತೆಗೆದುಕೊಂಡರು ಸರ್ಕಾರದ ಸಬ್ಸಿಡಿಗೆ ಅದನ್ನು ಅಟ್ಯಾಚ್ ಮಾಡಬಾರದು ಎಂದು ಸಚಿವ ಸಂತೋಷ ಲಾಡ್ ಅವರು ಬ್ಯಾಂಕ್ ಅಧಿಕಾರಿಗಳಿಗೆ ಎಚ್ಚರಿಕೆಕೊಟ್ಟರು.
ಸಭೆಯಲ್ಲಿ ಕುಂದಗೋಳ ಶಾಸಕ ಎಂ. ಆರ್. ಪಾಟೀಲ ಅವರು ಮಾತನಾಡಿ, ಸಾಲ ನೀಡಿರುವ ಬ್ಯಾಂಕ್ ಸಿಬ್ಬಂದಿಗಳು ಅನಗತ್ಯವಾಗಿ ರೈತರ ಮನೆಗಳಿಗೆ ಭೇಟಿ ನೀಡಿ, ತಕ್ಷಣ ಸಾಲ ಮರುಪಾವತಿಸಲು ಒತ್ತಾಯಿಸುತ್ತಿದ್ದಾರೆ ಎಂದು ರೈತರು ದೂರು ನೀಡುತ್ತಿದ್ದಾರೆ. ಕೆಲವು ಪ್ರಕರಣಗಳಲ್ಲಿ ತಾವೇ ಖುದ್ದು ಬ್ಯಾಂಕ್ ಸಿಬ್ಬಂದಿಗಳಿಗೆ ಕರೆ ಮಾಡಿ, ಸಾಲ ಮರುಪಾವತಿಸಲು ಸುಸ್ಥಿದಾರರಿಗೆ ಸಾಕಷ್ಟು ಕಾಲಾವಕಾಶ ನೀಡುವಂತೆ ಸೂಚಿಸಿದ್ದೇನೆ. ರೈತರಿಗೆ ಸರಿಯಾಗಿ ಬೆಳೆ ವಿಮೆ ಸಿಗುತ್ತಿಲ್ಲ. ಸಿಬ್ಬಂದಿಗಳು ಬೆಳೆ ಸಮೀಕ್ಷೆ, ಅನೆವಾರಿ ಮಾಡುವಾಗ ಸರಿಯಾಗಿ ನಿಯಮಗಳನ್ನು ಪಾಲಿಸಬೇಕು. ರೈತರಿಗೆ ಮೂಡಿರುವ ಸಂಶಯ, ಗೊಂದಲಗಳನ್ನು ಇಲಾಖೆಯ ಅಧಿಕಾರಿಗಳು ಸೂಕ್ತ ತಿಳುವಳಿಕೆ ನೀಡಿ, ಪರಿಹರಿಸಬೇಕೆಂದು ಸೂಚಿಸಿದರು.

ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮಾತನಾಡಿ, ಕೃಷಿ ಮತ್ತು ರೈತರಿಗೆ ನೀಡುವ ಸರ್ಕಾರಿ ಸೌಲಭ್ಯಗಳು ಮತ್ತು ಕಾರ್ಯಕ್ರಮಗಳ ಕುರಿತು ಗ್ರಾಮ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಜಿಲ್ಲಾ ಹಾಗೂ ತಾಲೂಕು ಕೃಷಿಕ ಸಮಾಜದವರು ರೈತರಿಗೆ ತಿಳುವಳಿಕೆ ನೀಡುವಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದಾರೆ. ಬೆಳೆ ವಿಮೆ, ಬೆಳೆ ಪರಿಹಾರ ಮತ್ತು ಬ್ಯಾಂಕ್ ಸೌಲಭ್ಯಗಳ ಕುರಿತು ಗ್ರಾಮ ಸಭೆ ಹಾಗೂ ಗ್ರಾಮಮಟ್ಟದಲ್ಲಿ ಜನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಕೃಷಿ ಹಾಗೂ ಕೃಷಿ ಸಂಬಂಧಿತ ಇಲಾಖೆಗಳ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದು, ಅನುಷ್ಠಾನಗೊಳಿಸುತ್ತಿದ್ದಾರೆ ಎಂದು ಹೇಳಿದರು.

ಸರ್ಕಾರಿ ಆರ್ಥಿಕ ಸೌಲಭ್ಯ ಹಾಗೂ ಇತರ ಪರಿಹಾರಧನಗಳನ್ನು ಯಾವುದೇ ಕಾರಣಕ್ಕೂ ರೈತರ ಸಾಲದ ಖಾತೆಗೆ ಹೊಂದಾಣಿಕೆ ಮಾಡದಂತೆ ಎಲ್ಲ ಬ್ಯಾಂಕ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಗಿದೆ. ಮತ್ತು ಈ ಕುರಿತು ಪ್ರಸ್ತಾವನೆಯನ್ನು ರಾಜ್ಯ ಬ್ಯಾಂಕರ್ಸ್ ಸಮಿತಿ ಹಾಗೂ ಸರ್ಕಾರಕ್ಕೆ ಜಿಲ್ಲಾಡಳಿತದಿಂದ ಈಗಾಗಲೇ ಸಲ್ಲಿಸಲಾಗಿದೆ. ತಾಂತ್ರಿಕ ಕಾರಣ ಮತ್ತು ಪ್ರಸ್ತುತದಲ್ಲಿರುವ ಬ್ಯಾಂಕ್ ವ್ಯವಹಾರ ವ್ಯವಸ್ಥೆಯಿಂದಾಗಿ ಸರ್ಕಾರದಿಂದ ಬರುವ ಆರ್ಥಿಕ ಸೌಲಭ್ಯಗಳು ಸಾಲದ ಖಾತೆಗೆ ಜಮೆ ಆದರೂ ಅದನ್ನು ಮರಳಿ, ಸಂಬಂಧಪಟ್ಟವರ ಉಳಿತಾಯ ಖಾತೆಗೆ ಮರು ಜಮೆ ಮಾಡುತ್ತಿದ್ದಾರೆ. ಇದು ರಾಷ್ಟ್ರ ವ್ಯಾಪಿಯಾಗಿ ಜಾರಿಯಲ್ಲಿರುವದರಿಂದ ಸರ್ಕಾರದ ಮಟ್ಟದಲ್ಲಿ ತಿದ್ದುಪಡಿಯಾಗಬೇಕೆಂದು ತಿಳಿಸಿದರು.

Action will be taken against the bank if the government adjusts financial facilities to the loan account: Minister Santosh Lad
Share. Facebook Twitter LinkedIn WhatsApp Email

Related Posts

ನವರಾತ್ರಿ ಯಾವಾಗ ಪ್ರಾರಂಭವಾಗುತ್ತದೆ? 9 ದಿನಗಳಲ್ಲಿ ಯಾವ-ಯಾವ ದೇವತೆಗಳನ್ನು ಪೂಜಿಸಲಾಗುತ್ತದೆ ತಿಳಿಯಿರಿ | Navratri

20/09/2025 9:26 AM2 Mins Read

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : `ಕರ್ನಾಟಕ ಗ್ರಾಮೀಣ ಬ್ಯಾಂಕ್’ ನಲ್ಲಿ 1,425 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

20/09/2025 9:14 AM1 Min Read

ಈ ರೀತಿ ಪೂಜೆ ಮಾಡಿದ್ರೆ ಒಂದು ರೂಪಾಯಿ ಸಾಲವಿಲ್ಲದೆ ಜೀವನ ನಡೆಸಬಹುದು.!

20/09/2025 8:57 AM3 Mins Read
Recent News

ಉದ್ಯೋಗವಾರ್ತೆ :`ಭಾರತೀಯ ರೈಲ್ವೆ ಇಲಾಖೆ’ಯಲ್ಲಿ 30,307 ಹುದ್ದೆಗಳಿಗೆ ಅರ್ಜಿ ಆಹ್ವಾನ |RRB recruitment 2025

20/09/2025 9:40 AM

ಆಪರೇಷನ್ ಸಿಂಧೂರ್‌ಗೆ ನಡುಗಿದ ಉಗ್ರಗಾಮಿ ಸಂಘಟನೆಗಳು: ಪಿಒಕೆಯಿಂದ ಖೈಬರ್ ಪಖ್ತುಂಖ್ವಾಗೆ ಜೆಇಎಂ, ಹಿಜ್ಬುಲ್ ಮುಜಾಹಿದ್ದೀನ್ ಸ್ಥಳಾಂತರ

20/09/2025 9:28 AM

ನವರಾತ್ರಿ ಯಾವಾಗ ಪ್ರಾರಂಭವಾಗುತ್ತದೆ? 9 ದಿನಗಳಲ್ಲಿ ಯಾವ-ಯಾವ ದೇವತೆಗಳನ್ನು ಪೂಜಿಸಲಾಗುತ್ತದೆ ತಿಳಿಯಿರಿ | Navratri

20/09/2025 9:26 AM

BREAKING: ಜಮ್ಮು ಮತ್ತು ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಓರ್ವ ಯೋಧನಿಗೆ ಗಾಯ, ನಾಲ್ವರು ಶಂಕಿತ ಜೈಷ್ ಭಯೋತ್ಪಾದಕರ ಬಂಧನ

20/09/2025 9:16 AM
State News
KARNATAKA

ನವರಾತ್ರಿ ಯಾವಾಗ ಪ್ರಾರಂಭವಾಗುತ್ತದೆ? 9 ದಿನಗಳಲ್ಲಿ ಯಾವ-ಯಾವ ದೇವತೆಗಳನ್ನು ಪೂಜಿಸಲಾಗುತ್ತದೆ ತಿಳಿಯಿರಿ | Navratri

By kannadanewsnow5720/09/2025 9:26 AM KARNATAKA 2 Mins Read

ನವರಾತ್ರಿ ಸೋಮವಾರ, ಸೆಪ್ಟೆಂಬರ್ 22 ರಂದು ಘಟಸ್ಥಾನ (ಕಳಶ ಸ್ಥಾಪನ ಎಂದೂ ಕರೆಯುತ್ತಾರೆ) ಸ್ವಾಗತಿಸುವುದರೊಂದಿಗೆ ಪ್ರಾರಂಭವಾಗುತ್ತದೆ. ಈ ನವರಾತ್ರಿಯನ್ನು ಶಾರದೀಯ…

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : `ಕರ್ನಾಟಕ ಗ್ರಾಮೀಣ ಬ್ಯಾಂಕ್’ ನಲ್ಲಿ 1,425 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

20/09/2025 9:14 AM

ಈ ರೀತಿ ಪೂಜೆ ಮಾಡಿದ್ರೆ ಒಂದು ರೂಪಾಯಿ ಸಾಲವಿಲ್ಲದೆ ಜೀವನ ನಡೆಸಬಹುದು.!

20/09/2025 8:57 AM

ರಾಜ್ಯದಲ್ಲಿ ‘ಆದಾಯ ಪ್ರಮಾಣಪತ್ರ’ ಪಡೆಯುವುದು ಇನ್ನೂ ಸರಳ : ಕುಳಿತಲ್ಲೇ ಹೀಗೆ ಅರ್ಜಿ ಸಲ್ಲಿಸಿ ‘ಸರ್ಟಿಫಿಕೇಟ್’ ಪಡೆಯಿರಿ

20/09/2025 8:44 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.