ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ್ದಾರೆ. ಅವರನ್ನು ಇಂದು ಪತ್ನಿ ವಿಜಯಲಕ್ಷ್ಮೀ ಅವರು ಭೇಟಿಯಾಗಿ, ಬನಶಂಕರಿ ದೇವಿಯ ಪ್ರಸಾದವನ್ನು ನೀಡಿದರು ಎಂಬುದಾಗಿ ತಿಳಿದು ಬಂದಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಜೈಲುಪಾಲಾಗಿದೆ. ಜಾಮೀನಿಗಾಗಿ ಸಲ್ಲಿಸಿದ್ದಂತ ಅರ್ಜಿಯನ್ನು, ಮನೆ ಊಟಕ್ಕಾಗಿ ಸಲ್ಲಿಸಿದ್ದಂತ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿತ್ತು. ಹೀಗಾಗಿ ಜೈಲು, ಜೈಲೂಟವೇ ಗತಿಯಾಗಿತ್ತು.
ಹೀಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವಂತ ನಟ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮೀ ಅವರು, ಇಂದು ಅವರ ಸ್ನೇಹಿತರೊಂದಿಗೆ ಭೇಟಿಯಾದರು. ಇದೇ ಸಂದರ್ಭದಲ್ಲಿ ನಟ ದರ್ಶನ್ ಅವರಿಗೆ ಬನಶಂಕರಿ ತಾಯಿಗೆ ಪೂಜೆ ಮಾಡಿಸಿದಂತ ಪ್ರಸಾದ, ಹೂ ನೀಡಿ ಬಂದಿದ್ದಾರೆ ಎನ್ನಲಾಗುತ್ತಿದೆ.
ಸೇನಾ ಹೆಲಿಕಾಪ್ಟರ್ ಮೂಲಕ ಅಗರ್ತಲಾಗೆ ಬಂದಿಳಿದ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ: ವರದಿ