ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಬಂಧಿಸಲಾಗಿದ್ದು ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ನೀನಾಸಂ ಸತೀಶ ಪ್ರತಿಕ್ರಿಯೆ ನೀಡಿದ್ದು, ತಪ್ಪು ಯಾರೇ ಮಾಡಿದರು ಕಾನೂನು ಪ್ರಕಾರ ಶಿಕ್ಷೆ ಆಗಬೇಕು ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಪ್ಪು ಯಾರೇ ಮಾಡಿದರು ಕಾನೂನು ಪ್ರಕಾರ ಶಿಕ್ಷೆ ಆಗಬೇಕು. ಊಹಾಪೋಹಗಳಿಗೆ ತಲೆಕೆಡಿಸಿಕೊಳ್ಳಬಾರದು ಈ ಬಗ್ಗೆ ವಾಣಿಜ್ಯ ಮಂಡಳಿ ಕೂಡ ಸೂಕ್ತ ಕ್ರಮ ಕೈಗೊಳ್ಳಲಿದೆ ಅಂದು ಬೆಂಗಳೂರಿನಲ್ಲಿ ಸ್ಯಾಂಡಲ್ವುಡ್ ನೀನಾಸಂ ಅಶ್ವಥ್ ಹೇಳಿಕೆ ನೀಡಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎ1 ಆರೋಪಾಗಿರುವ ಪವಿತ್ರ ಗೌಡ ಏಟು ಆರೋಪಿ ಆಗಿರುವ ನಟ ದರ್ಶನ್ ಹಾಗೂ ಆರೋಪಿಗಳನ್ನು ಕರೆದುಕೊಂಡು ನಿನ್ನೆ ಪೊಲೀಸರು ಆರ್ ಆರ್ ನಗರದಲ್ಲಿರುವ ಪಟ್ಟಣಗೆರೆ ಶೆಡ್ ನಲ್ಲಿ ಸ್ಥಳ ಮಹಜರು ನಡೆಸಿದ್ದರು. ಇಂದು ಕೂಡ ಪೊಲೀಸರು ಆರೋಪಿಗಳ ವಿಚಾರಣೆಯನ್ನು ಮುಂದುವರಿಸಿದ್ದಾರೆ.