ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಈಗ ನಟ ರೇಣುಕಾಸ್ವಾಮಿ ಸೇರಿದಂತೆ ಕೆಲ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿನಿಂದ ತುಮಕೂರು ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ತುಮಕೂರು ಕೇಂದ್ರ ಕಾರಾಗೃಹ ಜೈಲಿಗೆ ಎ2 ಆರೋಪಿ ನಟ ದರ್ಶನ್ ಸೇರಿದಂತೆ ಎ8 ರವಿ, ಎ15 ಕಾರ್ತಿಕ್, ಎ16 ಕೇಶವ ಮೂರ್ತಿ, ಎ17 ನಿಖಿಲ್ ನಾಯಕ್ ಅವರನ್ನು ಸ್ಥಳಾಂತರ ಕೋರಿ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ಅರ್ಜಿ ಸಲ್ಲಿಸಿ ಜೈಲು ಅಧಿಕಾರಿಗಳು ಕೋರಿದ್ದರು.
ಇದಕ್ಕೆ ಕೋರ್ಟ್ ಸಮ್ಮತಿಸಿದ ಕಾರಣ, ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ.2 ಆರೋಪಿ ನಟ ದರ್ಶನ್ ಸೇರಿದಂತೆ ಐವರು ಆರೋಪಿಗಳನ್ನು ತುಮಕೂರು ಜೈಲಿಗೆ ಸ್ಥಳಾಂತರಿಸಲಿದ್ದಾರೆ.
ಅಂದಹಾಗೆ ರೇಣುಕಾಸ್ವಾಮಿ ಕೊಲೆಯ ಬಳಿಕ ಆರೋಪಿಗಳಾದಂತ ಕಾರ್ತಿಕ್, ಕೇಶವ್ ಹಾಗೂ ನಿಖಿಲ್ ಪೊಲೀಸರ ಮುಂದೆ ಖುದ್ದು ಶರಣಾಗಿದ್ದರು. ಈ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿತ್ತು. ಈಗ ಇವರನ್ನು ತುಮಕೂರು ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ.
ನಾನು ಅಧಿಕಾರಕ್ಕಾಗಿ ಚನ್ನಪಟ್ಟಣ ಬಿಟ್ಟು ಓಡಿ ಹೋಗುವವನಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್
BIG NEWS : ವಿಜಯಪುರ, ಧಾರವಾಡ ಜಿಲ್ಲೆಗಳಲ್ಲಿ ʻಫುಡ್ ಪಾರ್ಕ್ʼ ಸ್ಥಾಪಿಸುವಂತೆ ʻನಿಸ್ಸಿನ್ ಸಂಸ್ಥೆʼಗೆ ಆಹ್ವಾನ