ಬೆಂಗಳೂರು: ನಟ ದರ್ಶನ್ ಅವರು ಬೆನ್ನು ನೋವಿನಿಂದ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರನ್ನು ಪರೀಕ್ಷೆಗೆ ಒಳಪಡಿಸಿರುವಂತ ವೈದ್ಯರು ಚಿಕಿತ್ಸೆಯ ಬಗ್ಗೆ ಬಿಗ್ ಅಪ್ ಡೇಟ್ ನೀಡಿದ್ದಾರೆ. ಅದೇನು ಅಂತ ಮುಂದೆ ಓದಿ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯ ನರರೋಗ ತಜ್ಞ ವೈದ್ಯ ಡಾ.ನವೀನ್ ಅಪ್ಪಾಜಿಗೌಡ ಅವರು, ನಟ ದರ್ಶನ್ ಅವರಿಗೆ ಚಿಕಿತ್ಸೆ ಆರಂಭಿಸಲಾಗಿದೆ. ಫಿಸಿಯೋಥೆರವಿ ನೀಡಲಾಗುತ್ತಿದೆ. ಚಿಕಿತ್ಸೆ ಆರಂಭಿಸಿ ವೈದ್ಯಕೀಯ ಪರೀಕ್ಷೆ ಮಾಡ್ತಿದ್ದೇವೆ ಎಂದರು.
ನಟ ದರ್ಶನ್ ಅವರಿಗೆ ಬೆನ್ನು ನೋವಿನ ಕಾರಣದಿಂದಾಗಿ ವಿವಿಧ ಪರೀಕ್ಷೆಗೆ ಒಳಪಡಿಸಲಾಗಿದೆ. ನಟ ದರ್ಶನ್ ಅವರಿಗೆ ಬೆನ್ನು ನೋವಿದೆ. ಎಡಗಾಲು ಸೆಳೆತವಿದೆ. ಮುಂದಿನ 48 ಗಂಟೆಗಳಲ್ಲಿ ಹೆಲ್ತ್ ರಿಪೋರ್ಟ್ ಸಿಗಲಿದೆ. ಆ ವರದಿಯ ನಂತ್ರ ಮುಂದಿನ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎಂಬುದಾಗಿ ತಿಳಿಸಿದ್ದಾರೆ.
ಕನ್ನಡ ಭಾಷೆ ಬೆಳೆಸುವ ಕಾರ್ಯದಲ್ಲಿ ಎಲ್ಲರೂ ಒಗ್ಗೂಡಬೇಕಿದೆ : ಸಚಿವ ಕೃಷ್ಣಬೈರೇಗೌಡ
BIG NEWS : ಭಾರತದ ಮೊದಲ ಅನಲಾಗ್ ಬಾಹ್ಯಾಕಾಶ ಮಿಷನ್ ಆರಂಭಿಸಿದ `ಇಸ್ರೋ’ | ISRO