ಬೆಂಗಳೂರು: ನಟ ದರ್ಶನ್ ಫ್ಯಾನ್ಸ್ ಅಶ್ಲೀಲ ಸಂದೇಶ ಕಳುಹಿಸಿದ ಸಂಬಂಧ ಇಂದು ನಟಿ ರಮ್ಯಾ ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ದೂರು ನೀಡಿದ್ದರು. ಈ ದೂರು ಆಧರಿಸಿ ಪ್ರಮೋದ್ ಗೌಡ ಸೇರಿದಂತೆ 43 ಅಕೌಂಟ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ನಟಿ ರಮ್ಯಾ ಅವರು ನಟ ದರ್ಶನ್ ಫ್ಯಾನ್ಸ್ ಅಶ್ಲೀಲವಾಗಿ ಮೆಸೇಜ್ ಕಳುಹಿಸಿದ್ದರ ಸಂಬಂಧ ಇಂದು ಬೆಂಗಳೂರು ನಗರ ಪೊಲೀಸ್ ಕಮೀಷನರ್ ಭೇಟಿಯಾಗಿ ದೂರು ನೀಡಿದ್ದರು. ಈ ದೂರನ್ನು ಕೇಂದ್ರ ವಿಭಾಗದ ಸೆನ್ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ನಟಿ ರಮ್ಯಾ ದೂರಿನನ್ವಯ ಕೇಂದ್ರ ವಿಭಾಗದ ಸೆನ್ ಠಾಣೆಯಲ್ಲಿ ಪ್ರಮೋದ್ ಗೌಡ ಸೇರಿದಂತೆ 43 ಅಕೌಂಟ್ ವಿರುದ್ಧ ಎಫ್ಐಆರ್ ದಾಖಲಾಗಿದೆ.