ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವಂತ ನಟ ದರ್ಶನ್ ಅಂಡ್ ಗ್ಯಾಂಗ್ ಗೆ ಮತ್ತೆ ಜೈಲೇ ಗತಿ ಎನ್ನುವಂತೆ ಆಗಿದೆ. ಇಂದು ಕೋರ್ಟ್ ಅವರಿಗೆ ಆಗಸ್ಟ್.28ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಇಂದು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ನಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧದ ಅರ್ಜಿಯ ವಿಚಾರಣೆಯನ್ನು ನಡೆಸಲಾಯಿತು. ಎಲ್ಲಾ ಆರೋಪಿಗಳನ್ನು ವೀಡಿಯೋ ಕಾನ್ಫೆರೆನ್ಸ್ ಮೂಲಕ ಕೋರ್ಟ್ ಗೆ ಜೈಲು ಅಧಿಕಾರಿಗಳು ಹಾಜರು ಪಡಿಸಿದ್ದರು.
ಈ ಪ್ರಕರಣದ ವಿಚಾರಣೆ ನಡೆಸಿದಂತ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ನ ನ್ಯಾಯಾಧೀಶರಾದಂತ ವಿಶ್ವನಾಥ ಸಿ ಗೌಡರ್ ಅವರು, ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೆ ಆಗಸ್ಟ್.28ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ಆದೇಶಿಸಿದ್ದಾರೆ. ಹೀಗಾಗಿ ನಟ ದರ್ಶನ್ ಅಂಡ್ ಗ್ಯಾಂಗ್ ಗೆ ಜೈಲೇ ಗತಿ ಎನ್ನುವಂತೆ ಆಗಿದೆ.
BREAKING: ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯ ‘ಅರವಳಿಕೆ ತಜ್ಞ ಡಾ.ಸೋಮಶೇಖರ್’ ಅಮಾನತು
ರಾಜ್ಯದ ರೈತರೇ ಗಮನಿಸಿ : ‘PM KISAN’ ಹಣ ಜಮಾ ಆಗಲು ಕೂಡಲೇ `e-KYC’ ಮಾಡಿಸಿಕೊಳ್ಳಿ!