ಮೈಸೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಹೈಕೋರ್ಟ್ ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಎಲ್ಲಾ ಏಳು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ. ಈ ಒಂದು ವಿಚಾರವಾಗಿ ಬಹುಭಾಷಾ ನಟ ಪ್ರಕಾಶ್ ರೈ ಪ್ರತಿಕ್ರಿಯೆ ನೀಡಿದ್ದಾರೆ.
ಮೈಸೂರಿನಲ್ಲಿ ಕಾರ್ಯಕ್ರಮ ಒಂದರಲ್ಲಿ, ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಇಲ್ಲಿ ಮಕ್ಕಳ ಬಗ್ಗೆ ಮಾತನಾಡಲು ಬಂದಿದ್ದೇನೆ ಹೊರಟು ಕಳ್ಳನನ್ನ ಮಕ್ಕಳ ಬಗ್ಗೆ ಮಾತನಾಡಲು ಬಂದಿಲ್ಲ. ರಾಜಕೀಯೆತರ ಪ್ರಶ್ನೆ ಕೇಳಬೇಡಿ ಎಂದು ಪ್ರಕಾಶ್ ರೈ ಮನವಿ ಮಾಡಿದ್ದು, ಮುಂದಿನ ದಿನಗಳಲ್ಲಿ ಈ ಕುರಿತು ಮಾತನಾಡುತ್ತೇನೆ ಎಂದು ತಿಳಿಸಿದರು.