ಬೆಂಗಳೂರು: ಅವಧಿ ಮೀರಿ ಪಾರ್ಟಿ ಮಾಡಿದ ಪ್ರಕರಣ ಸಂಬಂಧ ನಟ ದರ್ಶನ್ (Actor Darshan) ಸೇರಿ ಪ್ರಕರಣ ಸಂಬಂಧ ಎಲ್ಲರಿಗೂ ಬಿಗ್ ರಿಲೀಫ್ ಸಿಕ್ಕಿದೆ.
ಘಟನೆ ಸಂಬಂಧ ತನಿಖೆ ನಡೆಸಿದ ಪೊಲೀಸರು ಈಗ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ (Chargesheet) ಸಲ್ಲಿಕೆ ಮಾಡಿದೆ. ತಡ ರಾತ್ರಿ ಪಾರ್ಟಿ ಮಾಡಿಲ್ಲ ಬದಲಿಗೆ ಕೇವಲ ಊಟವನ್ನು ಮಾಡಿದ್ದಾರೆ ಅಂಥ ತಿಳಿಸಿದ್ದಾರೆ. ಇನ್ನೂ ಅವಧಿ ಮೀರಿ ಪಾರ್ಟಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಟ್‌ಲ್ಯಾಗ್ ಪಬ್ ಮಾಲೀಕ, ಮ್ಯಾನೇಜರ್ ಮೇಲೆ ಕೇಸ್ ದಾಖಲಾಗಿತ್ತು, ಪ್ರಕರಣ ಸಂಬಂಧ 8 ಜನರು ವಿಚಾರಣೆಗೆ ಹಾಜರಾಗಿ ನಾವು ಪಾರ್ಟಿ ಮಾಡಿಲ್ಲ. ಕೇವಲ ಊಟ ಮಾತ್ರ ಮಾಡಿದ್ದೇವೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಆಧಾರಿಸಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿದೆ ಎನ್ನಲಾಗಿದೆ.