ಬಳ್ಳಾರಿ : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಟ ದರ್ಶನ್ ಅವರ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ. ಇಂದು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ನಟ ದರ್ಶನ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು, ದರ್ಶನ್ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ.
ಸದ್ಯ ನಟ ದರ್ಶನ್ ಅವರು ಇಂದು ಜಾಮೀನು ಸಿಗುವ ನಿರೀಕ್ಷೆಯಲ್ಲಿ ಇದ್ದಾರೆ. ಆದರೆ ಅವರಿಗೆ ವಿಪರೀತ ಬೆನ್ನು ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಳ್ಳಾರಿ ಜೈಲಿನಲ್ಲಿ ವಿಮ್ಸ್ ಆಸ್ಪತ್ರೆಯ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರು ಬೆನ್ನುಮೂಳೆ ಶಸ್ತ್ರಚಿಕಿತ್ಸೆ ಹಾಗೂ ಸ್ಕ್ಯಾನಿಂಗ್ ಮಾಡಿಸಿಕೊಳ್ಳಿ ಎಂದು ಸಲಹೆ ನೀಡಿದರು ಸಹ ದರ್ಶನ್ ಅವರು ಬೇಡ ಅಂತ ಹಠ ಹಿಡಿದಿದ್ದಾರೆ.
ದರ್ಶನ್ ಗೆ ಬೆನ್ನು ಮೂಳೆಯ ಸ್ಕ್ಯಾನಿಂಗ್ ಮಾಡಿಸುವಂತೆ ವಿಮ್ಸ್ ಆಸ್ಪತ್ರೆಯ ಮೂಳೆ ತಜ್ಞರು ಹೇಳಿದ್ದರು.ಆದರೆ ದರ್ಶನ್ ಬಳ್ಳಾರಿಯಲ್ಲಿ ಸ್ಕ್ಯಾನಿಂಗ್ ಬೇಡ ಅಂತ ದರ್ಶನ್ ಹಠ ಹಿಡಿದಿದ್ದಾರೆ. ನೋವು ನಿವಾರಕ, ನರಕ್ಕೆ ಸಂಬಂಧಿಸಿದ ಮಾತ್ರೆಗಳನ್ನು ವೈದ್ಯರು ಈಗಾಗಲೇ ನೀಡಿದ್ದಾರೆ. L1, L5 ಭಾಗದಲ್ಲಿ ಊತ ಹಾಗೂ ವಿಪರೀತ ನೋವು ಕಂಡು ಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ.