ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇದೀಗ ತನಿಖಾ ತಂಡಕ್ಕೆ ದೊಡ್ಡ ಜಯವೊಂದು ಸಿಕ್ಕಿದೆ. ಈ ಮೂಲಕ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಹತ್ವದ ಘಟ್ಟದಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ನಟ ದರ್ಶನ್ ಅಂಡ್ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿ, ಜೈಲಿಗಟ್ಟಿದ್ದಾರೆ. ತನಿಖೆ ನಡೆಸುತ್ತಿರುವಂತ ಎಸ್ಐಟಿ ಪೊಲೀಸರು, ವಿವಿಧ ಆಯಾಮಗಳಿಂದ ತನಿಖೆಯನ್ನು ಕೈಗೊಂಡಿದ್ದಾರೆ.
ಟೆಸ್ಟ್ ಐಡೆಂಟಿಫಿಕೇಷನ್ ನಲ್ಲಿ ಪ್ರಕರಣದ ಮಹತ್ವದ ಘಟ್ಟದಲ್ಲಿ ಪೊಲೀಸರು ಯಶಸ್ವಿಯಾಗಿರುವುದಾಗಿ ತಿಳಿದು ಬಂದಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಸಾಕ್ಷಿಗಳನ್ನು ವಿಚಾರಣೆ ನಡೆಸಿದಂತ ಪೊಲೀಸರು, ಟಿಐ ಕೂಡ ನಡೆಸಿದ್ದು, ಅದರಲ್ಲಿ ಆರೋಪಿಗಳನ್ನು ಸಾಕ್ಷಿಗಳು ಗುರುತಿಸಿರೋದಾಗಿ ಹೇಳಲಾಗುತ್ತಿದೆ.
ಟೆಸ್ಟ್ ಐಡೆಂಟಿಫಿಕೇಷನ್ ಅನ್ನು ತಹಶೀಲ್ದಾರ್ ನೇತೃತ್ವದಲ್ಲಿ ತುಮಕೂರು ಹಾಗೂ ಪರಪ್ಪನ ಅಗ್ರಹಾರ ಜೈಲಿನಲ್ಲಿರುವಂತ ಆರೋಪಿಗಳನ್ನು ಸಾಲಾಗಿ ನಿಲ್ಲಿಸಿ, ಸಾಕ್ಷಿಗಳಿಂದ ಆರೋಪಿಗಳ ಗುರುತು ಹಿಡಿಯೋ ಕೆಲಸ ಮಾಡಿದ್ದಾರೆ. ಆಗ ಸಾಕ್ಷಿಗಳು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳ ಗುರುತು ಹಿಡಿದು, ತಿಳಿಸಿರೋದಾಗಿ ತಿಳಿದು ಬಂದಿದೆ. ಈ ಮೂಲಕ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ಮಹತ್ವದ ಘಟ್ಟದಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗುತ್ತಿದೆ.
‘ಕುಮ್ಕಿ’ ಜಮೀನಿನಲ್ಲಿ ಮನೆ ಕಟ್ಟಿಕೊಂಡವರಿಗೆ ಗುಡ್ ನ್ಯೂಸ್: ತೆರವು ಮಾಡುವುದಿಲ್ಲ: ಸಚಿವ ಕೃಷ್ಣಭೈರೇಗೌಡ
BREAKING : ಬೆಳಗಾವಿಯಲ್ಲಿ ಭೀಕರ ಮರ್ಡರ್ : ಮಾರಾಕಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಕೊಲೆ