ಬಳ್ಳಾರಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ನಟ ದರ್ಶನ್ ನಿದ್ದೆ ಇಲ್ಲದೇ ಮೊದಲ ರಾತ್ರಿ ಕಳೆದಿದ್ದಾರೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ವಿಚಾರ ಸಂಬಂಧ ನಟ ದರ್ಶನ್ ಸೇರಿದಂತೆ ರೇಣುಕಾಸ್ವಾಮಿ ಹತ್ಯೆ ಆರೋಪಿಗಳನ್ನು ಬೇರೆ ಬೇರೆ ಜೈಲುಗಳಿಗೆ ಸ್ಥಳಾಂತರಿಸಲಾಗಿದ್ದು, ನಟ ದರ್ಶನ್ ರನ್ನು ನಿನ್ನೆ ಬೆಳಗ್ಗೆ ಬಳ್ಳಾರಿಯ ಸೆಂಟ್ರಲ್ ಜೈಲಿಗೆ ಸ್ಥಳಾಂತರಿಸಲಾಗಿದೆ. ರಾತ್ರಿ 1 ಗಂಟೆಯವರೆಗೆ ನಿದ್ರೆ ಬಾರದೆ ನಟ ದರ್ಶನ್ ಮೊದಲ ದಿನ ಕಳೆದಿದ್ದಾರೆ. ಬೆಳಗ್ಗೆ ಜೈಲಿನ ಮೆನುವಿನಿಂದ ಉಪ್ಪಿಟ್ಟು ಸೇವಿಸಿದ್ದಾರೆ.
ಇನ್ನು ರೌಡಿ ಶೀಟರ್ ಬೇಕರಿ ರಘು ಜೊತೆಗೆ ಬೆಡ್ ಮೇಲೆ ಕುಳಿತಿದ್ದ ದರ್ಶನ್ ಅವರ ಫೋಟೋ ವೈರಲ್ ಆಗಿತ್ತು ಈ ಹಿನ್ನೆಲೆಯಲ್ಲಿ ಆ ಫೋಟೋಗೆ ಸಂಬಂಧಿಸಿದಂತೆ ದೂರು ದಾಖಲಿಸಲಾಗಿದೆ. ಜೈಲು ಅಧಿಕಾರಿಗಳು ಈ ಕುರಿತು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆದ್ರೆ ಈ ದೂರಿಗೆ ಪ್ರತ್ಯೇಕ ಎಫ್‌ಐಆರ್ ದಾಖಲಿಸಿಲ್ಲ. ಬದಲಾಗಿ ದರ್ಶನ್ ವಿರುದ್ಧ ಈಗಾಗಲೇ ಪರಪ್ಪನ ಅಗ್ರಹಾರ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಈ ದೂರನ್ನು ಸೇರಿಸಿಕೊಂಡು ತನಿಖೆ ನಡೆಸಲು ಸೂಚನೆ ನೀಡಲಾಗಿದೆ.







