ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಾಸ್ಯ ನಟ ಹಾಸ್ಯನಟ ಚಿಕ್ಕಣ್ಣಗೆ (Chikkanna) ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ.
ರೇಣುಕಸ್ವಾಮಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಚಿಕ್ಕಣ್ಣ ಈ ಹಿಂದೆ ನ್ಯಾಯಾಧೀಶರ ಮುಂದೆ ಸೆಕ್ಷನ್ ಸಿಆರ್‌ಪಿಸಿ 164ರ ಅಡಿಯಲ್ಲಿ ಹೇಳಿಕೆ ನೀಡಿದ್ದರು. ಹೇಳಿಕೆ ನೀಡಿದ ಕೆಲವೇ ದಿನಗಳಲ್ಲಿ ಜೈಲಿನಲ್ಲಿರುವ ಆರೋಪಿ ನಟ ದರ್ಶನ್ ಭೇಟಿಯಾಗಿರುವುದು ಈಗ ಚಿಕ್ಕಣ್ಣನಿಗ ತಲೆನೋವಾಗಿ ಪರಿಣಾಮಿಸಿದೆ. ಸಾಧಾರಣವಾಗಿ ತನಿಖಾ ಹಂತದಲ್ಲಿರುವಾಗಲೇ ಸಾಕ್ಷಿಯಾದ ವ್ಯಕ್ತಿ ಜೈಲಿನಲ್ಲಿ ಆರೋಪಿಯನ್ನು ಭೇಟಿ ಮಾಡಿರುವುದು ಈಗ ತನಿಖಾ ತಂಡಕ್ಕೆ ಕೋಪ ತರಿಸಿದ್ದು, ಕಾನೂನಿನ ಅಡಿಯಲ್ಲಿ ಮತ್ತೆ ನಟ ಚಿಕ್ಕಣ್ಣ ಅವರಿಗೆ ನೋಟಿಸ್ ನೀಡಿ. ಭೇಟಿ ಸಂಬಂಧ ಮಾಹಿತಿ ಪಡೆದುಕೊಳ್ಳುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ ಎನ್ನಲಾಗಿದೆ. ಯಾವ ಉದ್ದೇಶಕ್ಕೆ ಆರೋಪಿಯನ್ನು ಭೇಟಿಯಾಗಿದ್ದೀರಿ? ಆರೋಪಿ ಬಳಿ ಏನು ಮಾತನಾಡಿದ್ದೀರಿ ಎಂದು ಚಿಕ್ಕಣ್ಣ ಅವರನ್ನು ಪೊಲೀಸರು ಪ್ರಶ್ನಿಸುವ ಸಾಧ್ಯತೆಯಿದೆ. ಸಾಕ್ಷಿಗಳ ಭೇಟಿಯನ್ನ ತಡೆಯಲು ನ್ಯಾಯಾಲಯದಲ್ಲಿ ಎಸ್‌ಐಟಿ ಮನವಿ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.