*ಅವಿನಾಶ್ ಆರ್ ಭೀಮಸಂದ್ರ
ಬೆಂಗಳೂರು: ನಟ ದರ್ಶನ್ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ಜೈಲುಪಾಲಾಗಿದ್ದಾರೆ. ಇಂದು ದರ್ಶನ್ ಸೇರಿ ನಾಲ್ವರು ಆರೋಪಿಗಳಿಗೆ ಕೋರ್ಟ್ ಜುಲೈ 4ರವರೆಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಈ ನಡುವೆ ನಟ ದರ್ಶನ್ ನನ್ನು ಮುಂಜಾಗ್ರತಕ್ರಮವಾಗಿ ತುಮಕೂರಿನ ಜೈಲಿಗೆ ಕಳುಹಿಸಕೊಡುವ ನಿಟ್ಟಿನಲ್ಲಿ ಬಂಧಿಖಾನೆ ಅಧಿಕಾರಿಗಳು ಅಲೋಚನೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಇದಲ್ಲದೇ ಕೆಲ ಆರೋಪಿಗಳನ್ನು ತುಮಕೂರು ಜೈಲಿಗೆ ಶಿಫ್ಟ್ ಮಾಡಲು ಎಸ್‌ಪಿಪಿ ಮನವಿ ಮಾಡಿದ್ದಾರೆ ಕೂಡ ಎನ್ನಲಾಗುತ್ತಿದೆ. ಈ ಬಗ್ಗೆ ನ್ಯಾಯಾಧೀಶರು ಸೋಮವಾರ ವಿಚಾರಣೆ ನಡೆಸಲಿದ್ದು, ಅಂದೇ ಆದೇಶವನ್ನು ನೀಡಲಿದ್ದಾರೆ ಎನ್ನಲಾಗಿದೆ.