ಚಿಕ್ಕಮಗಳುರು ; ನಟ ದರ್ಶನ್‌ ಪ್ರಕರಣವು ನಾಗರಿಕ ಸಮಾಜ ತಲೆ ತಗ್ಗಿಸುವಂತದ್ದು ಎಂದು ಬಿಜೆಪಿ ಎಂಎಲ್‌ ಸಿ ಸಿ.ಟಿ.ರವಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಟ ದರ್ಶನ್‌ ಪ್ರಕರಣ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುವಂತದ್ದು, ಅಷ್ಟು ಕ್ರೂ ಮನಸ್ಥಿತಿ ಇರುತ್ತೆ ಅಂತ ಯಾರೂ ಭಾವಿಸಿರಲಿಲ್ಲ. ಸಿನಿಮಾದ ಹಿರೋಗಳು ನಿಜ ಜೀವನದಲ್ಲಿ ಹೀರೋಗಳಲ್ಲ. ನಟ ದರ್ಶನ್‌ ಪ್ರಕರಣ ನೋಡಿದ್ರೆ ಇದು ನಿಜ ಅನಿಸುತ್ತೆ ಎಂದು ಹೇಳಿದ್ದಾರೆ.

ಇನ್ನು ಇಂದು ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರದಲ್ಲಿ ಸಿ.ಟಿ. ರವಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

Share.
Exit mobile version