ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ಅಂಡ್ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಈ ಆರೋಪಿಗಳನ್ನು ಡಿಎನ್ ಎ ಪರೀಕ್ಷೆಗೆ ಒಳಪಡಿಸೋದಕ್ಕೆ ಪೊಲೀಸರು ಮುಂದಾಗಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಪವಿತ್ರಾ ಗೌಡ ಸೇರಿದಂತೆ 9 ಆರೋಪಿಗಳನ್ನು ಡಿಎನ್ಎ ಪರೀಕ್ಷೆಗೆ ಒಳಪಡಿಸೋದಕ್ಕೆ ಪೊಲೀಸರು ಮುಂದಾಗಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಆರೋಪಿಗಳ ಕೂದಲು, ರಕ್ತದ ಮಾದರಿಯನ್ನು ಸಂಗ್ರಹಿಸಿ ಎಫ್ಎಸ್ಎಲ್ ಪರೀಕ್ಷೆಗೆ ಕಳುಹಿಸಿಕೊಡಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಈಗಾಗಲೇ ಪೊಲೀಸರು ಆರೋಪಿಗಳ ಸಮ್ಮಖದಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಸ್ಥಳ ಮಹಜರು ನಡೆಸಿದ್ದರು. ಈ ವೇಳೆ ಸ್ಥಳದಲ್ಲಿ ಸಿಕ್ಕಿರುವಂತ ಕೂದಲು, ರಕ್ತದ ಮಾದರಿಯನ್ನು ಎಫ್ ಎಸ್ ಎಲ್ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಈಗ ಆರೋಪಿಗಳನ್ನು ಡಿಎನ್ಎ ಪರೀಕ್ಷೆಗೆ ಒಳಪಡಿಸಿದ್ರೇ, ಕೊಲೆ ಸ್ಥಳದಲ್ಲಿ ಸಿಕ್ಕಂತ ರಕ್ತದ ಮಾದರಿ, ಕೂದಲಿಗೂ ಹೋಲಿಕೆ ಆದ್ರೇ, ಪ್ರಕರಣ ಸಂಬಂಧ ಬಲವಾದಂತ ಸಾಕ್ಷ್ಯ ಸಿಗಲಿದೆ ಎನ್ನುವುದು ಪೊಲೀಸರ ನಿಲುವಾಗಿದೆ.
ಈ ಹಿನ್ನಲೆಯಲ್ಲಿ ಎ1 ಆರೋಪಿ ಪವಿತ್ರಾಗೌಡ, ಎ2 ನಟ ದರ್ಶನ್ ಸೇರಿದಂತೆ 9 ಆರೋಪಿಗಳ ರಕ್ತದ ಮಾದರಿ, ಕೂದಲನ್ನು ಡಿಎನ್ಎ ಪರೀಕ್ಷೆಗೆ ಕಳುಹಿಸೋದಕ್ಕೆ ಪೊಲೀಸರು ಮುಂದಾಗಿದ್ದಾರೆ. ಈ ಮೂಲಕ ಮಹತ್ವದ ಸಾಕ್ಷ್ಯವನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹೆಕ್ಕಿ ತೆಗೆಯೋದಕ್ಕೆ ಪೊಲೀಸರು ಸಿದ್ಧರಾಗಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ.
ಮೆಗಾ ಸ್ಟಾರ್ ಚಿರಂಜೀವಿ ಮಾಜಿ ಅಳಿಯ ಶಿರೀಶ್ ಭಾರದ್ವಾಜ್ ನಿಧನ | Shirish Bharadwaj No More