ಬೆಂಗಳೂರು: ನಗರದ ಕೆಂಗೇರಿ ಬಳಿಯ ಬಿಜಿಎಸ್ ಆಸ್ಪತ್ರೆಗೆ ಶಸ್ತ್ರ ಚಿಕಿತ್ಸೆಯ ಕಾರಣದಿಂದಾಗಿ ನಟ ದರ್ಶನ್ ದಾಖಲಾಗಿದ್ದರು. ಹೈಕೋರ್ಟ್ ನಿಂದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜಾಮೀನು ದೊರೆತ ಬೆನ್ನಲ್ಲೇ ಸರ್ಜರಿ ಮಾಡಿಸಿಕೊಳ್ಳದೇ ಒಂದೂವರೆ ತಿಂಗಳ ಬಳಿಕ ಡಿಸ್ಚಾರ್ಜ್ ಆಗಿದ್ದಾರೆ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದರು. ಆ ಬಳಿಕ ಅನಾರೋಗ್ಯದ ಕಾರಣದಿಂದಾಗಿ ಮಧ್ಯಂತರ ಜಾಮೀನು ಪಡೆದು ಸರ್ಜರಿಗಾಗಿ ಬೆಂಗಳೂರಿನ ಕೆಂಗೇರಿ ಬಳಿಯ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದರು. ಕೆಲವೇ ದಿನಗಳಲ್ಲಿ ಅವರಿಗೆ ವೈದ್ಯರು ಸರ್ಜರಿ ಮಾಡಲಿದ್ದಾರೆ ಎಂಬುದಾಗಿಯೂ ಹೇಳಲಾಗುತ್ತಿತ್ತು.
ಇದರ ಬೆನ್ನಲ್ಲೇ ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಹೈಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ನಟ ದರ್ಶನ್ ಗೆ ಜಾಮೀನು ಮಂಜೂರು ಮಾಡಿದ್ದರು. ಹೀಗಾಗಿ ಸರ್ಜರಿ ಇಲ್ಲದೇ ಒಂದೂವರೆ ತಿಂಗಳ ಬಳಿಕ ನಟ ದರ್ಶನ್ ಬಿಜಿಎಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ALERT : ಸಾರ್ವಜನಿಕರೇ ಎಚ್ಚರ : ಮೊಬೈಲ್ ನಲ್ಲಿ ಈ `ಗೇಮ್’ ಆಡಿದ್ರೆ ನಿಮ್ಮ ಖಾತೆಯಲ್ಲಿ ಹಣ ಖಾಲಿಯಾಗೋದು ಗ್ಯಾರಂಟಿ.!