ಬೆಂಗಳೂರು: ನಟ ದರ್ಶನ್ ಫ್ಯಾನ್ಸ್ ಅಶ್ಲೀಲ ಸಂದೇಶ ಕಳುಹಿಸಿದ ವಿಚಾರವಾಗಿ ಈಗಾಗಲೇ ಮಹಿಳಾ ಆಯೋಗದಿಂದ ಸ್ವಯಂ ಪ್ರೇರಿತ ದೂರು ದಾಖಲಾಗಿದೆ. ಈ ಬೆನ್ನಲ್ಲೇ ಇಂದು ನಟಿ ರಮ್ಯಾ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ಖುದ್ದು ದೂರು ಸಲ್ಲಿಸಿದ್ದಾರೆ. ಈ ಮೂಲಕ ನಟ ದರ್ಶನ್ ಫ್ಯಾನ್ಸ್ ವಿರುದ್ಧ ಕಾನೂನು ಸಮರ ಸಾರಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ದರ್ಶನ್ ಮತ್ತೆ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಯಿದೆ. ಅದಕ್ಕೆ ಕಾರಣ ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿರುವ ಈ ಕೇಸ್‌ನ ವಿಚಾರಣೆ. ಹೈಕೋರ್ಟ್ ನೀಡಿದ್ದ ಜಾಮೀನಿನ ಬಗ್ಗೆ ಸುಪ್ರೀಂ ಕೋರ್ಟ್ ಅಸಮಧಾನವನ್ನು ಹೊರ ಹಾಕಿತ್ತು.
ಈ ಬೆನ್ನಲ್ಲೇ ರಮ್ಯಾ ಅದನ್ನು ಬೆಂಬಲಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಅಲ್ಲಿಂದ ದರ್ಶನ್ ಫ್ಯಾನ್ಸ್ ರಮ್ಯಾರನ್ನು ಅಶ್ಲೀಲ ಪದಗಳಿಂದ ಟೀಕಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ದರ್ಶನ್ ಅಭಿಮಾನಿಗಳಿಂದ ಅಶ್ಲೀಲ ಮೆಸೇಜುಗಳು ಬರುತ್ತವೆ ಎಂದು ನಟಿ ರಮ್ಯಾ ಆರೋಪಿಸಿದ್ದರು. ದರ್ಶನ್ ಅಭಿಮಾನಿಗಳ ವಿರುದ್ಧ ನಟಿ ರಮ್ಯಾ ತೀವ್ರವಾಗಿ ಕಿಡಿ ಕಾರಿದ್ದಾರೆ. ಇದೀಗ ನಟ ದರ್ಶನ್ ಅಭಿಮಾನಿಗಳಿಂದ ಅಶ್ಲೀಲ ಸಂದೇಶ ವಿಚಾರವಾಗಿ ಇಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನು ಭೇಟಿಯಾದಂತ ನಟಿ ರಮ್ಯಾ ದೂರು ನೀಡಿದ್ದಾರೆ.
ಇನ್ನು ಇದೆ ಈ ವಿಚಾರವಾಗಿ ಇದೀಗ ರಕ್ಷಿತಾ ಪ್ರೇಮ್ ಎಂಟ್ರಿ ಕೊಟ್ಟಿದ್ದು ನಟಿ ರಮ್ಯಾಗೆ ಟಾಂಗ್ ಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಹೌದು ನಟಿ ರಮ್ಯಾ ಗೆ ರಕ್ಷಿತಾ ಪ್ರೇಮ್ ಟಾಂಗ್ ಕೊಟ್ರ ಎನ್ನುವ ಸುದ್ದಿ ಹರಿದಾಡುತ್ತಿದೆ. ದರ್ಶನ್ ಪರ ನಟಿ ರಕ್ಷಿತಾ ಇದೀಗ ಬ್ಯಾಟ್ ಬೀಸಿದ್ದಾರೆ ಎನ್ನಲಾಗುತ್ತಿದೆ ಜನರ ಮಾನಸಿಕ ಆರೋಗ್ಯ ನೋಡೋಕೆ ಸಾಧ್ಯವಿಲ್ಲ. ದಯವಿಟ್ಟು ಯಾವಾಗಲೂ ದಯೆಯಿಂದ ಇರಿ ಎಂದು ರಕ್ಷಿತಾ ಪ್ರೇಮಾ ಅವರು ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ತಮ್ಮ ಖಾತೆಯಲ್ಲಿ ಸ್ಟೋರಿ ಹಾಕಿದ್ದಾರೆ. ಇದೀಗ ಈ ಒಂದು ವಿವಾದ ಎಲ್ಲಿಗೆ ಹೋಗಿ ನಿಲ್ಲುತ್ತೆ ಎನ್ನುವುದು ಕಾದು ನೋಡಬೇಕು.