ಬೆಂಗಳೂರು: ನಟ ದರ್ಶನ್ ಪತ್ನಿ, ಪುತ್ರನಿಗೆ ಸಾಮಾಜಿಕ ಜಾಲತಾಣಗಳಲ್ಲಿ ನಿಂದನೆ ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಬೆಂಗಳೂರು ಪೊಲೀಸ್ ಆಯುಕ್ತರಿಗೆ ರಾಜ್ಯ ಮಹಿಳಾ ಆಯೋಗದಿಂದ ಪತ್ರ ಬರೆದು ಸೂಚಿಸಲಾಗಿದೆ.
ಈ ಕುರಿತಂತೆ ಸಾಮಾಜಿಕ ಹೋರಾಟಗಾರರಾದಂತ ಬಿಆರ್ ಭಾಸ್ಕರ್ ಪ್ರಸಾದ್ ಅವರು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷ ಡಾ.ನಾಗಲಕ್ಷಿ ಅವರಿಗೆ ಪತ್ರದಲ್ಲಿ ಮನವಿ ಮಾಡಿದ್ದರು. ಈ ಮನವಿಗೆ ಪ್ರತಿಸ್ಪಂದಿಸಿರುವಂತ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಅವರು ಬೆಂಗಳೂರು ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ.
ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಬರೆದಿರುವಂತ ಪತ್ರದಲ್ಲಿ ಬಿ. ಆರ್ ಭಾಸ್ಕರ್ ಪುಸಾದ್, ಸಾಮಾಜಿಕ ಹೋರಾಟಗಾರರು, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ. ಇವರು ಆಯೋಗದಲ್ಲಿ ಅರ್ಜಿ ಸಲ್ಲಿಸಿರುತ್ತಾರೆ. ಅರ್ಜಿಯಲ್ಲಿ ಅರ್ಜಿದಾರರು ಖ್ಯಾತ ನಟ ದರ್ಶನ್ ರವರ ಧರ್ಮ ಪತ್ನಿಯಾದ ವಿಜಯಲಕ್ಷ್ಮೀ ದರ್ಶನ್ ಹಾಗೂ ಇವರ ಮಗನ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿ ಮಾನಸಿಕ ಕಿರುಕುಳ ನೀಡುತ್ತಿರುವುದಲ್ಲದೇ, ಸಾಮಾಜಿಕ ಜಾಲತಾಣಗಳಲ್ಲಿ ಹೆಣ್ಣಿನ ಸ್ವಾಭಿಮಾನ ಹಾಗೂ ಗೌರವಕ್ಕೆ ಧಕ್ಕೆ ತರುವಂತಹ ಪೋಸ್ಟ್ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಿ ನ್ಯಾಯ ಹಾಗೂ ರಕ್ಷಣೆ ಒದಗಿಸುವಂತೆ ಮನವಿ ಮಾಡಿರುತ್ತಾರೆ ಎಂದಿದ್ದಾರೆ.
ಆದ್ದರಿಂದ ಅರ್ಜಿದಾರರ ಅರ್ಜಿಯನ್ನು ನಿಯಮಾನುಸಾರ ಪರಿಶೀಲಿಸಿ ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ಆಯೋಗಕ್ಕೆ 15 ದಿನಗಳೊಳಾಗಿ ಸಲ್ಲಿಸುವಂತೆ ಕೋರಿದ್ದಾರೆ.
ಹೀಗಿದೆ ಇಂದು ಸಿಎಂ ಸಿದ್ಧರಾಮಯ್ಯ ಅಧ್ಯಕ್ಷತೆಯ ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಹೈಲೈಟ್ಸ್
BIG NEWS: ರಾಜ್ಯದ ‘ಆರೋಗ್ಯ ಇಲಾಖೆ’ಯ ಈ ಅಧಿಕಾರಿಗಳ ‘ನಿಯೋಜನೆ ರದ್ದು’: ರಾಜ್ಯ ಸರ್ಕಾರ ಮಹತ್ವದ ಆದೇಶ