ಬೆಂಗಳೂರು: ನಟ ದರ್ಶನ್ ಅವರು ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿದ್ದಾರೆ. ಹೀಗಾಗಿ ಅವರನ್ನು ಕರಾವಳಿ ಚಿತ್ರದಿಂದ ಕೈಬಿಡಲಾಗಿದೆ ಅನ್ನುವ ವಿಷಯ ಹೊರ ಬಿದ್ದಿದೆ.
ನಟ ಪ್ರಜ್ವಲ್ ದೇವರಾಜ್ ನಟನೆಯ ಕರಾವಳಿ ಚಿತ್ರವನ್ನು ಗುರುದತ್ ಗಾಣಿಗ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವು ನಟ ದರ್ಶನ್ ಅವರನ್ನು ಒಳಗೊಂಡಿತ್ತು. ಆದ್ರೇ ದರ್ಶನ್ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲುಪಾಲಾಗಿದ್ದಾರೆ.
ಈ ಹಿನ್ನಲೆಯಲ್ಲಿ ಅವರನ್ನು ಚಿತ್ರದಿಂದ ಕೈಬಿಡುವಂತ ನಿರ್ಧಾರವನ್ನು ಚಿತ್ರತಂಡ ನಿರ್ಧರಿಸಿದೆ ಎನ್ನಲಾಗುತ್ತಿದೆ. ದರ್ಶನ್ ಕೈ ಬಿಟ್ಟು ಪ್ರಜ್ವಲ್ ದೇವರಾಜ್ ನಟನೆಯಲ್ಲೇ ಕರಾವಳಿ ಚಿತ್ರವನ್ನು ತೆರೆಗೆ ತರೋ ಪ್ಲಾನ್ ಅನ್ನ ಚಿತ್ರತಂದ ಮಾಡುತ್ತಿದೆ ಎನ್ನಲಾಗುತ್ತಿದೆ.
ನಟ ಸುದೀಪ್ ಅವರ ಶಿಷ್ಯ ಗುರುದತ್ ಗಾಣಿಗ ಅವರು ಆಗಿದ್ದು, ಅವರಿಗೆ ಸುದೀಪ್ ಸಾತ್ ಕೊಡ್ತಾರಾ ಅಂತ ಕಾದು ನೋಡಬೇಕಿದೆ. ಆದ್ರೇ ನಟ ದರ್ಶನ್ ಮಾತ್ರ ಕರಾವಳಿ ಚಿತ್ರದಿಂದ ಕೈಬಿಡೋ ಎಲ್ಲಾ ಲಕ್ಷಣಗಳು ಕಂಡು ಬರುತ್ತಿವೆ ಎಂಬುದಾಗಿ ಹೇಳಲಾಗುತ್ತಿದೆ. ಆ ಬಗ್ಗೆ ಖಚಿತ ಮಾಹಿತಿ ಹೊರ ಬೀಳಬೇಕಿದೆ.
BREAKING: ರಾಜ್ಯ ಸರ್ಕಾರದಿಂದ ‘ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ’ಗಳನ್ನು ನೇಮಿಸಿ ಆದೇಶ: ಇಲ್ಲಿದೆ ಪಟ್ಟಿ
ಅಸ್ಸಾಂ ಪ್ರವಾಹ ಪರಿಸ್ಥಿತಿ ಗಂಭೀರ, 30 ಜಿಲ್ಲೆಗಳಲ್ಲಿ 24.50 ಲಕ್ಷ ಜನರಿಗೆ ತೊಂದರೆ