ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲಿನಲ್ಲಿರುವಂತ ನಟ ದರ್ಶನ್ ಗೆ ಬೆನ್ನುನೋವು ಕಾಣಿಸಿಕೊಂಡಿತ್ತು. ಈ ಹಿನ್ನಲೆಯಲ್ಲಿ ಸಮಸ್ಯೆ ಪತ್ತೆ ಹಚ್ಚಿ ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಜೈಲು ಅಧಿಕಾರಿಗಳು ಕರೆತಂದಿದ್ದಾರೆ.
ಬಳ್ಳಾರಿಯ ಕೇಂದ್ರ ಕಾರಾಗೃಹದಿಂತ ವಾಹನದಲ್ಲಿ ವಿಮ್ಸ್ ಆಸ್ಪತ್ರೆಗೆ ಜೈಲು ಅಧಿಕಾರಿಗಳು ನಟ ದರ್ಶನ್ ಅವರನ್ನು ಕರೆತಂದಿದ್ದಾರೆ. ವಿಮ್ಸ್ ಆಸ್ಪತ್ರೆಯ ನ್ಯೂರೋ ವಿಭಾಗದಲ್ಲಿ ನಟ ದರ್ಶನ್ ಅವರಿಗೆ ಎಂಆರ್ ಐ ಸ್ಕ್ಯಾನಿಂಗ್ ನಡೆಸಲಿದ್ದಾರೆ.
ಬೆನ್ನು ನೋವಿಗೆ ಕಾರಣವೇನು. ಅದಕ್ಕೆ ಚಿಕಿತ್ಸೆ ಯಾವ ರೀತಿಯಲ್ಲಿ ನೀಡಬೇಕು ಸೇರಿದಂತೆ ವಿವಿಧ ಪರೀಕ್ಷೆಯನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಯ ನ್ಯೂರೋ ವಿಭಾಗದ ವೈದ್ಯರು ನಡಸಲಿದ್ದಾರೆ. ಈ ಬಳಿಕ ಮತ್ತಷ್ಟು ಮಾಹಿತಿ ಲಭ್ಯವಾಗಲಿದೆ.
GOOD NEWS: ರಾಜ್ಯದಲ್ಲಿ ಪೊಲೀಸರ ಮಕ್ಕಳಿಗಾಗಿ ‘7 ಪಬ್ಲಿಕ್ ಶಾಲೆ’ಗಳು ಆರಂಭ: ಸಿಎಂ ಸಿದ್ಧರಾಮಯ್ಯ ಘೋಷಣೆ
ನಿಷೇಧಿತ ಪಟಾಕಿ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ: ಸಚಿವ ಈಶ್ವರ್ ಖಂಡ್ರೆ ಎಚ್ಚರಿಕೆ