ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಎಲ್ಲಾ 17 ಆರೋಪಿಗಳು ಇದೀಗ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಆದರೆ ಕೆಲವರು ನಟ ದರ್ಶನ್ ಅವರಿಗೆ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ ಎಂದು ಹೇಳುತ್ತಿದ್ದು, ಇದಕ್ಕೆ ಗೃಹ ಸಚಿವ ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಜೈಲಿನಲ್ಲಿ ನಟ ದರ್ಶನ್ ಗೆ ಯಾವುದೇ ರಾಜಾತಿಥ್ಯ ನೀಡುತ್ತಿಲ್ಲ. ಜೈಲಿನಲ್ಲಿ ಸಾಮಾನ್ಯ ಕೈದಿಗಳಂತೆ ನಟ ದರ್ಶನ್ ಗೆ ಉಪಚಾರ ನೀಡಲಾಗುತ್ತಿದೆ ಎಂದು ಗ್ರಹ ಇಲಾಖೆಯ ಸಚಿವ ರಕ್ಷಿಸಿ ಪರಮೇಶ್ವರ್ ಸ್ಪಷ್ಟನೆ ನೀಡಿದರು.
ವಿ ಐ ಪಿ ಟ್ರೀಟ್ಮೆಂಟ್ ಆರೋಪದಲ್ಲಿ ಸತ್ಯಾಂಶವಿಲ್ಲ. ಬೇರೆ ಕೈದಿಗಳಂತೆ ಅವರನ್ನು ನೋಡಿಕೊಳ್ಳಲಾಗುತ್ತಿದೆ ಬಹಳ ಜನ ಬಿರಿಯಾನಿ ಕೊಟ್ಟರು ಏನೇನು ಕೊಟ್ಟರು ಅಂತ ಹೇಳಿದರು. ಆದರೆ ಅಲ್ಲಿ ಅಂತದ್ದು ಯಾವುದು ಕೂಡ ನಡೆಯುವುದಿಲ್ಲ ಎಂದು ಪರಪ್ಪನ ಅಗ್ರಹಾರ ಜೈಲಿನ ಬಳಿ ತಿಳಿಸಿದರು.