ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವಂತ ನಟ ದರ್ಶನ್, ಜೈಲೂಟ ಬೇಡ. ಮನೆಯೂಟಕ್ಕೆ ಅವಕಾಶ ನೀಡುವಂತೆ ಕೋರ್ಟ್ ಗೆ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ನಡೆಸಿದಂತ ಕೋರ್ಟ್, ಮನೆಯೂಟಕ್ಕೆ ನಿರಾಕರಿಸಿದೆ. ಅಲ್ಲದೇ ರಿಟ್ ಅರ್ಜಿಯನ್ನು ವಜಾಗೊಳಿಸಿದೆ. ಹೀಗಾಗಿ ನಟ ದರ್ಶನ್ ಗೆ ಜೈಲೂಟವೇ ಫಿಕ್ಸ್ ಆದಂತೆ ಆಗಿದೆ.
ನಟ ದರ್ಶನ್ ಅವರು ಮನೆಯೂಟ ಕೋರಿ ಸಲ್ಲಿಸಲಾಗಿದ್ದಂತ ಅರ್ಜಿಯನ್ನು ಈ ಹಿಂದೆ ಕೋರ್ಟ್ ನಡೆಸಿತ್ತು. ಅಲ್ಲದೇ ತೀರ್ಪನ್ನು ಜುಲೈ.25ರ ಇಂದಿಗೆ ಕಾಯ್ದಿರಿಸಿತ್ತು. ಇಂದು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ನಲ್ಲಿ ಅರ್ಜಿಯ ವಿಚಾರಣೆ ನಡೆಸಿ, ಜೈಲು ಊಟ ಬೇಡ, ಮನೆಯೂಟ ಬೇಕು ಎನ್ನುವ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ಅಂದಹಾಗೇ ನಟ ದರ್ಶನ್ ಜೈಲು ಊಟದಿಂದ ತೂಕ ಕಳೆದುಕೊಳ್ಳುತ್ತಿದ್ದಾರೆ. ಆಗಾಗ ಪುಡ್ ಪಾಯಿಸನ್ ಕೂಡ ಆಗುತ್ತಿದೆ. ಹೀಗಾಗಿ ಮನೆ ಊಟ ಬೇಕು. ಹಾಸಿಗೆ ಬೇಕು. ಅದಕ್ಕೆ ಅನುಕೂಲ ಮಾಡಿಕೊಡುವಂತೆ ಕೋರ್ಟ್ ಗೆ ರಿಟ್ ಅರ್ಜಿಯನ್ನು ಸಲ್ಲಿಸಲಾಗಿತ್ತು. ಈ ಅರ್ಜಿಯ ವಾದ-ಪ್ರತಿವಾದವನ್ನು ಆಲಿಸಿದಂತ ನ್ಯಾಯಾಲಯವು, ಮನೆಯೂಟಕ್ಕೆ ನಿರಾಕರಿಸಿ, ಅರ್ಜಿಯನ್ನು ವಜಾಗೊಳಿಸಿದೆ.
ಇನ್ಮುಂದೆ ನಿಮ್ಮ ಭೂಮಿಗೂ ಸಿಗುತ್ತೆ ʻಆಧಾರ್ʼ : ʻಭೂ ಆಧಾರ್ʼ ಕುರಿತು ಇಲ್ಲಿದೆ ಮಾಹಿತಿ | Bhu Aadhar yojana
BIG NEWS: ಆ.1ರಿಂದ ‘ಆರೋಗ್ಯ ಇಲಾಖೆ’ಯ ನೌಕರರು ‘ರಿಯಲ್ ಟೈಮ್ ಅಟೆಂಡೆನ್ಸ್ ಸಿಸ್ಟಮ್ ಹಾಜರಾತಿ’ ದಾಖಲು ಕಡ್ಡಾಯ