ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಗೆ ಹೈಕೋರ್ಟ್ ಜಾಮೀನು ನೀಡಿತ್ತು. ಈ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸುವುದಾಗಿ ರಾಜ್ಯ ಸರ್ಕಾರ ತಿಳಿಸಿತ್ತು. ಇದೀಗ ಅದರಂತೆ ಸುಪ್ರೀಂ ಕೋರ್ಟ್ ಗೆ ನಟ ದರ್ಶನ್ ಜಾಮೀನು ರದ್ದು ಕೋರಿ ಅರ್ಜಿ ಸಲ್ಲಿಸಲಾಗಿದೆ. ಹೀಗಾಗಿ ನಟ ದರ್ಶನ್ ಗೆ ಮತ್ತೊಂದು ಬಿಗ್ ಶಾಕ್ ನೀಡಿದಂತೆ ಆಗಿದೆ.
ಇಂದು ನಟ ದರ್ಶನ್ ಅವರಿಗೆ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಹೈಕೋರ್ಟ್ ನೀಡಿರುವಂತ ಜಾಮೀನು ರದ್ದು ಕೋರಿಗೆ ರಾಜ್ಯ ಸರ್ಕಾರದ ಪರವಾಗಿ ಪೊಲೀಸರು ಸುಪ್ರೀಂ ಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಇಂತಹ ಅರ್ಜಿಯನ್ನು ಮುಂದಿನ ವಾರ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುವ ಸಾಧ್ಯತೆ ಇದೆ.
ಅಂದಹಾಗೇ ಪೊಲೀಸ್ ಇಲಾಖೆಯಿಂದ ನಟ ದರ್ಶನ್ ಸೇರಿದಂತೆ 7 ಆರೋಪಿಗಳ ಜಾಮೀನು ರದ್ದುಗೊಳಿಸುವಂತೆ ಅರ್ಜಿಯಲ್ಲಿ ಕೋರಿರುವುದಾಗಿ ತಿಳಿದು ಬಂದಿದೆ. ಮುಂದಿನ ವಾರ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆದು, ಯಾವ ತೀರ್ಪು ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.
BIG UPDATE : ಕರ್ನಾಟಕದಲ್ಲಿ 2 ‘HMPV’ ಸೋಂಕು ಧೃಡ : ‘ICMR’ ಸ್ಪಷ್ಟನೆ | HMPV VIRUS
‘HMPV ವೈರಸ್’ ಎಂದರೇನು? ಅದರ ಲಕ್ಷಣಗಳು ಯಾವುವು? ಇಲ್ಲಿದೆ ಮಾಹಿತಿ | HMPV virus