ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಗೆ ಮತ್ತಷ್ಟು ಸಂಕಷ್ಟ ಆರಂಭಗೊಂಡಿದೆ. ರೇಣುಕಾಸ್ವಾಮಿ ಹತ್ಯೆ ದಿನ ಧರಿಸಿದ್ದಂತ ಬಟ್ಟೆ, ಶೂಗಳನ್ನು ಪೊಲೀಸರು ಸ್ಥಳ ಮಹಜರು ವೇಳೆಯಲ್ಲಿ ಸೀಜ್ ಮಾಡಿರೋದಾಗಿ ತಿಳಿದು ಬಂದಿದೆ.

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕಿಡ್ನ್ಯಾಪ್ ಮಾಡಿಕೊಂಡು ಬಂದಿದ್ದಂತ ನಟ ದರ್ಶನ್ ಅಂಡ್ ಗ್ಯಾಂಗ್, ಶೆಡ್ ಒಂದರಲ್ಲಿ ಕೂಡಿ ಹಾಕಿ, ಎಲೆಕ್ಟ್ರಿಕ್ ಶಾಕ್ ನೀಡಿ, ಮರ್ಮಾಂಗಕ್ಕೆ ಒದ್ದು ಚಿತ್ರಹಿಂಸೆ ನೀಡಿ ಹತ್ಯೆಗೈದಿತ್ತು. ಆ ಬಳಿಕ ಮೋರಿಗೆ ಶವವನ್ನು ಎಸೆಯಲಾಗಿತ್ತು. ಅಪರಿಚಿತ ಶವದ ಬಗ್ಗೆ ತನಿಖೆಗೆ ಇಳಿದಿದ್ದಂತ ಪೊಲೀಸರಿಗೆ ನಟ ದರ್ಶನ್ ಅಂಡ್ ಗ್ಯಾಂಗ್ ಕೃತ್ಯ ಬೆಳಕಿಗೆ ಬಂದಿತ್ತು.

ಕಾಮಾಕ್ಷಿಪಾಳ್ಯ ಪೊಲೀಸರು ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಅನೇಕರನ್ನು ಬಂಧಿಸಿದ್ದರು. ಬಳಿಕ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಪ್ರಕರಣವನ್ನು ವರ್ಗಾವಣೆ ಮಾಡಲಾಗಿತ್ತು. ಈಗ ನಟ ದರ್ಶನ್, ಪವಿತ್ರಾ ಗೌಡ ಸೇರಿ 13 ಆರೋಪಿಗಳನ್ನು ಕೋರ್ಟ್ ನಿಂದ ತಮ್ಮ ವಶಕ್ಕೆ ಪಡೆದಿರುವಂತ ಪೊಲೀಸರು, ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ಈ ಬೆನ್ನಲ್ಲೇ ಈಗ ನಟ ದರ್ಶನ್ ರೇಣುಕಾಸ್ವಾಮಿ ಹತ್ಯೆ ದಿನದಂದು ಧರಿಸಿದ್ದಂತ ಬಟ್ಟೆ, ಶೂಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೊನ್ನೆ ತಡರಾತ್ರಿ ಸ್ಥಳ ಮಹಜರು ವೇಳೆಯಲ್ಲಿ ನಟ ದರ್ಶನ್ ಮನೆಯಲ್ಲಿ ಇಟ್ಟಿದ್ದಂತ ಬಟ್ಟೆ, ಶೂ ಗಳನ್ನು ಸೀಜ್ ಮಾಡಿ, ಈಗ ಪರೀಕ್ಷೆಗಾಗಿ ಎಫ್ಎಸ್ಎಲ್ ಗೆ ಕಳುಹಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ: ಕೇಂದ್ರ ಸಚಿವ ಅಮಿತ್ ಶಾ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ: ಕೇಂದ್ರ ಸಚಿವ ಅಮಿತ್ ಶಾ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ

Share.
Exit mobile version