ಬಳ್ಳಾರಿ : ನಟ ದರ್ಶನ್ ಮತ್ತು ಗ್ಯಾಂಗ್ನಿಂದ ರೇಣುಕಾ ಸ್ವಾಮಿ ಅದ್ಯಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಟ ದರ್ಶನ್ ಅವರ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯವು ತೀರ್ಪು ಪ್ರಕಟಿಸಲಿದೆ.
ಈ ಹಿನ್ನೆಲೆಯಲ್ಲಿ ನಟ ದರ್ಶನ್ ಅವರು ಇಂದು ಜೈಲಿನಿಂದ ಬಿಡುಗಡೆ ಆಗಲಿದ್ದಾರೆ ಎಂದು ಜೈಲಿನ ಬಳಿ ದರ್ಶನ್ ಅಭಿಮಾನಿಗಳು ಸೇರಿದ್ದರು. ಆರೋಪಿ ದರ್ಶನ್ ಫೋಟೋ ಹಿಡಿದುಕೊಂಡು ಅಭಿಮಾನಿಗಳು ಬಳ್ಳಾರಿ ಜೈಲಿನ ಬಳಿ ಆಗಮಿಸಿದ್ದಾರೆ. ಈ ವೇಳೆ ಪೊಲೀಸರು ಜೈಲಿನ ಬಳಿ ಸೇರಿದ್ದ ಅಭಿಮಾನಿಗಳನ್ನು ಚದುರಿಸಿದ್ದಾರೆ.
ಈ ವೇಳೆ ದರ್ಶನ್ ಅವರನ್ನು ಭೇಟಿಯಾಗಲು ನಟ ಧನ್ವೀರ ಬಳ್ಳಾರಿ ಜೈಲಿಗೆ ಆಗಮಿಸಿದ್ದಾರೆ. ಹಾಗಾಗಿ ಸಂದರ್ಶಕರ ಕೊಠಡಿಗೆ ದರ್ಶನ್ ಅವರು ಆಗಮಿಸುತ್ತಿದ್ದರು. ಈ ವೇಳೆ ಅಭಿಮಾನಿಗಳನ್ನು ನೋಡಿ ಕಿರುನಗೆ ಬೀರಿದ್ದಾರೆ. ಹಾಗಾಗಿ ನಟ ದರ್ಶನ್ ಅವರು ಇಂದೇ ನನಗೆ ಜಾಮೀನು ಸಿಗುವ ದೃಢ ವಿಶ್ವಾಸ ಹೊಂದಿದ್ದಾರೆ ಎನ್ನಲಾಗುತ್ತಿದೆ.